Bengaluru Second Airport: ನಗರದ ಸಮೀಪವೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹಾಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಲ್ಲೇ ಇದೆ. ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದರೂ, ಜಾಗಕ್ಕೆ ಸಂಬಂಧಿಸಿದಂತೆ ಗೊಂದಲಗಳು ಮುಂದುವರಿದಿದೆ. ಅಲ್ಲದೆ ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದಿಂದಲೂ ಯಾವುದೇ ಹೊಸ ಅಪ್ಡೇಟ್ಸ್‌ ಬಂದಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್‌ ಕೊಟ್ಟಿದ್ದಾರೆ.

ಬೆಂಗಳೂರು ಸಮೀಪದಲ್ಲೇ ಎರಡನೇ ವಿಮಾನ ನಿಲ್ದಾಣ

ಇನ್ನು ಬೆಂಗಳೂರಿನ ಸಮೀಪದಲ್ಲೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಬೆಂಗಳೂರಿನ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 8ರ ಬುಧವಾರ) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ವೇಳೆ ಸಚಿವರಾದ ಎಂ. ಬಿ. ಪಾಟೀಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಆರ್ಥಿಕ ಸಲಹೆಗಾರರಾದ ಎಲ್. ಕೆ. ಅತೀಕ್ ಮತ್ತಿತರರು ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.

Bengaluru Second Airport

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

ಇನ್ನು ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. "ಬೆಂಗಳೂರಿನಲ್ಲಿ ಪ್ರತಿ ತಿಂಗಳು 30 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350 ಕಿ. ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀ ಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ.

Bengaluru Second Airpor: ಎರಡನೇ ವಿಮಾನ ನಿಲ್ದಾಣ: ಪ್ರಾಪರ್ಟಿ ವಿಚಾರದಲ್ಲಿ ದೇವನಹಳ್ಳಿಯಂತೆ ಆಗದಿರಲಿ, ಏನಿದು ಚರ್ಚೆ
Bengaluru Second Airpor: ಎರಡನೇ ವಿಮಾನ ನಿಲ್ದಾಣ: ಪ್ರಾಪರ್ಟಿ ವಿಚಾರದಲ್ಲಿ ದೇವನಹಳ್ಳಿಯಂತೆ ಆಗದಿರಲಿ, ಏನಿದು ಚರ್ಚೆ

ನೀವೆಲ್ಲರೂ ಹೆಬ್ಬಾಳ ಬಳಿ ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದೀರಿ. ಈಗಾಗಿ ನಾವು ಸಣ್ಣ ಟನಲ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಜೊತೆಗೆ ಬೆಂಗಳೂರಿನಲ್ಲಿ 40 ಕಿ. ಮೀ ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಆದೇಶ ಹೊರಡಿ ಸಲಾಗುವುದು. ಇವುಗಳ ಜೊತೆಗೆ 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಯೋಜನೆ ರೂಪಿಸಿದ್ದೇವೆ. 133 ಕಿ.ಮೀ ಉದ್ದದ ಮೇಲ್ಸೇತುವೆ ಯೋಜನೆ ರೂಪಿಸಿದ್ದೇವೆ. ಜೊತೆಗೆ 123 ಕಿ. ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಾಣ ಮಾಡುತ್ತಿದ್ದೇವೆ. ಮೊದಲ ಹಂತಕ್ಕೆ ನಾವು 26 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಹೀಗೆ ಬೆಂಗಳೂರಿನ ಪ್ರಗತಿಗೆ ಮುಂದಾಗಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿದ್ದೇವೆ" ಎಂದು ಮಾಹಿತಿ ನೀಡಿದರು.

Bengaluru Second Airport: ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಜಾಗದ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅಪ್ಡೇಟ್ಸ್‌
Bengaluru Second Airport: ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಜಾಗದ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅಪ್ಡೇಟ್ಸ್‌

ಜಾಗದ ಬಗ್ಗೆ ಸುಳಿವು ಬಿಟ್ಟು ಕೊಡದ ಡಿಕೆಶಿ

ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಜಾಗದ ಬಗ್ಗೆ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರು ಸುಳಿವು ಬಿಟ್ಟುಕೊಟ್ಟಿಲ್ಲ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಜಾಗಕ್ಕೆ ಸಂಬಂಧಿಸಿದಂತೆ ಜಾಗವು ಶೀಘ್ರವೇ ಅಂತಿಮಗೊಳ್ಳುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+