Bengaluru Second Airport: ಜಾಗ ಫೈನಲ್ ಬಗ್ಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಚಿವ ಎಂಬಿ ಪಾಟೀಲ್

ಬೆಂಗಳೂರು, ಮಾರ್ಚ್ 22: ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಅತೀ ಅವಶ್ಯಕವಾದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸರ್ಕಾರ ಕಸರತ್ತು, ನಿರಂತರ ಪ್ರಯತ್ನಕ್ಕೆ ಪ್ರತಿಫಲ ಸಿಗುವ ಸಮಯ ಬಂದಿದೆ. ಎರಡನೇ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಅವುಗಳನ್ನು ಉನ್ನತ ಅಧಿಕಾರಿಗಳ ತಂಡ ಬಂದು ಪರಿಶೀಲನೆಗೆ ಕೌಂಟ್‌ ಡೌನ್ ಶುರುವಾಗಿದೆ ಎಂದು ಖುದ್ದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರೇ ಹೇಳಿದ್ದಾರೆ. ಮಹತ್ವದ ಅಪ್ಡೇಟ್ ಅವರು ನೀಡಿದ್ದಾರೆ.

ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಮುಂದಿನ ಏಪ್ರಿಲ್ 7 ರಿಂದ 9 ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Bengaluru Second Airport Arrival of Central Team between April 7-9 for Inspect 3 Locations MB Patil

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಬೆಂಗಳೂರಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಮೂರು ಸ್ಥಳ ಹುಡುಕಿಟ್ಟಿದೆ. ಅದರ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ. ಈ ಬಗ್ಗೆ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರಕ್ಕೆ ಪತ್ರ: ಏನೆಲ್ಲ ಸಮೀಕ್ಷೆ ಮಾಡಲಿದೆ ಕೇಂದ್ರ ತಂಡ?

ಉದ್ದೇಶಿತ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ವಿಮಾನ ನಿಲ್ದಾಣ ನಿರ್ಮಿಸಲು ಜಾಗ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಮಾರ್ಚ್ ತ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

Bengaluru Second Airport Arrival of Central Team between April 7-9 for Inspect 3 Locations MB Patil

2033ರ ಹೊತ್ತಿಗೆ ವಿಮಾನ ನಿಲ್ದಾಣ ಸ್ಥಾಪನೆ ಗುರಿ

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

Take a Poll

ಈ ಬೆಂಗಳೂರು ಎರಡನೇ ವಿಮಾನ ನಿಲ್ದಾನವನ್ನು ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಬೇಡಿಕೆ ಕಾರ್ಯಸಾಧುವಲ್ಲ. ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ. ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ದರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ' ಎಂದು ಅವರು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಕೊಪ್ಪಳದಲ್ಲಿ ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಪಾಟೀಲ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+