ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿಲ್ಲಾಡಳಿತ ಭವನವೇ 48 ಗಂಟೆಗಳ ಕಾಲ ಸೀಲ್ ಡೌನ್!

|
Google Oneindia Kannada News

ಬೆಂಗಳೂರು, ಜುಲೈ 03 : ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಲ್ಲಾಡಳಿತ ಭವನವೇ ಸೀಲ್ ಡೌನ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುರುವಾರ 5 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 163.

Recommended Video

China warns UK ,ಬ್ರಿಟಿಷರಿಗೂ ಹಾಂಗ್ ಕಾಂಗ್ ವಿಚಾರದಲ್ಲಿ ಎಚ್ಚರಿಕೆ ಕೊಟ್ಟ ಚೀನಾ | Oneindia Kannada

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಜುಲೈ 3 ಮತ್ತು 4ರಂದು ಸೀಲ್ ಡೌನ್ ಮಾಡಲಾಗಿದೆ. ಭವನದಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಜುಲೈ 1 ಮತ್ತು 2ರಂದು ಪತ್ತೆಯಾಗಿತ್ತು.

ಕೋವಿಡ್-19: ಚೇತರಿಸಿಕೊಂಡ ಪ್ರಕರಣಗಳ ಅಗ್ರ 15 ರಾಜ್ಯಗಳು ಇಲ್ಲಿವೆಕೋವಿಡ್-19: ಚೇತರಿಸಿಕೊಂಡ ಪ್ರಕರಣಗಳ ಅಗ್ರ 15 ರಾಜ್ಯಗಳು ಇಲ್ಲಿವೆ

ಭವನದ ಎಲ್ಲಾ ವರ್ಗದ ಸಿಬ್ಬಂದಿಗಳು, ಅಧಿಕಾರಿಗಳು ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕಕ್ಕೆ ಬಂದಿರುತ್ತಾರೆ. ಆದ್ದರಿಂದ, ಭವನದ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕಿದೆ. ಈ ಪರಿಸ್ಥಿತಿ ಹಿನ್ನಲೆಯಲ್ಲಿ ಭವನವನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ!ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ!

Bengaluru Rural Deputy Commissioner Office Seal Down

ಸೀಲ್ ಡೌನ್ ಅವಧಿಯಲ್ಲಿ ಯಾವುದೇ ಸಿಬ್ಬಂದಿ, ಅಧಿಕಾರಿಗಳು ಕಚೇರಿಗೆ ಪ್ರವೇಶ ಮಾಡುವಂತಿಲ್ಲ. ಎಲ್ಲರೂ ಮನೆಯಿಂದಲೇ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿಯ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕುಬಿಬಿಎಂಪಿಯ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು

ಕಚೇರಿಯ ಭದ್ರತಾ ಸಿಬ್ಬಂದಿ ಮಾತ್ರ ಕಟ್ಟಡದ ಹೊರಭಾಗದಲ್ಲಿ ಹಾಜರಿದ್ದು ಕಾವಲು ಕಾಯಲು, ಕಚೇರಿಯ ಹೊರ ಆವರಣದ ಗೇಟ್‌ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.

English summary
After few employees tested positive for the COVID - 19 Bengaluru rural deputy commissioner office seal down on July 3 and 4, 2020. All employees directed to work from home.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X