ಬೆಂಗಳೂರು ಸಮೀಪದ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆ: ಡಾ. ರಾಜ್‌ಕುಮಾರ್ ಅವರ ಕನಸಿಗೂ ಜೀವ!
ಕರ್ನಾಟಕ ಸರ್ಕಾರವು ಹೆಸರು ಬದಲಾವಣೆಯ ಪರ್ವವನ್ನು ಮುಂದುವರಿಸಿದೆ. ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂವನ್ನು ಕರ್ನಾಟಕದಲ್ಲಿ ಎಲ್ಲೆಲ್ಲಿ ಬಳಸುವುದಕ್ಕೆ ಸಾಧ್ಯವಿದೆಯೋ ಅಲ್ಲೆಲ್ಲವೂ ಬಳಸಲಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈ ಹಿಂದೆಯೇ ಹೇಳಿದ್ದರು. ಅದರಂತೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾವಣೆ ಮಾಡಲಾಗಿದೆ. ಇದರೊಂದಿಗೆ ಬಾಗೇಪಲ್ಲಿ ವಿಚಾರದಲ್ಲಿ ಡಾ. ರಾಜ್‌ಕುಮಾರ್ ಅವರ ಕನಸನ್ನೂ ರಾಜ್ಯ ಸರ್ಕಾರ ಈಡೇರಿಸಿದೆ ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ರಿಯಲ್ ಎಸ್ಟೇಟ್‌ನಲ್ಲಿ ಭಾರೀ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಇದೀಗ ಬೆಂಗಳೂರಿನ ಸುತ್ತಮುತ್ತಲಿನ ಹೆಸರುಗಳನ್ನೂ ಬದಲಾವಣೆ ಮಾಡಲಾಗುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾವಣೆ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಇಂದು (ಜುಲೈ 02) ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾವಣೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಕಳೆದ ಮೂರು ತಿಂಗಳ ಅವಧಿಯಲ್ಲಿ ಎರಡು ಪ್ರಮುಖ ಜಿಲ್ಲೆಗಳ ಹೆಸರು ಬದಲಾವಣೆ ಆದಂತೆ ಆಗಿದೆ.

ಬೆಂಗಳೂರು ಗ್ರಾಮಾಂತರಕ್ಕೆ ಭರ್ಜರಿ: ಇನ್ನು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಎರಡು 20 ವರ್ಷಗಳಿಂದಲೂ ಭೂಮಿಗೆ ಒಳ್ಳೆಯ ಬೆಲೆ ಇದೆ. ಈ ಭಾಗದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಮೇಲೆ ಭೂಮಿಯ ಬೆಲೆ ಹೆಚ್ಚಳವಾಗಿದೆ. ಇದೀಗ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಎಂದು ಬದಲಾವಣೆ ಮಾಡಿರುವುದು ರಿಯಲ್ ಎಸ್ಟೇಟ್‌ಗೆ ಭರ್ಜರಿ ಬೂಸ್ಟ್ ನೀಡಿದೆ. ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಇನ್ಮುಂದೆ ಬೆಂಗಳೂರು ಗ್ರಾಮಾಂತರ - ನೂತನ ಬೆಂಗಳೂರು ಉತ್ತರ ಪ್ರದೇಶಕ್ಕೂ ವಿಸ್ತರಣೆಯಾಗಲಿದೆ ಎಂದು ರಿಯಲ್ ಎಸ್ಟೇಟ್ ತಜ್ಞರು ಅಂದಾಜಿಸಿದ್ದಾರೆ.
ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಯಾವುದೇ ಹೆಚ್ಚು ಚರ್ಚೆ ಇಲ್ಲದೆ. ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಎಂದು ಬದಲಾಯಿಸಲಾಗಿದೆ.
ಡಾ.ರಾಜ್‌ಕುಮಾರ್ ಅವರ ಕನಸಿಗೂ ಜೀವ!
ಇನ್ನು ರಾಜ್ಯ ಸರ್ಕಾರವು ಇಂದು ಮತ್ತೊಂದು ನಿರ್ಧಾರವನ್ನು ತೆಗೆದುಕೊಂಡಿದ್ದು. ಡಾ.ರಾಜ್‌ಕುಮಾರ್ ಅವರ ಕನಸನ್ನು ಈಡೇರಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಬದಲಾಯಿಸಲಾಗಿದೆ. ಇನ್ಮುಂದೆ ಬಾಗೇಪಲ್ಲಿ ಭಾಗ್ಯನಗರ ಎಂದಾಗಲಿದೆ. ಇದು ಡಾ. ರಾಜ್‌ಕುಮಾರ್ ಅವರ ಕನಸಾಗಿತ್ತು. ಬಾಗೇಪಲ್ಲಿ ಭಾಗ್ಯನಗರವಾಗಿ ಇಲ್ಲಿ ಎಲ್ಲಾ ಭಾಗ್ಯವೂ ಸೇರಲಿ ಎಂದು ವರ ನಟ ಡಾ. ರಾಜ್‌ಕುಮಾರ್ ಅವರು ಬರೋಬ್ಬರಿ 38 ವರ್ಷಗಳ ಹಿಂದೆಯೇ ಹೇಳಿದ್ದರು. ಇದೀಗ ಡಾ. ರಾಜ್‌ಕುಮಾರ್ ಅವರ ಕನಸು ಈಡೇರಿದ್ದು. ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೂ ಅನುಮೋದನೆ ನೀಡಲಾಗಿದೆ. ಈ ಹೆಸರು ಬದಲಾವಣೆ ಮಾಡಬೇಕು ಎನ್ನುವುದು ಹಲವು ವರ್ಷಗಳ ಕನಸಾಗಿತ್ತು. ಪಲ್ಲಿ ಎನ್ನುವುದು ತೆಲುಗು ಭಾಷೆಯಲ್ಲಿ ಹಳ್ಳಿ ಎಂದಾಗುತ್ತದೆ.












Click it and Unblock the Notifications