Bengaluru Second Airport: ಬೆಂಗಳೂರು ವಿಮಾನ ನಿಲ್ದಾಣ: ಈ ರಾಜ್ಯಗಳಿಗೆ ಬಂಪರ್!

Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ರಾಜ್ಯ ಕಾಂಗ್ರೆಸ್‌ ಸಚಿವರಲ್ಲೇ ಪೈಪೋಟಿ ಹೆಚ್ಚಳವಾಗಿದೆ. ಐದು ಪ್ರಭಾವಿ ಸಚಿವರು ಹಾಗೂ ಶಾಸಕರ ಪೈಪೋಟಿ ಜೋರಾಗಿದೆ. ಇದರ ನಡುವೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಾವೆಲ್ಲ ಭಾಗದವರಿಗೆ ಲಾಭವಾಗಲಿದೆ ಎನ್ನುವ ಲೆಕ್ಕಾಚಾರವು ಜೋರಾಗಿದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಈ ರಾಜ್ಯಗಳಿಗೂ ಲಾಭವಾಗಲಿದೆ ಎನ್ನುವ ಲೆಕ್ಕಾಚಾರ ಜೋರಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ರಿಯಲ್‌ ಎಸ್ಟೇಟ್‌ಗೆ ಬಂಪರ್ ಬಂದಿದೆ. ಈ ಭಾಗದಲ್ಲಿ ಜನ ಭೂಮಿ ಮಾರಾಟ ಮಾಡುವುದಕ್ಕೆ ಬ್ರೇಕ್‌ ಹಾಕಿದ್ದಾರೆ. ಹೌದು ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದೆ.

Bengaluru Second Airport Bumper for Southern Part of Bengaluru and These States Real Estate Boom

ಈ ಜಾಗಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ (ಕನಕಪುರ - ಕುಣಿಗಲ್‌ - ಬಿಡದಿ ಮಾರ್ಗದಲ್ಲಿ) ಆಸ್ತಿದಾರರಿಗೆ ಎರಡು ಮಾದರಿಯಲ್ಲಿ ಲಾಭವಾಗಲಿದೆ ಎಂದು ಹೇಳಲಾಗಿದೆ. ಒಂದು ಈ ಭಾಗದಲ್ಲಿ ಆಸ್ತಿದಾರರ ಜಾಗವನ್ನು ಸರ್ಕಾರವೇ ಖರೀದಿ ಮಾಡಿ ಭೂಮಿಗೆ ಬೆಲೆ ನಿಗದಿ ಮಾಡುವ ಅವಕಾಶ ಸಿಗಬಹುದು. ಇಲ್ಲವೇ ಆಸ್ತಿದಾರರ ಸುತ್ತಮುತ್ತಲಿನ ಪ್ರದೇಶದಲ್ಲಿ ಆಸ್ತಿಗೆ ಒಳ್ಳೆಯ ಬೆಲೆ ಬರಲಿದೆ. ಆದರೆ, ಇದು ಮಾತ್ರವಲ್ಲ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೆರೆಯ ಎರಡರಿಂದ ಮೂರು ರಾಜ್ಯದವರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಅವರಿಗೂ ಬಂಪರ್‌ ಸಿಗಲಿದೆ ಎಂದು ಹೇಳಲಾಗಿದೆ.

ಈ ರಾಜ್ಯಗಳಿಗೆ ಅನುಕೂಲ: ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೆರೆಯ ತಮಿಳುನಾಡು ಹಾಗೂ ಆಂಧ್ರಪ್ರದೇಶದವರಿಗೂ ಅನುಕೂಲವಾಗಲಿದೆ. ಈ ವಿಷಯ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಷಯ ಚರ್ಚೆಯ ಮುನ್ನೆಲೆಗೆ ಬಂದಾಗಿನಿಂದಲೂ ಚರ್ಚೆಯಾಗುತ್ತಿದೆ. ಇದೀಗ ಮೂರು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿ ಕೇಂದ್ರ ತಂಡ ಅಧ್ಯಯನ ಮಾಡಿರುವ ಸಂದರ್ಭದಲ್ಲಿ ಇನ್ನಷ್ಟು ಚರ್ಚೆಯಾಗುತ್ತಿದೆ. ಬೆಂಗಳೂರಿನಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಜನ, ಉತ್ತರ ಭಾರತೀಯರು ಹಾಗೂ ವಿದೇಶಿಗರು ಸಹ ನೆಲೆಸಿದ್ದಾರೆ. ಇದೀಗ ಎಲ್ಲರಿಗೂ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಾಭವಾಗಲಿದೆ.

Take a Poll

ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಸ್ಥಳ ಪೈಪೋಟಿ: ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಜಾಗ ಆಯ್ಕೆಯ ಬಗ್ಗೆ ಕರ್ನಾಟಕ ಕಾಂಗ್ರೆಸ್‌ ನಾಯಕರಲ್ಲೇ ಪೈಪೋಟಿ ಎದುರಾಗಿದೆ. ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಒತ್ತಾಯ ಹೆಚ್ಚಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಉತ್ತರ ಕರ್ನಾಟಕಕ್ಕಿಂತಲೂ ತಮಿಳುನಾಡಿನ ಜನರಿಗೇ ಹೆಚ್ಚಿನ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ವಿಚಾರವನ್ನು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಸಹ ಈ ಹಿಂದೆಯೇ ಪ್ರಸ್ತಾಪಿಸಿದ್ದರು. ಇದೀಗ ಬೆಂಗಳೂರಿನ ದಕ್ಷಿಣ ಭಾಗದಲ್ಲಿಯೇ ಜಾಗವನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದ್ದು ಬೇರೆ ರಾಜ್ಯದವರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

ತಮಿಳುನಾಡಿಗೆ ಬಂಪರ್‌: ತಮಿಳುನಾಡು ಹಾಗೂ ಬೆಂಗಳೂರಿಗೆ ಭಾರೀ ದೂರವಿಲ್ಲ. ಹೀಗಾಗಿ ಈ ಭಾಗದಲ್ಲಿ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಇನ್ನು ಮುಖ್ಯವಾಗಿ ಹೊಸೂರಿನಲ್ಲೂ ವಿಮಾನ ನಿಲ್ದಾಣ ಅಭಿವೃದ್ಧು ಆಗುತ್ತಿರುವುದರಿಂದ ತಮಿಳುನಾಡಿಗೆ ಇದು ಡಬಲ್‌ ಧಮಾಕಾ ಅಂತಲೇ ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+