Bengaluru Second Airport: ಈ ಕೆಲಸ ಮಾಡಿದರೆ ಬೆಂಗಳೂರು 2ನೇ ವಿಮಾನ ನಿಲ್ದಾಣವೇ ಬೇಡ!

Bengaluru Second Airport: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣವನ್ನು ನಮ್ಮ ಜಿಲ್ಲೆಯಲ್ಲಿ ಮಾಡಿ.. ನಮ್ಮ ಜಿಲ್ಲೆಯಲ್ಲಿ ಮಾಡಿ ಎಂದು ಕರ್ನಾಟಕ ಕಾಂಗ್ರೆಸ್‌ನ ಪ್ರಭಾವಿ ಸಚಿವರು ಒತ್ತಾಯಿಸುತ್ತಿರುವ ಸಂದರ್ಭದಲ್ಲಿಯೇ ಈ ಕಾರಣಗಳಿಗೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಡ ಹಾಗೂ ಈ ಕೆಲಸಗಳನ್ನು ಮಾಡಿದರೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಬೇಡ ಎನ್ನುವ ವಿಷಯಗಳು ಚರ್ಚೆಯ ಮುನ್ನೆಲೆಗೆ ಬಂದಿದೆ. ಕರ್ನಾಟಕ ಸರ್ಕಾರವು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ (ಹೂಡಿಕೆದಾರರಿಂದ) ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ, ಎರಡು ಕೆಲಸಗಳನ್ನು ಮಾಡಿದರೆ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆಯೇ ಇಲ್ಲ.

ಹೌದು ಕರ್ನಾಟಕ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ನಡುವೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಭಾರೀ ಪೈಪೋಟಿ ನಡೆದಿದೆ. ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇನ್ನು 5ರಿಂದ 8 ವರ್ಷಗಳ ಅವಧಿಯಲ್ಲಿ ಭಾರೀ ಒತ್ತಡ ಉಂಟಾಗಲಿದೆ. ಈ ಕಾರಣಕ್ಕಾಗಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 3 ಜಾಗಗಳನ್ನ ಶಾರ್ಟ್‌ ಲಿಸ್ಟ್‌ ಸಹ ಮಾಡಿಕೊಳ್ಳಲಾಗಿದೆ. ಆದರೆ, ಸರ್ಕಾರ ಬೆಂಗಳೂರು ಎರಡನೇ ವಿಮಾನ ನಿಲ್ದಾಣವನ್ನು ಮಾಡದೆಯೂ ಅಭಿವೃದ್ಧಿ ಮಾಡುವುದಕ್ಕೆ ಸಾಧ್ಯವಿದೆ ಎಂದು ಜನ ಹೇಳುತ್ತಿದ್ದಾರೆ.

Bengaluru Second Airport If Karnataka Government Does This No Need New Airport

ನಗರದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರ ವೇಗವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ, ಈಗಾಗಲೇ ಇರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಾಗೂ ಎಚ್‌ಎಎಲ್ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಮಾಡಿದರೆ ಇನ್ನು 2ರಿಂದ 3 ದಶಕಗಳ ಅವಧಿಗೆ ಅಂದರೆ, 20ರಿಂದ 30 ವರ್ಷಗಳ ಕಾಲಕ್ಕೆ ಹೊಸ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಅವಶ್ಯಕತೆಯೇ ಇರುವುದಿಲ್ಲ.

Take a Poll

ಬೆಂಗಳೂರು ಬೆಳೆಯುತ್ತಿದೆ. ಆದರೆ ನಮ್ಮ ಬಳಿ ಈಗಾಗಲೇ ಇರುವ ಸೌಲಭ್ಯಗಳನ್ನು ಬಳಸಿಕೊಂಡರೆ ಹೊಸ ವಿಮಾನ ನಿಲ್ದಾಣದ ಯೋಜನೆಯನ್ನು ತಡವಾಗಿ ಮಾಡಿದರೂ ನಡೆಯುತ್ತದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಈಗಾಗಲೇ ಬೆಂಗಳೂರಿನಲ್ಲಿ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲಿರುವ ಮತ್ತೊಂದು ನಗರದಲ್ಲೂ ವಿಮಾನ ನಿಲ್ದಾಣವನ್ನು ನಿರ್ಮಿಸಿಕೊಳ್ಳಬಹುದು. ಈಗಾಗಲೇ ಅಭಿವೃದ್ಧಿಯಾಗಿರುವ ಪ್ರದೇಶದಲ್ಲೇ ಮತ್ತೊಂದು ಮಹತ್ವದ ಅಭಿವೃದ್ಧಿಯಾದರೆ, ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಸೃಷ್ಟಿಯಾಗಲಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಒತ್ತಡ ಹೆಚ್ಚಳವಾಗಲಿದೆ ಎನ್ನುವ ಅಭಿಪ್ರಾಯವೂ ಜನರಿಂದ ಕೇಳಿ ಬಂದಿದೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಇದೆ. ಮತ್ತೊಂದು ವಿಮಾನ ನಿಲ್ದಾಣ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ನಿರ್ಮಾಣವಾಗುವುದರಿಂದ ಬೆಂಗಳೂರಿನ ಮೇಲೆ ಒತ್ತಡ ಹೆಚ್ಚಾಗಲಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹ ಹೇಳಿದ್ದಾರೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದಿಂದ ಭಾರೀ ಲಾಭವಾಗಲಿದೆ ಭೂಮಿಗೆ ಬಂಗಾರದ ಬೆಲೆ ಬರಲಿದೆ ಎನ್ನುವ ಲೆಕ್ಕಾಚಾರಗಳ ನಡುವೆಯೇ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಬೇಡ ಎನ್ನುವ ಬಗ್ಗೆ ಗಂಭೀರವಾದ ಚರ್ಚೆಗಳು ಶುರುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+