Get Updates
Get notified of breaking news, exclusive insights, and must-see stories!

Bengaluru School: ಬೆಂಗಳೂರಿನಲ್ಲಿ ವಿದ್ಯಾರ್ಥಿಯಿಂದ ತಪ್ಪಿದ ಶಾಲಾ ಮಕ್ಕಳ ಕಿಡ್ಯಾಪ್, ಪೋಷಕರೇ ಮಕ್ಕಳ ಬಗ್ಗೆ ಇರಲಿ ಎಚ್ಚರ

Bengaluru School: ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಮಕ್ಕಳನ್ನು ಅಪಹರಿಸಲು(Children Kidnapped) ಪ್ರಯತ್ನಿಸಿರುವುದು ಪೋಷಕರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಕ್ಕಳನ್ನು ಶಾಲೆಗೆ ಬಿಡುವ ಸಂದರ್ಭದಲ್ಲಿ ಹಾಗೂ ವಾಪಸ್ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಪೋಷಕರಿಗೆ ಶಾಲಾ ಆಡಳಿತ ಮಂಡಳಿಯು ಸಲಹೆ ನೀಡಿದೆ. ಬೆಂಗಳೂರಿನಲ್ಲಿ ಶಾಲಾ ಮಕ್ಕಳನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಲು ಪ್ರಯತ್ನಿಸಿದ ಬೆನ್ನಲ್ಲೇ ಈ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ಮಂಗಳವಾರ ಫೆಬ್ರವರಿ 17ರಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟ್‌ ಬೆಂಗಳೂರಿನ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಎಲ್ಲ ಪೋಷಕರಿಗೂ ನಮಸ್ಕಾರ, ದಯವಿಟ್ಟು ಮಕ್ಕಳನ್ನು ಒಬ್ಬರೇ ಹೊರಗೆ ಆಟವಾಡುವುದಕ್ಕೆ ಬಿಡಬೇಡಿ. ನಾನು ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬನಶಂಕರಿ ಪ್ರದೇಶದಲ್ಲಿ ವಾಸಿಸುತ್ತಿದ್ದೇನೆ. ಈ ಶಾಲೆಯ ಸಮೀಪದಲ್ಲಿ ನಾಲ್ವರು ಕಾರಿನಲ್ಲಿ ಬಂದಿದ್ದು, ಇಬ್ಬರು ಮಕ್ಕಳನ್ನು ಅಪಹರಿಸಲು ಪ್ರಯತ್ನಿಸಿದ್ದಾರಂತೆ. ಅವರು ಮೊದಲು ಚಾಕೊಲೇಟ್ ನೀಡಿ ಮಕ್ಕಳನ್ನು ಹತ್ತಿರಕ್ಕೆ ಕರೆದಿದ್ದು, ನಂತರ ಕಾರಿನಲ್ಲಿ ಕೂರಿಸಲು ಯತ್ನಿಸಿದ್ದಾರೆ. ದಯವಿಟ್ಟು ಎಚ್ಚರಿಕೆಯಿಂದಿರಿ.

Bengaluru School

ಈ ಸಂದೇಶವನ್ನು NPS ಪೋಷಕರ ವಾಟ್ಸ್‌ಆ್ಯಪ್ (WhatsApp) ಗುಂಪಿನಿಂದ ಹಾಗೆಯೇ ಹಂಚಲಾಗಿದೆ. ಇದು ಶಾಲೆಯ ಹೊರಗೆ ಅಥವಾ ಮನೆಯ ಹತ್ತಿರ ನಡೆದಿರಬಹುದು. ನನ್ನ ಸಹೋದರಿಯ ಮಗ UKGಯಲ್ಲಿ ಓದುತ್ತಿದ್ದು, ಅವರ ವಾಟ್ಸ್‌ಆ್ಯಪ್ (WhatsApp) ಗ್ರೂಪ್‌ನಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ ಎನ್ನುವ ಪೋಸ್ಟ್‌ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಿ: ಶಾಲಾ ಆಡಳಿತ ಮಂಡಳಿ ಮನವಿ

ಇನ್ನು ಬೆಂಗಳೂರಿನ ಬನಶಂಕರಿ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಅಪಹರಿಸಲು ಪ್ರಯತ್ನಿಸಲಾಗುತ್ತಿದೆ ಎನ್ನುವ ವಿಷಯ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿಯು ಪೋಷಕರಿಗೆ ವಿಶೇಷ ಮನವಿ ಮಾಡಿದೆ. ಡ್ರಾಪ್-ಆಫ್ ಮತ್ತು ಪಿಕ್-ಅಪ್ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಸಲಹೆ ನೀಡಿದೆ. ಮಕ್ಕಳ ಸುರಕ್ಷತೆಯ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ.

Bengaluru School

ಆತ್ಮೀಯ ಪೋಷಕರೇ,

ಡ್ರಾಪ್-ಆಫ್ ಮತ್ತು ಪಿಕ್-ಅಪ್ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ನಾವು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ. ಇತ್ತೀಚೆಗೆ ಪೋಷಕರೊಬ್ಬರು ವರದಿ ಮಾಡಿದ ಘಟನೆಯೆಂದರೆ, ಮಂತ್ರಿ ಆಲ್ಪೈನ್ ಹಿಂಭಾಗದ ಗೇಟ್ ಬಳಿ ವ್ಯಾನ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮಕ್ಕಳ ಬಳಿಗೆ ಬಂದು ಚಾಕೊಲೇಟ್‌ಗಳನ್ನು ನೀಡುತ್ತಿದ್ದರು. ಹಿರಿಯ ವಿದ್ಯಾರ್ಥಿಯೊಬ್ಬ ಪರಿಸ್ಥಿತಿಯನ್ನು ಗಮನಿಸಿದ್ದು, ಮಧ್ಯಪ್ರವೇಶ ಮಾಡಿದ್ದಾನೆ. ಇದಾದ ಕೂಡಲೇ ವ್ಯಾನ್ ತೆಗೆದುಕೊಂಡು ಆ ವ್ಯಕ್ತಿ ತಕ್ಷಣವೇ ಆ ಪ್ರದೇಶದಿಂದ ಹೊರಟು ಹೋಗಿದ್ದಾನೆ.

ಈ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಪೋಷಕರು ಜಾಗರೂಕರಾಗಿರಲು ಮತ್ತು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವುದು ಹಾಗೂ ಬಿಡುವ ಸಮಯದಲ್ಲಿ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದು ವಿನಂತಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಸಂದರ್ಭಗಳಲ್ಲಿ ಅಪರಿಚಿತರೊಂದಿಗೆ ಮಾತನಾಡಬಾರದು ಮತ್ತು ಅಪರಿಚಿತರು ಯಾರಾದರೂ ಸಂಪರ್ಕಿಸಿದರೆ ತಕ್ಷಣ ಪೋಷಕರು, ಶಿಕ್ಷಕರು ಅಥವಾ ಭದ್ರತಾ ಸಿಬ್ಬಂದಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

Bengaluru School

ಶಾಲೆಯು ತನ್ನ ಭದ್ರತಾ ಸಿಬ್ಬಂದಿಗೆ ಹೆಚ್ಚಿನ ಜಾಗರೂಕರಾಗಿರಲು ಮತ್ತು ಶಾಲಾ ಆವರಣದ ಒಳಗೆ ಮತ್ತು ಹೊರಗೆ ವಿದ್ಯಾರ್ಥಿಗಳ ಚಲನವಲನಗಳನ್ನು ಇನ್ನಷ್ಟು ಹೆಚ್ಚು ಕಣ್ಗಾವಲು ಇರಿಸುವಂತೆ ಸೂಚಿಸಿದೆ ಎನ್ನುವುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ. ನಿಮ್ಮ ಮಕ್ಕಳೊಂದಿಗೆ ಸುರಕ್ಷತಾ ಜಾಗೃತಿಯನ್ನು ಹೆಚ್ಚಿಸುವವಲ್ಲಿ ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ನಿಮ್ಮ ಸಹಕಾರವೂ ಬೇಕಿದೆ. ನಿಮ್ಮ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು.

ಹೃತ್ಪೂರ್ವಕ ವಂದನೆಗಳೊಂದಿಗೆ,

ಪ್ರಾಂಶುಪಾಲರು

ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬನಶಂಕರಿ.

ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಹಾಗೂ ಶಾಲಾ ಆಡಳಿತ ಮಂಡಳಿಯು ಯಾವೆಲ್ಲ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದೆ ಎನ್ನುವುದನ್ನು ಈ ಪತ್ರದಲ್ಲಿ ವಿವರಿಸಲಾಗಿದೆ.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಾರ್ಗಸೂಚಿ: ಆಡಳಿತ ಮಂಡಳಿ

ಈ ವಿಚಾರದ ಬಗ್ಗೆ Oneindia Kannadaದೊಂದಿಗೆ ಮಾತನಾಡಿದ ಆಡಳಿತ ಮಂಡಳಿಯ ಸದಸ್ಯರು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪೋಷಕರಿಗೆ ಮಾರ್ಗಸೂಚಿಯನ್ನು ನೀಡಲಾಗಿದೆ. ಪೋಷಕರೊಬ್ಬರು ಶಾಲಾ ಆಡಳಿತ ಮಂಡಳಿಯ ಗಮನಕ್ಕೆ ಈ ವಿಷಯವನ್ನು ತಂದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಂಡಿದ್ದೇವೆ. ಬೇರೆ ಬೇರೆ ನಗರಗಳಲ್ಲಿ ಮಕ್ಕಳ ವಿಷಯದಲ್ಲಿ ಏನಾಗುತ್ತಿದೆ ಎನ್ನುವುದನ್ನು ನಾವು ಗಮನಿಸಿದ್ದೇವೆ. ಅಲ್ಲದೆ ಶಾಲೆಯಿಂದ ಹೊರಗೆ ಹೋದ ಮೇಲೆ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿ ಪೋಷಕರದ್ದೂ ಹೌದು. ಮಕ್ಕಳನ್ನು ಎಲ್ಲೆಂದರಲ್ಲಿ ಬಿಡದಂತೆ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಪೋಷಕರಲ್ಲಿ ಮನವಿ ಮಾಡಿದ್ದೇವೆ. ಶಾಲಾ ಆಡಳಿತ ಮಂಡಳಿಯು ಮಕ್ಕಳ ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ರೀತಿಯ ಅಗತ್ಯ ಹಾಗೂ ತುರ್ತು ಕ್ರಮಗಳನ್ನು ಅಳವಡಿಸಿಕೊಂಡಿದೆ ಎಂದು ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬನಶಂಕರಿ ಆಡಳಿತ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+