Get Updates
Get notified of breaking news, exclusive insights, and must-see stories!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಇವರಿಗೆ?

ಬಿಜೆಪಿ ನಾಯಕರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಗೆಲ್ಲಲೇಬೇಕು ಎಂಬ ಹಠ ಇಟ್ಟುಕೊಂಡು, ಡಾ. ಸಿ.ಎನ್. ಮಂಜುನಾಥ್ ಅವರನ್ನು ಡಿ.ಕೆ. ಸುರೇಶ್ ಅವರ ವಿರುದ್ಧ ಕಣಕ್ಕೆ ಇಳಿಸಿದ್ದರು. ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಹೊರ ಬೀಳಲಿದೆ. ಹಾಗಾದರೆ, ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರ ಗೆದ್ದು ಬೀಗುವುದು ಯಾರು? ಬನ್ನಿ ತಿಳಿಯೋಣ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಭಾರತದ ಮೂಲೆ ಮೂಲೆಯಲ್ಲೂ ಸದ್ದನ್ನ ಮಾಡಿತ್ತು. ಯಾಕಂದ್ರೆ ಈ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನು ಕಟ್ಟಿಹಾಕಲು, ನೇರವಾಗಿ ಬಿಜೆಪಿ ಕೇಂದ್ರ ನಾಯಕರೇ ಸಿದ್ಧತೆ ಮಾಡಿದ್ದರು. ಇದು ಮಾತ್ರವಲ್ಲ ಜೆಡಿಎಸ್ ವರಿಷ್ಠ, ಎಚ್.ಡಿ. ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಅವರನ್ನೇ ಡಿ.ಕೆ. ಸುರೇಶ್ ಅವರ ವಿರುದ್ಧ ಕಣಕ್ಕೆ ಇಳಿಸಿದ್ದರು. ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ಅವರು ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಹಾಗಾದ್ರೆ ಈ ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಮುಂದೆ ಓದಿ.

Bengaluru Rural Lok Sabha Election 2024 Results Who will Win D K Suresh Vs Dr C N Manjunath

ಡಿ.ಕೆ. ಸುರೇಶ್ ಗೆಲ್ಲುವುದು ಗ್ಯಾರಂಟಿ?

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ, ಕಾಂಗ್ರೆಸ್ VS ಬಿಜೆಪಿ ನೇರವಾಗಿ ಹಣಾಹಣಿ ನಡೆಸಿವೆ. ಅತ್ತ ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಸತತ 4ನೇ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದ್ದರೆ, ಮತ್ತೊಂದ್ಕಡೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಪ್ರಯತ್ನಿಸಿದ್ದರು. ಹೀಗಿದ್ದಾಗ ಗೆಲುವಿಗೆ ಹತ್ತಿರ ಇರುವುದು ಡಿ.ಕೆ. ಸುರೇಶ್ ಅವರು ಎಂಬ ಮಾತುಗಳು ಈ ಕ್ಷೇತ್ರ ವ್ಯಾಪ್ತಿಯಲ್ಲಿ ಇದೀಗ ಓಡಾಡುತ್ತಿವೆ.

ಅದ್ರಲ್ಲೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಗ್ಗೆ ಅಪಾರ ಜ್ಞಾನ ಹೊಂದಿರುವ, ಡಿ.ಕೆ. ಸುರೇಶ್ ಅವರು ಕ್ಷೇತ್ರದ ಇಂಚಿಂಚು ಜಾಗ ಬಲ್ಲವರು. ಇದೇ ಅವರಿಗೆ ಮತದಾರರನ್ನು ಸೆಳೆಯಲು ಸಹಾಯ ಮಾಡಿದೆ ಎಂಬ ಮಾತು ಓಡಾಡುತ್ತಿದೆ. ಮತ್ತೊಂದ್ಕಡೆ, ಡಾ. ಸಿ.ಎನ್. ಮಂಜುನಾಥ್ ಪರವಾಗಿಯೂ ಮಾತುಗಳು ಕೇಳಿಬರುತ್ತಿವೆ. ಹೀಗೆ ಈ ಕ್ಷೇತ್ರದ ಫಲಿತಾಂಶದ ಬಗ್ಗೆ ಎರಡೂ ರೀತಿಯ ಮಾತು ಈಗ ಕೇಳಿಬರುತ್ತಿದ್ದರೂ, ಈ ರೇಸ್‌ನಲ್ಲಿ ಡಿ.ಕೆ. ಸುರೇಶ್ ಮುಂದಿದ್ದಾರೆ.

ಬೆಂಗಳೂರು ಗ್ರಾ. ಕ್ಷೇತ್ರದ ಇತಿಹಾಸ

2009ರ ತನಕ 'ಕನಕಪುರ ಲೋಕಸಭಾ ಕ್ಷೇತ್ರ' ಎಂಬ ಹೆಸರು ಹೊಂದಿದ್ದ ಈ ಕ್ಷೇತ್ರವನ್ನು 2009 ಲೋಕಸಭಾ ಚುನಾವಣೆ ಸಮಯದಲ್ಲಿ 'ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ' ಎಂದು ಮರು ನಾಮಕರಣ ಮಾಡಲಾಗಿತ್ತು. 2009ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರದಲ್ಲಿ ಗೆದ್ದು ಸಂಸದರಾಗಿ ಆಯ್ಕೆ ಆಗಿದ್ದರು. ಮೊದಲ ಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದರೂ ಆ ನಂತರ ಸತತ ಸೋಲು ಕಂಡಿದೆ.

ಆ ನಂತರ 2013ರ ಉಪಚುನಾವಣೆ ಸಮಯದಲ್ಲಿ ಡಿ.ಕೆ. ಸುರೇಶ್ ಗೆದ್ದು ಬೀಗಿದರು. ಈ ಮೂಲಕ 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಗೆದ್ದು ಸತತವಾಗಿ, 3 ಬಾರಿ ಡಿ.ಕೆ. ಸುರೇಶ್ ಸಂಸದರಾಗಿ ಆಯ್ಕೆ ಆಗಿದ್ದರು. ಈಗ 4ನೇ ಬಾರಿಗೆ ಆಯ್ಕೆ ಆಗುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಒಟ್ನಲ್ಲಿ ಯಾರು ಗೆಲ್ಲುತ್ತಾರೆ? ಯಾರಿಗೆ ಸೋಲು? ಎಂಬುದರ ಪಕ್ಕಾ ಫಲಿತಾಂಶ ಜೂನ್ 4 ರಂದು ಹೊರಬೀಳಲಿದೆ.

ಯಾವೆಲ್ಲಾ ಕ್ಷೇತ್ರಗಳು ಸೇರ್ಪಡೆ ಆಗುತ್ತವೆ?

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ, ವಿಶಾಲವಾದ ವ್ಯಾಪ್ತಿ ಪ್ರದೇಶ ಹೊಂದಿದೆ. ಹೀಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಕುಣಿಗಲ್ ವಿಧಾನಸಭಾ ಕ್ಷೇತ್ರ ಸೇರಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರ, ಮಾಗಡಿ ವಿಧಾನಸಭಾ ಕ್ಷೇತ್ರ & ರಾಮನಗರ ವಿಧಾನಸಭಾ ಕ್ಷೇತ್ರ, ಕನಕಪುರ ವಿಧಾನಸಭಾ ಕ್ಷೇತ್ರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳು ಸೇರುತ್ತವೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಹೀಗಾಗಿ ಇಲ್ಲಿ ಗೆಲುವಿಗಾಗಿ ಭರ್ಜರಿ ಪೈಪೋಟಿ ಕೂಡ ನಡೆದಿತ್ತು.

ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ?

ಈಗಿರುವ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ವರಿಷ್ಠರು ಅಂದ್ರೆ ಹೈಕಮಾಂಡ್ ನಾಯಕರಿಗೆ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ಮಾಡುವ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ಕರ್ನಾಟಕ ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಮಾಡಬೇಕು ಎಂಬ ಬೇಡಿಕೆಯನ್ನ ಈ ಮೊದಲಿನಿಂದಲು ಮುಂದಿಡುತ್ತಿದ್ದಾರೆ ನಾಯಕರು. ಇದೀಗ ಆ ಮಾತಿಗೆ ಮನ್ನಣೆ ನೀಡಿ, ಕರ್ನಾಟಕ ರಾಜ್ಯದಲ್ಲಿನ ಮುಖ್ಯಮಂತ್ರಿ ಸ್ಥಾನ ಬದಲಾಯಿಸಲು ಕಾಂಗ್ರೆಸ್ ನಾಯಕರು ಕರ್ನಾಟಕಕ್ಕೆ ಬರ್ತಾರೆ ಎನ್ನಲಾಗ್ತಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ, ಹೀಗಾಗಿ ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರಾ? ಎಂಬ ಕುತೂಹಲ ಗಮನ ಸೆಳೆಯುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+