ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಒಂದೇ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾವೈರಸ್!

|
Google Oneindia Kannada News

ಬೆಂಗಳೂರು, ಫೆಬ್ರವರಿ.26: ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ಬೆಂಗಳೂರಿನ ಯಲಹಂಕ ಸಮೀಪದ ಅತ್ತೂರಿನ ಸಂಭ್ರಮ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸೈನ್ಸಸ್ ಕಾಲೇಜ್ ಒಂದರಲ್ಲೇ 10 ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಪ್ರಸ್ತುತ ಪರೀಕ್ಷೆಗಳು ನಡೆಯುತ್ತಿರುವ ಸಂಭ್ರಮ ಇಂಜಿನಿಯರಿಂಗ್ ಕಾಲೇಜ್ ಸಹ ಈ ಕಾಲೇಜಿಗೆ ಹೊಂದಿಕೊಂಡಂತಿದೆ. ಕೊರೊನಾವೈರಸ್ ಸೋಂಕು ಪತ್ತೆಯಾದ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.

ಕೊರೊನಾ ಭೀತಿ: ಅಯ್ಯೋ.. ಭಾರತದಲ್ಲಿ ಹೀಗ್ಯಾಕಾಯ್ತು ಪರಿಸ್ಥಿತಿ!?ಕೊರೊನಾ ಭೀತಿ: ಅಯ್ಯೋ.. ಭಾರತದಲ್ಲಿ ಹೀಗ್ಯಾಕಾಯ್ತು ಪರಿಸ್ಥಿತಿ!?

ನಾವು ಕ್ಯಾಂಪಸ್ ನಲ್ಲಿ ಪರೀಕ್ಷೆ ಬರೆಯಬೇಕಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾರೂ ಪ್ರವೇಶಿಸದಂತೆ ತಡೆಯುತ್ತಿದ್ದೇವೆ. ವಿದ್ಯಾರ್ಥಿಗಳು ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರ ಬಗ್ಗೆ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ತಿಳಿಸಿದೆ.

ಯಲಹಂಕದ ಅಪಾರ್ಟ್ ಮೆಂಟ್ ನಲ್ಲಿ ಆತಂಕ ಮರೆ

ಯಲಹಂಕದ ಅಪಾರ್ಟ್ ಮೆಂಟ್ ನಲ್ಲಿ ಆತಂಕ ಮರೆ

ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿರುವ ಪೂರ್ವಾ ವೆನೆಜಿಯಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಹೆಚ್ಚಿನ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆ ಅಲ್ಲಿನ ಜನರು ನಿರಾಳರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮೊದಲು 16-ಬ್ಲಾಕ್ ಅಪಾರ್ಟ್ಮೆಂಟ್ ಸಂಕೀರ್ಣದ ಎರಡು ಬ್ಲಾಕ್ ಗಳಲ್ಲಿ ಮೂರು ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

ಒಂದು ಕಡೆಯಲ್ಲಿ ಹೆಚ್ಚು ಕೊರೊನಾ ಕೇಸ್ ಗಳಿಲ್ಲ

ಒಂದು ಕಡೆಯಲ್ಲಿ ಹೆಚ್ಚು ಕೊರೊನಾ ಕೇಸ್ ಗಳಿಲ್ಲ

ಬೆಂಗಳೂರಿನಲ್ಲಿ ಇತ್ತೀಚಿಗೆ ಒಂದೇ ಪ್ರದೇಶಗಳಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಸಾಮಾನ್ಯವಾಗಿ ನಿತ್ಯ ಹಲವೆಡೆಗಳಲ್ಲಿ ಕೊವಿಡ್-19 ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಅದರಿಂದ ಯಾವುದೇ ರೀತಿ ದೊಡ್ಡ ಅಪಾಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಪಾರ್ಟಮೆಂಟ್ ಮತ್ತು ಕಾಲೇಜ್ ಬಗ್ಗೆ ಮಾಹಿತಿ

ಅಪಾರ್ಟಮೆಂಟ್ ಮತ್ತು ಕಾಲೇಜ್ ಬಗ್ಗೆ ಮಾಹಿತಿ

ಸಿಲಿಕಾನ್ ಸಿಟಿಯಲ್ಲಿ ಕಿರಿದಾದ ಪ್ರದೇಶಗಳಲ್ಲೇ ದೊಡ್ಡದಾಗಿ ನಿರ್ಮಾಣಗೊಂಡಿರುವ ಹಾಗೂ ಅತಿಹೆಚ್ಚು ಜನರು ವಾಸವಿರುವ ಹಾಸ್ಟೆಲ್ ಮತ್ತು ಅಪಾರ್ಟಮೆಂಟ್ ಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಬಳಕೆಯಾಗುವ ಜಿಮ್, ಪಾರ್ಕ್, ಲಿಫ್ಟ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಎರಡು ಅಪಾರ್ಟ್ ಮೆಂಟ್ ಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಯಾವುದೇ ರೀತಿ ಹೆಚ್ಚುವರಿ ಪ್ರಕರಣಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Recommended Video

ಬೆಲೆ ಏರಿಕೆ ಖಂಡಿಸಿ ಭಾರತ ಬಂದ್-ದೇಶದ 1,500 ಪಟ್ಟಣಗಳಲ್ಲಿ ನಡೆಯುತ್ತಿರುವ ಬಂದ್ | Oneindia Kannada
ಈ ರಾಜ್ಯದಿಂದ ಬಂದವರಿಗೆ ಕೊವಿಡ್-19 ನೆಗಟಿವ್ ವರದಿ

ಈ ರಾಜ್ಯದಿಂದ ಬಂದವರಿಗೆ ಕೊವಿಡ್-19 ನೆಗಟಿವ್ ವರದಿ

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ರೀತಿಯ ಶಿಸ್ತುಬದ್ಧ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪ್ರತಿನಿತ್ಯ ಅತಿಹೆಚ್ಚು ಕೊವಿಡ್-19 ಪ್ರಕರಣಗಳು ದಾಖಲಾಗುತ್ತಿರುವ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ RT-PCR ಪರೀಕ್ಷೆಗೆ ಒಳಪಡಬೇಕು. ಕೊರೊನಾವೈರಸ್ ಸೋಂಕಿನ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ಕರ್ನಾಟಕ ಪ್ರವೇಶಿಸುವುದಕ್ಕೆ ಅನುಮತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

English summary
Bengaluru's Sambhram College of Management Sciences Reports 10 New COVID-19 Cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X