ಜಿಲ್ಲಾಡಳಿತ ಭವನವೇ 48 ಗಂಟೆಗಳ ಕಾಲ ಸೀಲ್ ಡೌನ್!
ಬೆಂಗಳೂರು, ಜುಲೈ 03 : ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಲ್ಲಾಡಳಿತ ಭವನವೇ ಸೀಲ್ ಡೌನ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುರುವಾರ 5 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 163.
Recommended Video
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಜುಲೈ 3 ಮತ್ತು 4ರಂದು ಸೀಲ್ ಡೌನ್ ಮಾಡಲಾಗಿದೆ. ಭವನದಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಜುಲೈ 1 ಮತ್ತು 2ರಂದು ಪತ್ತೆಯಾಗಿತ್ತು.
ಭವನದ ಎಲ್ಲಾ ವರ್ಗದ ಸಿಬ್ಬಂದಿಗಳು, ಅಧಿಕಾರಿಗಳು ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕಕ್ಕೆ ಬಂದಿರುತ್ತಾರೆ. ಆದ್ದರಿಂದ, ಭವನದ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕಿದೆ. ಈ ಪರಿಸ್ಥಿತಿ ಹಿನ್ನಲೆಯಲ್ಲಿ ಭವನವನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಸೀಲ್ ಡೌನ್ ಅವಧಿಯಲ್ಲಿ ಯಾವುದೇ ಸಿಬ್ಬಂದಿ, ಅಧಿಕಾರಿಗಳು ಕಚೇರಿಗೆ ಪ್ರವೇಶ ಮಾಡುವಂತಿಲ್ಲ. ಎಲ್ಲರೂ ಮನೆಯಿಂದಲೇ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಕಚೇರಿಯ ಭದ್ರತಾ ಸಿಬ್ಬಂದಿ ಮಾತ್ರ ಕಟ್ಟಡದ ಹೊರಭಾಗದಲ್ಲಿ ಹಾಜರಿದ್ದು ಕಾವಲು ಕಾಯಲು, ಕಚೇರಿಯ ಹೊರ ಆವರಣದ ಗೇಟ್‌ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.












Click it and Unblock the Notifications