Bengaluru Roads: ₹1700 ಕೋಟಿ ವೆಚ್ಚದ ವೈಟ್ ಟಾಪಿಂಗ್ ಯೋಜನೆ: ಈವರೆಗೆ ರಸ್ತೆ ನಿರ್ಮಿಸಿದ್ದೆಷ್ಟು? ಅಪ್ಡೇಟ್ಸ್
ಬೆಂಗಳೂರು, ನವೆಂಬರ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ರಸ್ತೆ ದೀರ್ಘಾವಧಿ ಬಾಳಿಕೆ, ವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದಾಗಿ 1700 ಕೋಟಿ ರೂ ವೆಚ್ಚದಲ್ಲಿ 220.68 ಕಿಲೋ ಮೀಟರ್ ಉದ್ದದ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಗೆ ಅನುಮೋದನೆ ನೀಡಿತ್ತು. ಹಾಗಾದರೆ ಈವರೆಗೆ ಎಷ್ಟು ಕಿಲೋ ಮೀಟರ್ ರಸ್ತೆಗಳು ನಿರ್ಮಾಣವಾಗಿದೆ? ಎಷ್ಟು ಬಾಕಿ ಇದೆ ಎಂಬ ವಿವರ ಇಲ್ಲಿದೆ.
ರಸ್ಗೆಗುಂಡಿ ಸಮಸ್ಯೆ ಇತ್ತೀಚೆಗೆ ಉಲ್ಬಣಿಸಿತ್ತು. ವಿಪಕ್ಷ ಮತ್ತು ಆಡಳಿತ ಪಕ್ಷದ ಮಧ್ಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ರಸ್ತೆಗಳ ನಿರ್ವಹಣೆ, ರಸ್ತೆ ಗುಂಡಿ ದುರಸ್ತಿ ವಿಫಲವಾಗಿದ್ದು, ರಾಜಧಾನಿ ಹೆಸರು ರಾಷ್ಟ್ರಮಟ್ಟದಲ್ಲಿ ಹಾಳಾಗುತ್ತಿದೆ ಎಂದು ದೂರಲಾಗಿತ್ತು. ಇಂತಹ ಘಟನೆಗಳು ಭವಿಷ್ಯದಲ್ಲಿ ಉಂಟಾಗದಂತೆ ನೋಡಿಕೊಳ್ಳಲು ಸರ್ಕಾರ ಬೃಹತ್ ಮೊತ್ತದ ವೈಟ್ ಟಾಪಿಂಗ್ ಕಾಮಗಾರಿಗೆ ಕೈ ಹಾಕಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿನ 1700 ಕೋಟಿ ರೂಪಾಯಿ ವೆಚ್ಚದಲ್ಲಿ 220.68 ಕಿಲೋ ಮೀಟರ್ ಉದ್ದದ 140 ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಈ ಪೈಕಿ 79.08 ಕಿಲೋ ಮೀಟರ್ (39 ರಸ್ತೆ) ವೈಟ್ ಟಾಪಿಂಗ್ ಕೆಲಸ ಪೂರ್ಣಗೊಂಡಿದೆ. ಉಳಿದ 101 ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.
ರಸ್ತೆ ಡಾಂಬರೀಕರಣ ಶೇ. 44 ರಷ್ಟು ಪೂರ್ಣ
ಬ್ರಾಂಡ್ ಬೆಂಗಳೂರು ಯೋಜನೆಯಡಿ 694 ಕೋಟಿ ರೂಪಾಯಿ ವೆಚ್ಚದಲ್ಲಿ 386.5 ಕಿಲೋ ಮೀಟರ್ ರಸ್ತೆಗಳ ಡಾಂಬರೀಕರಣ ನಡೆಯುತ್ತಿದೆ. ಇದರಲ್ಲಿ ಶೇಕಡಾ 44 ಕೆಲಸ ಪೂರ್ಣಗೊಂಡಿದೆ. ಉಳಿದ ಕೆಲಸವನ್ನು ಮುಂದಿನ 2 ತಿಂಗಳಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಸುರಕ್ಷಾ 75 - ಜಂಕ್ಷನ್ ಅಭಿವೃದ್ಧಿ ಪೂರ್ಣವಾಗಿದ್ದೆಷ್ಟು?
ಒಟ್ಟು 100 ಕೋಟಿ ರೂಪಾಯಿ ವೆಚ್ಚದ 'ಸುರಕ್ಷಾ 75' ಜಂಕ್ಷನ್ ಸುಧಾರಣಾ ಯೋಜನೆಯ ಶೇಕಡಾ 40ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ವಿನ್ಯಾಸ ಮತ್ತು ಅನುಷ್ಠಾನದ ಮೇಲೆ ವಿಶೇಷ ಗಮನ ಹರಿಸಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಸಾವಿರಾರು ರಸ್ತೆ ಗುಂಡಿ ದುರಸ್ತಿ ಕಾರ್ಯ ಮುಂದುವರಿದಿದೆ. ಈವರೆಗೆ ಜಿಬಿಎ ಅಧಿಕಾರಿಗಳು 18,000 ಸಾವಿರ ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದ ಪ್ರಕಾರ ಬಾಕಿಯಿರು ರಸ್ತೆಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಪಣತ್ತೂರು ರಸ್ತೆಗೆ 10 ದಿನಗಳಲ್ಲಿ ಸಂಚಾರ ವ್ಯವಸ್ಥೆ
ಪಣತ್ತೂರು ಎಸ್ ಕ್ರಾಸ್ ರಸ್ತೆಯಲ್ಲಿ 1 ಕಿಲೋ ಮೀಟರ್ ರಸ್ತೆ ಡಾಂಬರೀಕರಣ ಮಾಡಲಾಗಿದೆ. ಉಳಿದ 500 ಮೀ. ಕಾಂಕ್ರೀಟ್ ರಸ್ತೆಯನ್ನು 10 ದಿನಗಳಲ್ಲಿ ವಾಹನ ಸಂಚಾರಕ್ಕೆ ತೆರೆಯಲಾಗುವುದು. ರೈಲ್ವೆ ಇಲಾಖೆಯ ರಸ್ತೆಯನ್ನು ದುರಸ್ತಿಗೊಳಿಸಲು ಅನುಮತಿ ನೀಡಿದರೆ, ಪಾಲಿಕೆಯೇ ಕೆಲಸ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 390 ಕಿಲೋ ಮೀಟರ್ ಉದ್ದದ ಪ್ರಮುಖ ರಸ್ತೆ ಇದೆ. 63 ಕಿಲೋ ಮೀಟರ್ ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಹಾಗೂ 41 ಕಿಲೋ ಮೀಟರ್ ಉದ್ದದ ರಸ್ತೆಗೆ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ವೈಟ್ ಟಾಪಿಂಗ್ ನಡೆಸುವ ಹಾಗೂ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಸುತ್ತಿರುವ ರಸ್ತೆಗಳಲ್ಲಿ ಗುತ್ತಿಗೆದಾರರೇ ಗುಂಡಿಗಳನ್ನು ಮುಚ್ಚಬೇಕಿದೆ. ಬಾಕಿ ರಸ್ತೆಗಳಲ್ಲಿ ಪಾಲಿಕೆಯಿಂದ ಮುಚ್ಚಲಾಗವುದೆಂದು ಮಾಹಿತಿ ನೀಡಿದರು.
ದಕ್ಷಿಣ ನಗರ ಪಾಲಿಕೆ ಆಯುಕ್ತ ರಮೇಶ್ ಕೆ.ಎನ್ ಅವರು, ಇ-ಖಾತಾ ಅರ್ಜಿ ಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಕೆಲಸ ಮಾಡಲಾಗುತ್ತಿದೆ. ಒಂದು ಲಾಗಿನ್ ನಲ್ಲಿ ಹೆಚ್ಚು ಅರ್ಜಿಗಳಿದ್ದರೆ, ಕಡಿಮೆ ಅರ್ಜಿಗಳಿರುವ ಲಾಗಿಗ್ ಗೆ ರವಾನೆಯಾಗಲಿದೆ ಎಂದು ತಿಳಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications