Bengaluru Second Airport: ತುಮಕೂರಲ್ಲೇ 2ನೇ ಏರ್‌ಪೋರ್ಟ್‌? ತಾಂತ್ರಿಕ ಲಾಭ ನೋಡಬೇಕು: ಜಿ.ಪರಮೇಶ್ವರ

ಬೆಂಗಳೂರು: ರಾಜಧಾನಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಮೇಲಿನ ಒತ್ತಡ ಕಡಿಮೆ ಮಾಡಲು ಹೊಸದಾಗಿ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru Second International Airprot) ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಗೊತ್ತೇ ಇದೆ. ಈ 'ಯೋಜನೆಯಿಂದ ತಾಂತ್ರಿಕವಾಗಿ ಎಷ್ಟು ಉಪಯೋಗವಾಗುತ್ತದೆ' ಎಂಬುದು ಪರಿಗಣಿಸಬೇಕು ಎಂದಿರುವ ಡಿಸಿಎಂ ಡಾ.ಜಿ.ಪಮರೇಶ್ವರ್ ಅವರು ಮತ್ತೊಮ್ಮೆ ತುಮಕೂರಿನಲ್ಲೇ 2ನೇ ಏರ್ ಪೊರ್ಟ್ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

ಬರಗಾಲ ಹಾಗೂ ಎರಡನೇ ಏರ್ ಪೋರ್ಟ್ ಕುರಿತು ಸೋಮವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಮಾತನಾಡಿದ ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ ಅವರು 2ನೇ ಏರ್‌ಪೋರ್ಟ್‌ ತುಮಕೂರಿನಲ್ಲೇ ಮಾಡಬೇಕು ಎಂದು ಪತ್ರ ಬರೆದಿದ್ದಕ್ಕೆ ಪ್ರತಿಕ್ರಿಯಿಸಿದರು. ಈ ಹಿಂದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಎರಡನೇ ಏರ್‍‌ಪೋರ್ಟ್‌ ನಿರ್ಮಿಸಬೇಕೆಂಬ ಆಗ್ರಹವನ್ನು ಮತ್ತೊಮ್ಮೆ ಪುನರುಚ್ಚರಿಸಿ ಡಿಸಿಎಂ ಒಂದಷ್ಟು ಮಹತ್ವದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಇತ್ತ ಸಿಎಂ ಡಿಕೆ ಶಿವಕುಮಾರ್ ಅವರು ಕನಕಪುರ ಸುತ್ತಮುತ್ತ ನಿರ್ಮಿಸಬೇಕೆಂಬ ಮಹಾದಾಸೆ ಹೊಂದಿದ್ದು, ಈ ಯೋಜನೆ ನಾಯಕರ ಪ್ರತಿಷ್ಠೆ ಆಗುತ್ತಾ? ಎಂಬ ಕೂತುಹಲ ದಿನೇ ದಿನೇ ಹಚ್ಚಾಗುತ್ತಿದೆ.

Bengaluru Second Airport

ಬೆಂಗಳೂರು ಎರಡನೇ ಏರ್ ಪೋರ್ಟ್‌ ಎಲ್ಲಿ ಸ್ಥಾಪಿಸಬೇಕು ಎಂಬ ವಿಚಾರವಾಗಿ 'ನಾನು ಈ ಬಗ್ಗೆ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ತಾಂತ್ರಿಕವಾಗಿ ಮತ್ತು ಅದರ ಉಪಯೋಗ ಎಷ್ಟರ ಮಟ್ಟಿಗೆ ಆಗಲಿದೆ ಎನ್ನುವುದನ್ನು ನೋಡಬೇಕಾಗುತ್ತದೆ' ಎಂದು ಹೇಳಿದರು. ಎಲ್ಲಿ ನಿರ್ಮಿಸಬೇಕೆಂದು ಇನ್ನೂ ಅಂತಿಮವಾಗಿಲ್ಲ. ಒಂದು ವೇಳೆ ತುಮಕೂರಲ್ಲಿ ನಿರ್ಮಿಸಲು ಮುಂದಾದರೆ ಸ್ಥಳ ಆಯ್ಕೆಯಲ್ಲಿ ಮತ್ತೆ ಟ್ವಿಸ್ಟ್ ಸಿಕ್ಕಂತಾಗಲಿದೆ.

ತುಮಕೂರಲ್ಲಾದ್ರೆ 20 ಜಿಲ್ಲೆಗಳಿಗೆ ಅನುಕೂಲ

ತುಮಕೂರಿನಲ್ಲೇ ಹೊಸ ಏರ್‍‌ಪೋರ್ಟ್ ಸ್ಥಾಪನೆಯಾದರೆ ಅದರಿಂದ ರಾಜ್ಯದ ಸುಮಾರು 20 ಜಿಲ್ಲೆಗಳಿಗೆ ಅನುಕೂಲವಾಗುತ್ತದೆ. ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕ ಸಾಧಿಸಲು ಸುಲಭವಾಗುತ್ತದೆ. ಆದರೆ ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ತಾಂತ್ರಿಕವಾಗಿ ತುಮಕೂರಿನಲ್ಲಿ ನಿರ್ಮಾಣ ಸಾಧ್ಯನಾ ಅಥವಾ ಇಲ್ಲವಾ? ಎಂಬುದರ ಬಗ್ಗೆ ಪರಿಶೀಲಿಸುತ್ತಾರೆ ಎಂದು ಅವರು ತಿಳಿಸಿದರು.

ಡಾ.ಜಿ.ಪರಮೇಶ್ವರ್, ವಿ.ಸೋಮಣ್ಣ ಸೇರಿದಂತೆ ಕೆಲ ನಾಯಕರಿಗೆ ತುಮಕೂರು ವ್ಯಾಪ್ತಿಯಲ್ಲಿ ಹೊಸ ಏರ್‌ಪೊರ್ಟ್ ನಿರ್ಮಿಸಬೇಕೆಂಬ ಹೆಬ್ಬಯಕೆ ಇದೆ. ಆದರೆ ಕನಕಪುರ ರಸ್ತೆ, ಕುಣಿಗಲ್ ರಸ್ತೆಗಳನ್ನು ಗುರುತಿಸಿದ್ದ ರಾಜ್ಯ ಸರ್ಕಾರಕ್ಕೆ ತುಮಕೂರು ಭಾಗದಲ್ಲಿ ನಿರ್ಮಿಸುವ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ.

ಡಿಸಿಎಂ ಅವರಿಂದ ಜಿಲ್ಲೆಯ ಬರ ಪರಿಶೀಲನೆ

ತುಮಕೂರಿನ ಕೆಲವು ತಾಲೂಕುಗಳಲ್ಲಿ ಇನ್ನೂ ಮಳೆಯಾಗದೇ ಇರುವುದರಿಂದ ಗಂಭೀರ ಬರ ಪರಿಸ್ಥಿತಿ ಎದುರಾಗಿದೆ. ಇಂದು ಮತ್ತು ನಾಳೆ (ಸೋಮವಾರ ಮತ್ತು ಮಂಗಳವಾರ)ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸುವುದಾಗಿ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

ಈಗಾಗಲೇ ಮುಖ್ಯಮಂತ್ರಿಗಳು ಮತ್ತು ನಾನು 3 ವಿಭಾಗಗಳನ್ನು ಮಾಡಿ, ಪ್ರತಿಯೊಂದು ತಾಲೂಕಿನ ಬರ ಪರಿಸ್ಥಿತಿ ಹೇಗಿದೆ ಎಂದು ಅವಲೋಕನೆ ಮಾಡಿದ್ದೇವೆ. ನಾನು ನಾಲ್ಕೈದು ಜಿಲ್ಲೆಗಳಿಗೆ ಭೇಟಿ ಪರಿಶೀಲನೆಯನ್ನು ನಡೆಸಿದ್ದೇನೆ. ತುಮಕೂರು ಜಿಲ್ಲೆಯದ್ದು ಮಾಡಿದ್ದೆ. ಆದರೆ, ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ಸೇರಿದಂತೆ ಇನ್ನೂ ಕೆಲವು ತಾಲೂಕುಗಳಲ್ಲಿ ಗಂಭೀರ ಬರ ಪರಿಸ್ಥಿತಿ ಏರ್ಪಟ್ಟಿದ್ದು. ಇಂದು ಮತ್ತು ನಾಳೆ ಅಲ್ಲಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಲಿದ್ದೇನೆ ಎಂದರು.

ರಾಜ್ಯ ಇತರ ಕಡೆಗಳಲ್ಲಿ ಮಳೆ ಆಗಿಲ್ಲ, ಬರಗಾಲ!

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳನ್ನು ಬಿಟ್ಟರೆ ಬೇರೆ ಯಾವುದೇ ಕಡೆಗಳಲ್ಲಿ ಹೇಳುವಷ್ಟು ಮಳೆಯಾಗಿಲ್ಲ. ಕೆಆರ್‌ಎಸ್‌, ಕಬಿನಿ ಜಲಾಶಯಗಳಲ್ಲಿ ನೀರು ಕೊಂಚ ಹೆಚ್ಚಾಗಿದೆ. ಮಹಾರಾಷ್ಟ್ರ ಭಾಗದಲ್ಲಿ ಮಳೆಯಾದ್ದರಿಂದ ಉತ್ತರ ಕರ್ನಾಟಕದ ಆಲಮಟ್ಟಿ, ನಾರಾಯಣಪುರ ಡ್ಯಾಂಗಳು ಸ್ವಲ್ಪ ಮಟ್ಟಿಗೆ ತುಂಬಿದೆ. ಆದರೆ, ಬಯಲು ಪ್ರದೇಶದಲ್ಲಿ ಗಂಭೀರ ಪರಿಸ್ಥಿತಿ ಇದೆ. ಹೀಗಾಗಿ ಬರ ಪರಿಸ್ಥಿತಿಯ ಸಂಪೂರ್ಣ ಅವಲೋಕನ ನಡೆಸುತ್ತೇವೆ. ಈಗಾಗಲೇ ಕೆಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಸದನದಲ್ಲೂ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೊಂದಲ ಅಂತೇನಿಲ್ಲ. ಮುಖ್ಯಮಂತ್ರಿಗಳು ಹೈಕಮಾಂಡ್‌ ಜೊತೆಗೆ ಚರ್ಚೆ ಮಾಡಿದ್ದಾರೆ. ಹೊಸದಾಗಿ ಸಚಿವರು ಆದವರಿಗೆ ಪ್ರಾರಂಭದಲ್ಲಿ ಗೊಂದಲಗಳು ಆಗುವುದು ಸಹಜ. ನಂತರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿವರಣೆ ನೀಡುತ್ತಾರೆ. ನಮಗೂ ಕೂಡ ಮೊದಲ ಬಾರಿ ಮಂತ್ರಿಯಾದಾಗ ಹಾಗೆಯೇ ಆಗಿತ್ತು. ಸದನದಲ್ಲೂ ಉತ್ತರ ನೀಡಲು ಅವರು ಸಮರ್ಥರಿದ್ದಾರೆ. ಯಾವುದೇ ರೀತಿಯಲ್ಲೂ ಸಮಸ್ಯೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಟೋಲ್‌ ಕಟ್ಟದಂತೆ ಎಚ್‌ಡಿಕೆ ಕರೆ: ಏನಂದ್ರು ಪರಂ?

ನೈಸ್‌ ರಸ್ತೆ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಟೋಲ್‌ ಕಟ್ಟಬೇಡಿ ಎಂದು ಜನರಿಗೆ ಕರೆ ಕೊಡುತ್ತಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ಕರೆ ಹೊಸತಲ್ಲ, ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ. ಆದಷ್ಟು ಬೇಗ ಪ್ರಾಜೆಕ್ಟ್‌ ಅನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ನನ್ನನ್ನೇ ಉಪಸಮಿತಿಯ ಅಧ್ಯಕ್ಷನಾಗಿ ಮಾಡಿದ್ದಾರೆ. ಈಗಾಗಲೇ 7-8 ಸಭೆಗಳನ್ನು ಮಾಡಿದ್ದೇನೆ. ಅಲ್ಲಿ ಎ, ಬಿ, ಸಿ ಎಂದು ಮೂರು ವಿಭಾಗಗಳನ್ನು ಮಾಡಿದ್ದೇವೆ. ಅಲ್ಲಿ ಯಾವ ರೀತಿಯ ಸಮಸ್ಯೆಗಳು ಆಗಿವೆ ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಇಷ್ಟು ವರ್ಷಗಳ ನಂತರ ಯೋಜನೆಯನ್ನು ನಿಲ್ಲಿಸಲು ಆಗುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಇದೆಲ್ಲದರ ಬಗ್ಗೆ ಪರಿಶೀಲಿಸಿ, ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ ಎದು ಹೇಳಿದರು.

ಬಿಡದಿ ಜಂಟಿ ಪಾದಯಾತ್ರೆ

ಬಿಡದಿ ವಿಚಾರವಾಗಿ ಬಿಜೆಪಿ/ ಜೆಡಿಎಸ್‌ ಪಾದಯಾತ್ರೆ ಕೈಗೊಂಡಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿಭಟನೆ ಮಾಡಲು ಅವರಿಗೆ ಹಕ್ಕಿದೆ, ಮಾಡಲಿ. ಆರ್ಟಿಫೀಶಿಯಲ್‌ ಇಂಟಲಿಜೆನ್ಸ್‌ನ ದೊಡ್ಡ ಸೆಂಟರ್‌ ಅನ್ನೇ ಅಲ್ಲಿ ಮಾಡುವ ಪ್ರಸ್ತಾವನೆ ಇರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಿರುವಾಗ ವಿಪಕ್ಷದವರು ಒಳ್ಳೆಯ ದೃಷ್ಟಿಯಲ್ಲಿ ನೋಡಿದರೆ ಉತ್ತಮ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+