Bangalore Bomb Threat: ಬೆಂಗಳೂರು ನಗರದ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರು, ಡಿಸೆಂಬರ್ 01: ಉದ್ಯಾನ ನಗರಿ ಬೆಂಗಳೂರಿನ 15 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ.

ಶುಕ್ರವಾರ ಬಸವೇಶ್ವರ ನಗರ, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಇ-ಮೇಲ್ ಕಳಿಸಿದ್ದಾನೆ.

Bangalore Schools Bomb Threat - Probe Dogs Inspection

ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಇ-ಮೇಲ್ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೆದರಿಕೆ ಬಂದಿರುವ ಶಾಲೆಗಳಿಗೆ ಧಾವಿಸಿದ್ದಾರೆ. ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ಶಾಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಮಾಹಿತಿ ನೀಡಿದ್ದು, "ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ" ಎಂದರು.

"ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಅಂತಹ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ" ಎಂದು ಹೇಳಿದರು.

"ಮಕ್ಕಳು, ಪೋಷಕರು ಭಯ, ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆಯೋ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ" ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಕಳೆದ ವರ್ಷ ಇದೇ ದಿನ ನಗರದ 30 ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಆಗ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿತ್ತು.

ಶುಕ್ರವಾರ ಬಸವೇಶ್ವರ ನಗರ, ಯಲಹಂಕ, ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸದಾಶಿವ ನಗರದ ನೀವ್ ಅಕಾಡಮೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರ ಜೊತೆ ಮಾತುಕತೆ ನಡೆಸಿದರು.

ಶಾಲೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ. ಕೆ. ಶಿವಕುಮಾರ್, "ಟಿವಿಯಲ್ಲಿ ನೋಡಿ ಹತ್ತಿರದ ಶಾಲೆಗೆ ಆಗಮಿಸಿದೆ. ಪೊಲೀಸರು ಬಂದಿರುವ ಬೆದರಿಕೆ ಇ-ಮೇಲ್ ತೋರಿಸಿದರು. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಇದು ಹುಸಿ ಬೆದರಿಕೆ ಎಂದು ಅನಿಸುತ್ತಿದೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+