Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ
Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಅಪ್ಡೇಟ್ಸ್ ಬಂದಿದೆ. ಕೇಂದ್ರ ಸರ್ಕಾರವು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಗುರುತಿಸುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯವನ್ನು ಕೊಟ್ಟಿದೆ. ಈ ಬಗ್ಗೆ ಕೇಂದ್ರ ಸರ್ಕಾರವೇ ಬಿಗ್ ಅಪ್ಡೇಟ್ಸ್ ನೀಡಿದೆ. ಇನ್ನು ಈಚೆಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕಳೆದ ಒಂದೂವರೆ ವರ್ಷದ ಅವಧಿಯಿಂದಲೂ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಆದರೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಯಾವುದೇ ಮಹತ್ವದ ಬೆಳವಣಿಗೆಗಳು ಆಗಿರಲಿಲ್ಲ. ಇದೀಗ ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ರೆಡ್ಡಿ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಚೆಗೆ ಸಭೆ ನಡೆಸಿದ್ದರು. ಅದರಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಅಲ್ಲದೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗಕ್ಕೆ ಸಂಬಂಧಿಸಿದಂತೆಯೂ ಚರ್ಚೆ ಮಾಡಲಾಗಿದೆ.

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗದ ವಿಚಾರವು ಕೆಲವೊಂದು ಗೊಂದಲಗಳಿಗೆ ಕಾರಣವಾಗಿತ್ತು. ಇದೀಗ ಈ ಗೊಂದಲಗಳಿಗೆ ಕೇಂದ್ರ ಸರ್ಕಾರವು ತೆರೆ ಎಳೆದಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆಯೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವಾಗಿ ಕೇಂದ್ರ ಸರ್ಕಾರ ತಮ್ಮ ಅಭಿಪ್ರಾಯವನ್ನು ನಾವು ಕಳುಸಿದ್ದು, ನೀವೇ ಜಾಗ ನಿಗದಿ ಮಾಡಿ ಎಂದು ಅವರು ಹೇಳಿದ್ದಾರೆ. ನಮ್ಮ ಬಳಿ ಈಗ ಎರಡರಿಂದ ಮೂರು ಆಯ್ಕೆಗಳಿವೆ. ನಮ್ಮ ಸರ್ಕಾರ ಇದರ ಸಾಧಕ ಬಾಧಕಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ, ಚರ್ಚೆ ಮಾಡಿದ ನಂತರ ಅಂತಿಮ ತೀರ್ಮಾನ ಮಾಡಲಿದೆ ಎಂದಿದ್ದಾರೆ.
Bengaluru Second Airport: ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗ
ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇದೀಗ ಮೂರು ಜಾಗಗಳನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಲಾಗಿದೆ.
ಕನಕಪುರ ರಸ್ತೆ (ದಕ್ಷಿಣ ಬೆಂಗಳೂರು): ಈ ಮಾರ್ಗದಲ್ಲಿ ಸೋಮನಹಳ್ಳಿ ಮತ್ತು ಚೂಡಹಳ್ಳಿ ಎಂಬ ಎರಡು ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸುಮಾರು 4,500 ರಿಂದ 5,000 ಎಕರೆ ಜಾಗವನ್ನು ಗುರುತಿಸಲಾಗಿದೆ. ಇದೀಗ ಕೇಂದ್ರ ಸರ್ಕಾರವು ಸ್ಥಳ ಆಯ್ಕೆಯ ಸ್ವಾತಂತ್ರ್ಯವನ್ನು ಕರ್ನಾಟಕ ಸರ್ಕಾರಕ್ಕೆ ನೀಡಿದೆ ಎಂದು ಹೇಳಿರುವುದರಿಂದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾವ ಜಾಗ ಅಂತಿಮವಾಗಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ.
ನೆಲಮಂಗಲ-ಕುಣಿಗಲ್ ರಸ್ತೆ (ಪಶ್ಚಿಮ ಬೆಂಗಳೂರು): ನೆಲಮಂಗಲ ತಾಲ್ಲೂಕಿನ ಕುಣಿಗಲ್ ರಸ್ತೆಯ ಸಮೀಪವಿರುವ ಚಿಕ್ಕಸೋಲೂರು ಭಾಗದಲ್ಲಿ ಮೂರನೇ ಸ್ಥಳವನ್ನು ಗುರುತಿಸಲಾಗಿದೆ. ಇನ್ನು ಈ ಪ್ರದೇಶದಲ್ಲಿ ಅಂದಾಜು 5,200 ಎಕರೆ ಜಾಗ ಲಭ್ಯವಿದೆ ಎಂದು ಹೇಳಲಾಗಿದೆ.












Click it and Unblock the Notifications