Bengaluru Rural Constituency: ಡಿಕೆ ಸುರೇಶ್ ಕಟ್ಟಿಹಾಕಲು ಎಚ್‌ಡಿ ಕುಮಾರಸ್ವಾಮಿ-ಅಮಿತ್ ಶಾ ಮಾಸ್ಟರ್ ಪ್ಲ್ಯಾನ್!

ಬೆಂಗಳೂರು, ಮಾರ್ಚ್ 17: ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕರು ಘಂಟಾಘೋಷವಾಗಿ ಹೇಳುತ್ತಾ ಓಡಾಡುತ್ತಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತೋರಿಸುತ್ತಿವೆ. ಇದರ ಬೆನ್ನಲ್ಲೇ ಈಗ ಇರುವ ಒಂದೇ ಒಂದು ಕಾಂಗ್ರೆಸ್ ಸ್ಥಾನವನ್ನು ಕಸಿದುಕೊಳ್ಳಲು ಬಿಜೆಪಿ - ಜೆಡಿಎಸ್ ಮೈತ್ರಿ ಸಿದ್ಧವಾಗಿದೆ.

ಕಾಂಗ್ರೆಸ್‌ಗೆ ಈಗ ಇರುವುದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಮಾತ್ರ. ಇದನ್ನು ಕಿತ್ತುಕೊಂಡು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ನಿರ್ನಾಮ ಮಾಡುತ್ತೇವೆ ಎಂದು ಬಿಜೆಪಿ- ಜೆಡಿಎಸ್ ಮೈತ್ರಿ ಟೊಂಕಕಟ್ಟಿ ನಿಂತಿವೆ. ಈ ಬಾರಿಯೂ ಹಾಲಿ ಸಂಸದ ಡಿಕೆ ಸುರೇಶ್ ಅವರನ್ನೇ ಕಾಂಗ್ರೆಸ್ ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಎಚ್ ಡಿ ದೇವೇಗೌಡ ಅವರ ಅಳಿಯ ಡಾ, ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ.

Bengaluru Rural Lok Sabha Constituency BJP- JDS Master plan to defeat DK Suresh

ಡಿಕೆ ಸುರೇಶ್ ಸೋಲಿಸಲು ಅಮಿತ್ ಶಾ ಪ್ಲ್ಯಾನ್!

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಹಾಲಿ ಸಂಸದ ಡಿಕೆ ಸುರೇಶ್ ಭದ್ರಕೋಟೆ ಆಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗೆ ಗೆಲುವು ಅಷ್ಟು ಸುಲಭವಲ್ಲ. ಆದರೆ, ಹೇಗಾದರೂ ಮಾಡಿ ಕಾಂಗ್ರೆಸ್‌ ಅನ್ನು ಸೋಲಿಸಬೇಕು ಎಂದು ಪಣ ತೊಟ್ಟಿವೆ.

ಹೀಗಾಗಿಯೇ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಡಾ.ಸಿ ಎನ್ ಮಂಜುನಾಥ್ ಗೆಲುವಿಗಾಗಿ ಪ್ಲ್ಯಾನ್ ಮಾಡುತ್ತಿವೆ. ಮಾಜಿ ಮುಖ್ಯಮಂತ್ರಿ ಎಚ್​​.ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಚಾಣಕ್ಯ ಅಮಿತ್​ ಶಾ ಮಾತುಕತೆ ನಡೆಸಿದ್ದಾರೆ. ಮೈತ್ರಿ ಅಭ್ಯರ್ಥಿ ಸಿ ಎನ್ ಮಂಜುನಾಥ್ ಪರ ಭರ್ಜರಿ ಪ್ರಚಾರಕ್ಕೆ ಪ್ಲ್ಯಾನ್ ಮಾಡಿದ್ದಾರೆ.

ಮಂಜುನಾಥ್​ ಅವರನ್ನು ಗೆಲ್ಲಿಸೋದು ನನ್ನ ಜವಾಬ್ದಾರಿ: ಅಮಿತ್​ ಶಾ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್​​ ಮಂಜುನಾಥ್​ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸೋದು ನನ್ನ ಜವಾಬ್ದಾರಿ ಎಂದು ಅಮಿತ್​ ಶಾ ಅವರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಾತು ಕೊಟ್ಟಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಒಂದು ಸ್ಥಾನವನ್ನು ಕೂಡ ಗೆಲ್ಲಬೇಕು ಎಂಬ ಪ್ಲ್ಯಾನ್ ಮಾಡಿದ್ದಾರೆ.

Bengaluru Rural Lok Sabha Constituency BJP- JDS Master plan to defeat DK Suresh

ಡಿಕೆ ಸುರೇಶ್ ಕುಮಾರ್ ಅವರನ್ನು ಸೋಲಿಸುವ ಪ್ಲ್ಯಾನ್‌ಗಾಗಿಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಎಚ್ ಡಿ ಕುಮಾರಸ್ವಾಮಿ ತಮ್ಮ ತಂಡದ ಜೊತೆಗೆ ಭೇಟಿಯಾಗಿದ್ದಾರೆ. ಭೇಟಿ ವೇಳೆ ರಾಜ್ಯ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹಾಗೂ ಅನಸೂಯ ಮಂಜುನಾಥ್ ಅವರು ತೆರಳಿದ್ದರು.

ಇನ್ನು, ಬೆಂಗಳೂರು ಗ್ರಾಮಾಮತರದಲ್ಲಿ ಮಂಜುನಾಥ್ ಸ್ಪರ್ಧೆ ಬಗ್ಗೆ ಡಿಕೆ ಸಹೋದರರು ತಲೆ ಕೆಡಿಸಿಕೊಂಡಿಲ್ಲ. ನಮ್ಮ ಕ್ಷೇತ್ರದಲ್ಲಿ ನಾವು ಗೆದ್ದೆ ಗೆಲ್ಲುವತ್ತೇವೆ. ಬಮದವರು ಹಾಗೆ ಹೋಗುತ್ತಾರೆ ಎಂದಿದ್ದಾರೆ. ಜೊತೆಗೆ ಮಂಜುನಾಥ್ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಅಸಮಾಧಾನವಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 25 ಜೆಡಿಎಸ್‌ಗೆ ಮೂರು ಕ್ಷೇತ್ರಗಳನ್ನ ನೀಡುವ ಕುರಿತು ಮಾತುಕತೆಯಾಗಿದೆ. ಆದರೆ, ಈಗಿನ ಹೊಸ ಅಪ್‌ಡೇಟ್ ಪ್ರಕಾರ ಎರಡು ಸ್ಥಾನ ಮಾತ್ರ ಜೆಡಿಎಸ್‌ಗೆ ಎನ್ನಲಾಗುತ್ತಿದೆ. ಈ ಬಗ್ಗೆ ಅಂತಿಮ ಚರ್ಚೆ ನಡೆಯುತ್ತಿದೆ. ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಯಿದ್ದರು. ಆದರೆ, ಈಗ ಕೋಲಾರ ಮತ್ತೆ ಬಿಜೆಪಿ ಪಾಲಾಗಲಿದೆ ಎಂಬ ಮಾಹಿತಿಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+