Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಇಲ್ಲಿ ನಿರ್ಮಾಣವಾದರೆ ಸಂಕಷ್ಟ!
Bengaluru Second Airport: ಬೆಂಗಳೂರು ಸೆಕೆಂಡ್ ಏರ್‌ಪೋರ್ಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು. ಜಾಗ ಪರಿಶೀಲನೆ ಸಹ ಮುಕ್ತಾಯವಾಗಿದೆ. ಆದರೆ ಇದೀಗ ಬೆಂಗಳೂರಿನ ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬೇಡ ಅಥವಾ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸೂಕ್ತವಲ್ಲ ಎಂದು ಪ್ರಭಾವಿ ಸಚಿವರೊಬ್ಬರು ಹೇಳಿದ್ದಾರೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಬೆಂಗಳೂರಿಗೆ ಲಾಭವಾಗುವುದಕ್ಕಿಂತ ಸಮಸ್ಯೆಯೇ ಆಗಲಿದೆ ಎಂದು ಹೇಳಲಾಗಿದೆ. ಹಾಗಾದರೆ ಯಾವ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಬೇಡ ಎಂದು ಹೇಳಲಾಗುತ್ತಿದೆ. ಏನಿದು ಚರ್ಚೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಜೋರಾಗಿರುವಾಗಲೇ ಯಾವುದೇ ಕಾರಣಕ್ಕೂ ಈ ಒಂದು ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಡಿ. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಮರುಪರಿಶೀಲನೆ ನಡೆಸಿ ಎಂದು ಹೇಳಲಾಗಿದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಭಾವಿ ಸಚಿವರ ನಡುವೆ ಭಾರೀ ಪೈಪೋಟಿ ಇದೆ. ಸಚಿವರಾದ ಜಿ ಪರಮೇಶ್ವರ್ - ಡಿ.ಕೆ ಶಿವಕುಮಾರ್ ಅವರು ನಡುವೆ ಪೈಪೋಟಿ ಇದೆ. ಇಬ್ಬರು ಪ್ರಭಾವಿ ನಾಯಕರು ಒಂದೊಂದು ಜಾಗವನ್ನು ಹೇಳುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಜಾಣ್ಮೆ ಪ್ರದರ್ಶಿಸುತ್ತಿದ್ದಾರೆ.

ಈ ಎಲ್ಲಾ ನಾಯಕರ ಪೈಪೋಟಿಯ ನಡುವೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗ ನಿಗದಿ ಮಾಡಿರುವ ಅಥವಾ ಶಾರ್ಟ್ ಲಿಸ್ಟ್ ಮಾಡಿರುವ ಜಾಗ ಸೂಕ್ತವಲ್ಲ. ಇದರಿಂದ ಬೆಂಗಳೂರಿಗೆ ಲಾಭವಾಗುವುದಕ್ಕಿಂತಲೂ ನಷ್ಟವೇ ಹೆಚ್ಚಾಗಿ ಆಗಲಿದೆ. ಹೀಗಾಗಿ, ಶಿರಾದಲ್ಲಿ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೂಕ್ತ ಎಂದು ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ಬೇಡ: ಇನ್ನು ಎರಡನೇ ವಿಮಾನ ನಿಲ್ದಾಣಕ್ಕೆ ಗುರುತು ಮಾಡಲಾಗಿರುವ ಮೂರು ಜಾಗಗಳು ಬೆಂಗಳೂರಿನ ದಕ್ಷಿಣ ಭಾಗದ ವ್ಯಾಪ್ತಿಯಲ್ಲಿವೆ. ಆದರೆ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸೂಕ್ತವಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ನೆಲಮಂಗಲ ಇಲ್ಲವೇ ಶಿರಾ ಎಲ್ಲಿಯಾದರೂ ವಿಮಾನ ನಿಲ್ದಾಣ ನಿರ್ಮಾಣ ಮಾಡಲಿ. ಇದಕ್ಕೆ ನಮ್ಮ ಸಹಮತ ಇದ್ದೇ ಇದೆ ಅಂತ ಅವರು ಹೇಳಿದ್ದಾರೆ.
ಮುಂದುವರಿದು ಇನ್ನೊಂದು (ಬಿಡದಿ) ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಏನೂ ಪ್ರಯೋಜನ ಇಲ್ಲ ಅಂತ ಹೇಳಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ, ಬೆಂಗಳೂರಿನಲ್ಲಿ ಇನ್ನಷ್ಟು ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಯಾವುದೇ ಕಾರಣಕ್ಕೂ ಬಿಡದಿ ಬೇಡ ಎಂಬರ್ಥದಲ್ಲಿ ಅವರು ಮಾತನಾಡಿದ್ದಾರೆ. ಆದರೆ ನೇರವಾಗಿ ಬಿಡದಿ ಎಂದು ಹೇಳಿಲ್ಲ.
ಬೆಂಗಳೂರಿಗೆ ತೊಂದರೆ: ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುತ್ತಿರುವ ಮುಖ್ಯ ಉದ್ದೇಶವೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಳವಾಗುತ್ತಿದೆ ಎಂದು ಆದರೆ ಹೊಸ ವಿಮಾನ ನಿಲ್ದಾಣದಿಂದ ಮತ್ತೊಂದು ಸಮಸ್ಯೆ ಆಗಬಾರದು ಎಂದು ಅಭಿಪ್ರಾಯಪಡಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications