Bengaluru Second Airport: 2ನೇ ವಿಮಾನ ನಿಲ್ದಾಣ ಈ ಭಾಗದ ಆಸ್ತಿದಾರರಿಗೆ ಹೊಸ ಸಂಕಷ್ಟ!
Bengaluru second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ವಿಳಂಬವಾಗುತ್ತಲ್ಲೇ ಇದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗ ಇಲ್ಲಿಯ ವರೆಗೆ ಫೈನಲ್ ಆಗಿಲ್ಲ. ಇದರ ನಡುವೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಾರ್ಟ್ ಲಿಸ್ಟ್ ಆಗಿರುವ ಜಾಗದಲ್ಲಿರುವ ಆಸ್ತಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಪ್ರಸ್ತಾವನೆಯ ಬೆನ್ನಲ್ಲೇ ಬೆಂಗಳೂರಿನ ಹೊರ ವಲಯ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಆದರೆ, ಭೂಮಿಗೆ ಒಳ್ಳೆಯ ಬೆಲೆ ಬಂದರೂ ಆಸ್ತಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರಿಗೆ ಈಗಾಗಲೇ ಪ್ರಮುಖ ವಿಮಾನ ನಿಲ್ದಾಣವಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈಗಾಗಲೇ ಲಕ್ಷಾಂತರ ಜನ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಅಲ್ಲದೇ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಆಸ್ತಿಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಿದೆ. ಆದರೆ ಬೆಂಗಳೂರಿನಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗಿರುವ ಏಳು ಪ್ರದೇಶಗಳಲ್ಲೂ ಭೂಮಿಯ ಬೆಲೆಯು ಸಿಕ್ಕಾಪಟ್ಟೆ ಹೆಚ್ಚಳವಾದರೂ ಸಹ ಭೂಮಿ ಮಾರಾಟ ಹಾಗೂ ಖರೀದಿ ಮಾಡಲಾಗದ ಪರಿಸ್ಥಿತಿ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗದೆ ಇರುವುದು.

ಹೌದು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದ ಮೇಲೆ ಏಳು ಪ್ರದೇಶಗಳಲ್ಲೂ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಕನಕಪುರ ಹಾಗೂ ಬಿಡದಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿಯ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಈಗಾಗಲೇ ಭೂಮಿಗೆ ಒಳ್ಳೆಯ ಬೆಲೆ ಇದೆ. ಭೂಮಿ ಬೆಲೆ ಮುಟ್ಟಿದರೆ, ಕೈ ಸುಡುವಂತೆ ಇದೆ. ಅಲ್ಲದೇ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗಿರುವ ಏಳು ಪ್ರದೇಶಗಳಲ್ಲೂ ಭೂಮಿಯ ಬೆಲೆ ದುಬಾರಿಯಾಗಿದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ ಯಾವುದೇ ಅಪ್ಡೇಟ್ಸ್ ನೀಡದೆ ಇರುವುದು ಆಸ್ತಿ ಮಾರಾಟ ಹಾಗೂ ಖರೀದಿ ಎರಡೂ ವಿಚಾರದಲ್ಲೂ ಹಿನ್ನಡೆ ಆಗಿದೆ.
ಇದೇ ವರ್ಷ ಏಪ್ರಿಲ್‌ನಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಏಏಐ) ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಅಲ್ಲದೇ 15 ದಿನಗಳಲ್ಲಿ ವರದಿ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಧ್ಯಯನ ತಂಡವು ಪರಿಶೀಲನೆ ಮಾಡಿ ಮೂರು ತಿಂಗಳಾದರೂ ಇಲ್ಲಿಯ ವರೆಗೆ ಸೂಕ್ತ ಸ್ಥಳ ಎಲ್ಲಿ ಎನ್ನುವ ಬಗ್ಗೆ ವರದಿ ನೀಡಿಲ್ಲ. ಇದು ಭೂಮಿ ಖರೀದಿ ಮಾಡಬೇಕು ಎನ್ನುವವರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಯಾವ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಅಂತ ತಿಳಿಯದೆ ಆಸ್ತಿದಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಮತ್ತೊಂದು ಕಡೆ ಶಾರ್ಟ್ ಲಿಸ್ಟ್ ಮಾಡಲಾಗಿರುವ ಹಲವು ಪ್ರದೇಶದಲ್ಲಿ ಭೂಮಿಯ ಬೆಲೆ ಹೆಚ್ಚಳವಾಗಿದೆ. ಭೂಮಿಯ ಬೆಲೆಯು ವಿವಿಧ ಪ್ರದೇಶದಲ್ಲಿ 2 ಕೋಟಿಯಿಂದ 4 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ.












Click it and Unblock the Notifications