Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ರಾಜಾಜಿನಗರದ ವಸತಿ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಯ ವಿರುದ್ಧ ಸ್ಥಳೀಯ ನಿವಾಸಿಗಳು ಅಸಮಾಧಾನಗೊಂಡು ಹೈಕೊರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ಮೊನ್ನೆ ಮಂಗಳವಾರ ಸರ್ಕಾರ, ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA)ಗೆ ನೋಟಿಸ್ ಜಾರಿಗೊಳಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಚ್ಚ ಅವರಿದ್ದ ವಿಭಾಗೀಯ ಪೀಠವು, ರಾಜಾಜಿನಗರ 5ನೇ ಬ್ಲಾಕ್ ನಿವಾಸಿಗಳ ಸಂಘ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ, ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿ, ಜುಲೈ 2ಕ್ಕೆ ಮುಂದೂಡಿತು.

ಶಾಲೆಯಿಂದ ಸಮಸ್ಯೆ: ಸಾರ್ವಜನಿಕರ ದೂರು
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನಿವಾಸಿಗಳು (ಅರ್ಜಿದಾರರು) ಇಲ್ಲಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಕಾರ್ಯಾಚರಣೆಯಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ತಮ್ಮ ಮನವಿಗಳನ್ನು ಪರಿಗಣಿಸಲು ನ್ಯಾಯಾಲಯದಿಂದ ಸೂಚನೆ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.
ಪಿಐಎಲ್ನಲ್ಲಿ, ಶಾಲೆ ದಿನವಿಡೀ ಸಾರ್ವಜನಿಕ ಘೋಷಣಾ ವ್ಯವಸ್ಥೆ (Public Address System) ಬಳಸುವುದರಿಂದ ಸ್ಥಳೀಯರಿಗೆ, ವಿಶೇಷವಾಗಿ ಮನೆಯಿಂದ ಕೆಲಸ ಮಾಡುವವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಲೌಡ್ಸ್ಪೀಕರ್ ಬಳಕೆಯಿಂದ ಪ್ರದೇಶದಲ್ಲಿ ಶಾಂತಿ ಭಂಗವಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸ್ಥಳೀಯ ಮಕ್ಕಳಿಗೆ ಪ್ರವೇಶದಲ್ಲಿ ಆದ್ಯತೆ ನೀಡಬೇಕಾದ ನಿಯಮ ಪಾಲಿಸಲಾಗುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ. ಶಾಲಾ ಬಸ್ಗಳನ್ನು ಕ್ಯಾಂಪಸ್ ಹೊರಗೆ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ನಾಗರಿಕರಿಗೆ ನಿತ್ಯ ಕೆಲವು ಕಿರಿ ಕಿರಿ ಅನುಭವಿಸುವಂತಾಗಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ.
ಹಾಗೆಯೇ, ಶಾಲಾ ಆಡಳಿತವು ಪೋಷಕರ ಸಭೆಗಳು (PTM) ಹಾಗೂ ಇತರ ಕಾರ್ಯಕ್ರಮಗಳನ್ನು ಸುತ್ತಮುತ್ತಲಿನ ನಿವಾಸಿಗಳಿಗೆ ಮುಂಚಿತವಾಗಿ ತಿಳಿಸದೇ ಆಯೋಜಿಸುತ್ತಿದೆ ಅಂತಲೂ ಅರ್ಜಿಯಲ್ಲಿ ದೂರಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA)ಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿತು.
-
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ













Click it and Unblock the Notifications