Bengaluru Second Airport: ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಆರ್ಥಿಕ ಕಾರ್ಯಸಾಧ್ಯತಾ ವರದಿ!
Bengaluru Second Airport: ಕಳೆದ ಒಂದು ವರ್ಷದಿಂದಲೂ ಕಗ್ಗಂಟಾಗಿರುವ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ಇದೀಗ ಚುರುಕು ಪಡೆದುಕೊಂಡಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದಲೂ ಚರ್ಚೆ ನಡೆದಿದೆ. ಆದರೆ ಇದು ಕಾರ್ಯರೂಪಕ್ಕೆ ಬರುತ್ತಿಲ್ಲ ಎನ್ನುವ ಅಸಮಾಧಾನ ಕನ್ನಡಿಗರಲ್ಲಿತ್ತು. ಇದೇ ಸಂದರ್ಭದಲ್ಲಿ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ನಡೆಸಿದೆ.
ಈ ರೀತಿ ಕರ್ನಾಟಕ ಸರ್ಕಾರದ ವಿರುದ್ಧ ಅಸಮಾಧಾನ ಹಾಗೂ ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಬೆಂಬಲ ನೀಡುತ್ತಿಲ್ಲ ಎನ್ನುವ ದೂರುಗಳ ನಡುವೆ ಇದೀಗ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡವು ಪರಿಶೀಲನೆ ಮಾಡಿದ ನಂತರವೂ ಯಾವುದೇ ವರದಿಯನ್ನು ಸಲ್ಲಿಕೆ ಮಾಡಿಲ್ಲ. ಇದೀಗ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ವಿಳಂಬವಾಗದಂತೆ ಮಹತ್ವದ ಕ್ರಮವೊಂದನ್ನು ತೆಗೆದುಕೊಳ್ಳಲಾಗಿದೆ.

ಈ ಮೂಲಕ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಸುತ್ತಮುತ್ತಲಿನ ಜಾಗದಲ್ಲೂ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಮೂಡಿದೆ. ಇನ್ನು ಈ ಯೋಜನೆಯಲ್ಲಿ ಆಗಬಹುದಾದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಈಗಾಗಲೇ ಗುರುತಿಸಿರುವ ಮೂರು ಸಂಭಾವ್ಯ ಸ್ಥಳಗಳಲ್ಲಿ ಆರ್ಥಿಕ ಕಾರ್ಯಸಾಧ್ಯತಾ ವರದಿ (Feasibility Report) ಸಿದ್ಧಪಡಿಸಲು ನಿರ್ಧರಿಸಿದೆ.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಇದು ಮಹತ್ವದ ಬೆಳವಣಿಗೆ ಎಂದೇ ಪರಿಗಣಿಸಲಾಗಿದೆ. ಶೀಘ್ರದಲ್ಲೇ ಇದಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗುವ ಸಾಧ್ಯತೆ ಇದೆ. ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ತಾಂತ್ರಿಕ ತಂಡವು ಈಗಾಗಲೇ ಮೂರು ಸ್ಥಳಗಳಿಗೆ ಭೇಟಿ ನೀಡಿತ್ತು. ಅಲ್ಲದೇ ಅಧ್ಯಯನವನ್ನೂ ಮಾಡಿ ಆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಆದರೆ ಯಾವ ಸ್ಥಳ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಉತ್ತಮವಾಗಿದೆ ಅಥವಾ ಮೂರು ಜಾಗಗಳು ಸೂಕ್ತವಲ್ಲವೇ ಎನ್ನುವುದಕ್ಕೆ ಸಂಬಂಧಿಸಿದಂತೆ ಯಾವುದೇ ವರದಿಯನ್ನೂ ಇಲ್ಲಿಯ ವರೆಗೆ ಸಲ್ಲಿಕೆ ಮಾಡಿಲ್ಲ. ಇದೀಗ ಕರ್ನಾಟಕ ಸರ್ಕಾರವು ಮೂರೂ ಜಾಗಗಳ ಆರ್ಥಿಕ ಕಾರ್ಯಸಾಧ್ಯತೆಗಳನ್ನು ಅಧ್ಯಯನ ಮಾಡಲು ಮುಂದಾಗಿದೆ.
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುತಿಸಿರುವ ಪ್ರಮುಖ ಪ್ರದೇಶಗಳು: ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕನಕಪುರ ರಸ್ತೆಯ ಕಗ್ಗಲೀಪುರ - ಬಿಡದಿ ನಡುವಿನ ಪ್ರದೇಶ, ಹಾರೋಹಳ್ಳಿ ಸಮೀಪದ ಪ್ರದೇಶ ಹಾಗೂ ನೆಲಮಂಗಲದಿಂದ ಕುಣಿಗಲ್‌ಗೆ ಸಾಗುವ ರಾಷ್ಟ್ರೀಯ ಹೆದ್ದಾರಿ-75ಕ್ಕೆ ಹೊಂದಿಕೊಂಡಿರುವ ಜಾಗ ಪ್ರಾಥಮಿಕವಾಗಿ ಗುರುತಿಸಲಾಗಿತ್ತು. ಇದಲ್ಲದೇ ಮಾಗಡಿ ರಸ್ತೆಯಲ್ಲೂ ಪರಿಶೀಲನೆ ನಡೆದಿತ್ತು. ಆದರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಇನ್ನೂ ವರದಿ ಸಲ್ಲಿಕೆ ಮಾಡಿಲ್ಲ.












Click it and Unblock the Notifications