Bengaluru Second Airport: 5,000 ಸಾವಿರ ಎಕರೆ ಭೂಸ್ವಾಧೀನ, ಭೂಮಿಗೆ ಚಿನ್ನದ ಬೆಲೆ ಬಂದರೂ ಹೊಸ ಸಂಕಷ್ಟ!
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ಚುರುಕು ಪಡೆದುಕೊಳ್ಳದೆ ಇರುವುದು ಹಲವು ಸಂಕಷ್ಟಗಳಿಗೆ ಕಾರಣವಾಗಿದೆ. ಆದರೆ ಈ ನಡುವೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರದಲ್ಲಿ ಹೊಸದೊಂದು ಸಂಕಷ್ಟ ಎದುರಾಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಗುರುತು ಮಾಡಲಾಗಿದ್ದು. ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಲ್ಲೇ ಇದೆ. ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಂದಾಜು 5,000 ಸಾವಿರಕ್ಕೂ ಹೆಚ್ಚು ಎಕರೆ ಭೂಸ್ವಾಧೀನ ಮಾಡುವ ಅವಶ್ಯಕತೆ ಇದೆ. ಇನ್ನು ಈಗಾಗಲೇ ತಮಿಳುನಾಡು ಸರ್ಕಾರವು ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆದರೆ, ಕರ್ನಾಟಕ ಸರ್ಕಾರವು ಬೆಂಗಳೂರು ವಿಮಾನ ನಿಲ್ದಾಣದ ವಿಚಾರದಲ್ಲಿ ಹಿನ್ನಡೆ ಅನುಭವಿಸುತ್ತಿದೆ.
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರೋಬ್ಬರಿ 5,000 ಸಾವಿರ ಎಕರೆಯ ಅವಶ್ಯಕತೆ ಇದೆ. ಮೂರು ಜಾಗಗಳನ್ನು ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಭಾಗಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ, ಹಾರೋಹಳ್ಳಿ ಮತ್ತು ನೆಲಮಂಗಲ-ಕುಣಿಗಲ್ ರಸ್ತೆಯ ಚಿಕ್ಕ ಸೋಲೂರು ಪ್ರದೇಶಗಳಲ್ಲಿ ಜಾಗ ಗುರುತಿಸಲಾಗಿದೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI)ದ ಅಧ್ಯಯನ ತಂಡ ಈಗಾಗಲೇ ಎರಡು ತಿಂಗಳ ಹಿಂದೆಯೇ ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರದೊಂದಿಗೂ ಈ ವಿಚಾರವಾಗಿ ಕರ್ನಾಟಕ ಸರ್ಕಾರ ಮಾತನಾಡಿದೆ. ಆದರೆ, ಅಧ್ಯಯನ ತಂಡ ಇಲ್ಲಿಯ ವರೆಗೆ ವರದಿ ನೀಡಿಲ್ಲ. ಇದು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭಾರೀ ಹಿನ್ನಡೆಯನ್ನು ತಂದಿದೆ.
ಭೂಮಿ ಬೆಲೆ ಹೆಚ್ಚಳ: ರೈತರಿಗೆ ಆತಂಕ
ಇನ್ನು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗಿರುವ ಜಾಗಗಳಲ್ಲಿ ಈಗಾಗಲೇ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಈ ಭಾಗಗಳಲ್ಲಿ ಭೂಮಿ ಖರೀದಿ ಪ್ರಕ್ರಿಯೆ ಜೋರಾಗಿದೆ. ಆದರೆ, ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ 5,000 ಸಾವಿರ ಎಕರೆಗೂ ಹೆಚ್ಚು ಭೂಮಿ ಅವಶ್ಯವಿರುವುದರಿಂದ ರೈತರು ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಶಾರ್ಟ್ ಲಿಸ್ಟ್ ಮಾಡಲಾಗಿರುವ ಪ್ರದೇಶಗಳಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳು ನಡೆದಿಲ್ಲ. ಭೂಮಿಗೆ ಬಂಗಾರದ ಬೆಲೆ ಬರುತ್ತಿದೆಯಾದರೂ. ಎಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎನ್ನುವುದು ಅಂತಿಮವಾಗದೆ ಇರುವ ಕಾರಣಕ್ಕೆ. ಈ ಪ್ರದೇಶಗಳಲ್ಲಿ ಇರುವ ಆಸ್ತಿದಾರರು ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ.
ವಿಮಾನ ನಿಲ್ದಾಣ ನಿರ್ಮಾಣವಾದರೆ ಭರ್ಜರಿ ಲಾಭ: ಇನ್ನು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾವುದೇ ಪ್ರದೇಶದಲ್ಲಿ ನಿರ್ಮಾಣವಾದರೂ ಭರ್ಜರಿ ಲಾಭವಾಗಲಿದೆ. ಈ ಪ್ರದೇಶದಲ್ಲಿ ಭೂಮಿಗೆ ಒಳ್ಳೆಯ ಬೆಲೆ ಬರಲಿದೆ. ಮೂಲಸೌಕರ್ಯ ಅಭಿವೃದ್ಧಿ ಆಗಲಿದೆ. ಅದರೊಂದಿಗೆ ಉದ್ದಿಮೆಗಳು ಪ್ರಾರಂಭವಾಗಲಿದ್ದು. ಉದ್ಯೋಗ ಸೃಷ್ಟಿಯೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಲ್ಲಿಯ ವರೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ: ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಕೆಲವು ಪ್ರದೇಶಗಳು ಶಾರ್ಟ್ ಲಿಸ್ಟ್ ಆಗಿರುವ ಬೆನ್ನಲ್ಲೇ ಈ ಭಾಗಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಮೊದಲ ಹಂತದಲ್ಲಿ 7 ಪ್ರದೇಶಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಈ ಏಳು ಪ್ರದೇಶಗಳಲ್ಲೂ ಭೂಮಿ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಜನ ಕನಕಪುರ ಭಾಗದಲ್ಲಿ ಹೆಚ್ಚಾಗಿ ಭೂಮಿ ಖರೀದಿ ಮಾಡುತ್ತಿದ್ದಾರೆ.












Click it and Unblock the Notifications