ಬೆಂಗಳೂರು ಈ ಕಾರಣಕ್ಕೆ ಕುಖ್ಯಾತಿ: ಟ್ರಾಫಿಕ್ ಪೊಲೀಸರು ನಿಷ್ಪ್ರಯೋಜಕರು ಎಂದ ಯುಪಿ ಸಂಸದ!

Bengaluru Traffic Jam: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಜಾಮ್ ಸಮಸ್ಯೆ ವಿಪರೀತವಾಗಿದೆ. ಅಲ್ಲದೇ, ಇದೀಗ ಬೆಂಗಳೂರು ಸಮಸ್ಯೆ ವಿಚಾರವು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಉತ್ತರ ಪ್ರದೇಶದ ಸಂಸದ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಆಕ್ರೋಶಕ್ಕೂ ಗುರಿಯಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರಿದ್ದು. ಇದೀಗ ಈ ಪೋಸ್ಟ್‌ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ದೆಹಲಿಯಲ್ಲಿ ನಡೆಯಲಿರುವ ಸಂಸತ್ ಅಧಿವೇಶನಕ್ಕೆ ಹೋಗುವುದಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ ಡಾ. ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದು, ಸಹಾಯಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿರುವುದಾಗಿ ಅವರು ಹೇಳಿದ್ದಾರೆ. ಸಂಸದ ರಾಜೀವ್ ರೈ ಅವರು ಬೆಂಗಳೂರಿನ ಟ್ರಾಫಿಕ್ ಕಂಟ್ರೋಲ್ ಹಾಗೂ ಟ್ರಾಫಿಕ್ ಪೊಲೀಸರ ಕಾರ್ಯವೈಖರಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವ ಬರಹವು ಸಹ ಇದೀಗ ವೈರಲ್ ಆಗುತ್ತಿದೆ.

Bengaluru s Infamous Traffic UP MP Slams City Police as Useless

ಸಂಸದ ರಾಜೀವ್ ರೈ ಟ್ವೀಟ್

ಉತ್ತರ ಪ್ರದೇಶದ ಎಸ್ಪಿ ಸಂಸದ ರಾಜೀವ್ ರೈ ಅವರು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ

ಕ್ಷಮಿಸಿ, ನಿಮ್ಮ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆ ಅತ್ಯಂತ ಕೆಟ್ಟದಾಗಿದೆ. ನಿಮ್ಮ ಟ್ರಾಫಿಕ್ ಪೊಲೀಸರು ಅತ್ಯಂತ ಬೇಜವಾಬ್ದಾರಿಯುತ, ನಿಷ್ಪ್ರಯೋಜಕರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ, ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಕಳೆದ ಒಂದು ಗಂಟೆಯಿಂದ ನಾವು ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿದ್ದೇವೆ. ನಾವು ವಿಮಾನ ತಪ್ಪಿಸಿಕೊಳ್ಳಲಿದ್ದೇವೆ. ನಾಳೆ ನಾನು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಬೇಕಾಗಿದೆ. ಈ ಪ್ರದೇಶದ ಸುತ್ತಲೂ ಒಬ್ಬೇ ಒಬ್ಬರು ಪೊಲೀಸರು ಸಹ ಕಾಣುತ್ತಿಲ್ಲ.

ಈ ಸುಂದರ ನಗರದ ಹೆಸರು ಮತ್ತು ವರ್ಚಸ್ಸು ಹಾಳು ಮಾಡಲು ಈ ಅಸಮರ್ಥ ಅಧಿಕಾರಿಗಳು ಸಾಕು. ನಿಸ್ಸಂದೇಹವಾಗಿ ಈಗ ಬೆಂಗಳೂರು ಸಂಚಾರವು ಅತ್ಯಂತ ಕೆಟ್ಟ ಟ್ರಾಫಿಕ್ ಸಮಸ್ಯೆಗೆ ಕುಖ್ಯಾತಿಯನ್ನು ಗಳಿಸಿದೆ ಎಂದು ಸಿಎಂ, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+