Bengaluru Second Airport: 2ನೇ ವಿಮಾನ ನಿಲ್ದಾಣ ಚರ್ಚೆ; ಹೊಸ ಅಪ್ಡೇಟ್ಸ್ ಕೊಟ್ಟ ಎಂ.ಬಿ ಪಾಟೀಲ್ , ವೈರಲ್ ವಿಡಿಯೋ
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಚರ್ಚೆ ನಡೆಯುತ್ತಲ್ಲೇ ಇದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲೀ ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ. ಇದೀಗ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಚರ್ಚೆಯ ನಡುವೆಯೇ ಸಚಿವ ಎಂ.ಬಿ ಪಾಟೀಲ್ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವು ಕಳೆದ ಒಂದು ವರ್ಷದಿಂದಲೂ ಚರ್ಚೆ ಆಗುತ್ತಿದೆ. ಆದರೆ, ಕೇಂದ್ರ ಸರ್ಕಾರವು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪವಿದೆ. ಇದೀಗ ಸಚಿವ ಎಂ.ಬಿ ಪಾಟೀಲ್ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕವು ವಿಸ್ತಾರವಾದ ವಾಯು ಜಾಲ (Air Network) ವನ್ನು ನಿರ್ಮಿಸುತ್ತಿದೆ ಎಂದಿರುವ ಸಚಿವ ಎಂ.ಬಿ ಪಾಟೀಲ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ, ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಪ್ರಾದೇಶಿಕ ವಾಯು ಸಂಪರ್ಕವನ್ನು / ಏರ್ ನೆಟ್‌ವರ್ಕ್ ಹೆಚ್ಚಿಸಲು ಪ್ರಮುಖ ಪ್ರಯತ್ನವನ್ನು ಕೈಗೊಳ್ಳುತ್ತಿದೆ. ವೇಗವಾದ, ಹೆಚ್ಚು ಪರಿಣಾಮಕಾರಿ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಹೊಸ ಪ್ರಾದೇಶಿಕ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತಿದೆ ಮತ್ತು ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮುಂದುವರಿದು ಕರ್ನಾಟಕದ ಜಿಲ್ಲೆಗಳನ್ನು ಬೆಂಗಳೂರು ಮತ್ತು ನೆರೆಯ ರಾಜ್ಯಗಳೊಂದಿಗೆ ಉತ್ತಮವಾಗಿ ಸಂಪರ್ಕಿಸುವುದು, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಮಗ್ರ ಅಭಿವೃದ್ಧಿಗೆ ಹೊಸ ಮಾರ್ಗಗಳನ್ನು ತೆರೆಯುವುದು ಇದರ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಈ ಕಾರಣಕ್ಕಾಗಿ ವಿವಿಧ ಪ್ರಾದೇಶಿಕ ವಾಯು ಕೇಂದ್ರಗಳ ಅಭಿವೃದ್ಧಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಅಲ್ಲದೇ ಜಾಗತಿಕ ಸಂಪರ್ಕ / ಪ್ರವೇಶವನ್ನು ಮತ್ತಷ್ಟು ಬಲಪಡಿಸಲು, ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಹ ನಿರ್ಮಿಸಲಾಗುತ್ತಿದೆ, ಇದು ರಾಜ್ಯವನ್ನು ಭವಿಷ್ಯದ ಬೆಳವಣಿಗೆಗೆ ಸಿದ್ಧಪಡಿಸುತ್ತದೆ ಮತ್ತು ದಕ್ಷಿಣ ಭಾರತದಲ್ಲಿ ಪ್ರಮುಖ ವಾಯುಯಾನ ಕೇಂದ್ರವಾಗಿ ಮಾರ್ಪಡಿಸಲಿದೆ. ಕರ್ನಾಟಕವು ಭವಿಷ್ಯದ ಮೂಲಸೌಕರ್ಯ ಅಭಿವೃದ್ಧಿಯ ಮೂಲಕ ತನ್ನ ವಾಯುಯಾನ / ವಿಮಾನಗಳ ಸೇವೆಯನ್ನು ಹೇಗೆ ಮರುರೂಪಿಸುತ್ತಿದೆ ಎಂಬುದನ್ನು ನೋಡಲು ವೀಡಿಯೊವನ್ನು ವೀಕ್ಷಿಸಿ ಎಂದೂ ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
Karnataka is building an expansive air network
— M B Patil (@MBPatil) October 13, 2025
Under the leadership of Hon’ble Chief Minister Sri @Siddaramaiah, the Government of Karnataka is undertaking a major push to enhance regional air connectivity across the state. New regional airports are being established, and… pic.twitter.com/uaUyZiTTk8
ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಯಾವಾಗ: ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುತ್ತಿರುವುದಾಗಿ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರಾದರೂ, ಈ ಟ್ವೀಟ್‌ನಲ್ಲಿ ಯಾವುದೇ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿಲ್ಲ. ಹೀಗಾಗಿ, ಜನರು ಸಹ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಪ್ಡೇಟ್ ಕೊಡಿ ಎಂದು ಸಚಿವರಿಗೆ ಕಮೆಂಟ್ ಮಾಡಿ ಪ್ರಶ್ನೆ ಮಾಡಿದ್ದಾರೆ.












Click it and Unblock the Notifications