Bengaluru Second Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಎಫೆಕ್ಟ್: ಕನಕಪುರ-ನೆಲಮಂಗಲ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ
Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್ ಬಂದಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಪ್ರಯಾಣಿಕರ ದಟ್ಟಣೆ ತೀವ್ರವಾಗಿ ಏರುತ್ತಲೇ ಇರುವುದರಿಂದ, ಮುಂದಿನ ಎರಡು ದಶಕಗಳಲ್ಲಿ ಮತ್ತಷ್ಟು ವಿಸ್ತರಿಸುವ ನಿರೀಕ್ಷೆ ಇದೆ. ಹೀಗಾಗಿ, ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಅನಿವಾರ್ಯವಾಗಿದೆ. ಈ ನಡುವೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಿಯಲ್ ಎಸ್ಟೇಟ್‌ಗೆ ಬೂಸ್ಟ್ ಸಿಕ್ಕಂತೆ ಆಗಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗ ಅಂತಿಮವಾಗುವ ಮೊಲದೇ ಬೆಂಗಳೂರಿನ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್ ಚಿಗುರಿದೆ. ಅಲ್ಲದೆ ಬೆಂಗಳೂರು ಉತ್ತರ ಹಾಗೂ ದಕ್ಷಿಣದ ವಿವಿಧ ಭಾಗಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವುದಕ್ಕೆ ಶುರುವಾಗಿದೆ.
ಕರ್ನಾಟಕ ಸರ್ಕಾರವು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇನ್ನೂ ಜಾಗ ಫೈನಲ್ ಮಾಡಿಲ್ಲ. ಈ ರೀತಿ ಇರುವಾಗಲೇ ಈ ಬೃಹತ್ ಮೂಲಸೌಕರ್ಯ ಯೋಜನೆಯ ಬಗ್ಗೆ ಭಾರೀ ಲೆಕ್ಕಾಚಾರ ಶುರುವಾಗಿದೆ. ದಕ್ಷಿಣ ಮತ್ತು ಪಶ್ಚಿಮ ಬೆಂಗಳೂರಿನ ಕೆಲವು ಭಾಗಗಳಲ್ಲಿ ಭೂಮಿ ಮಾರಾಟ ಹಾಗೂ ಖರೀದಿ ಪ್ರಕ್ರಿಯೆ ಜೋರಾಗಿದೆ.
ದಿ ಹಿಂದೂ ಬಿಸಿನೆಸ್ ಲೈನ್ ವರದಿಯ ಪ್ರಕಾರ, ಕನಕಪುರ ರಸ್ತೆ, ಹಾರೋಹಳ್ಳಿ, ನೆಲಮಂಗಲ ಮತ್ತು ಕುಣಿಗಲ್‌ನಂತಹ ಪ್ರದೇಶಗಳು ಹೂಡಿಕೆದಾರರ ಆಸಕ್ತಿಯನ್ನು ಹೆಚ್ಚಿಸುತ್ತಿವೆ. ವಿಮಾನ ನಿಲ್ದಾಣ ನಿರ್ಮಾಣವು ಈ ಕಾರಿಡಾರ್‌ಗಳನ್ನು ಗಮನಾರ್ಹವಾಗಿ ಮರುರೂಪಿಸಬಹುದೆಂಬ ನಿರೀಕ್ಷೆಗಳ ನಡುವೆ ಡೆವಲಪರ್‌ಗಳು ಮತ್ತು ರಿಯಲ್ ಎಸ್ಟೇಟ್ ಹೂಡಿಕೆದಾರರ ಲೆಕ್ಕಾಚಾರವಾಗಿದೆ.
ಕನಕಪುರ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ
ಇನ್ನು ಬೆಂಗಳೂರು ದಕ್ಷಿಣ ಭಾಗದ ಕನಕಪುರದಲ್ಲಿ ಭೂಮಿಗೆ ಅಕ್ಷರಶಃ ಚಿನ್ನದ ಬೆಲೆ ಬಂದಿದೆ. ಕನಕಪುರ ರಸ್ತೆ-ಹಾರೋಹಳ್ಳಿ ಮಾರ್ಗವು ಇಲ್ಲಿಯವರೆಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಆಕರ್ಷಕವಾಗಿದೆ. ಇದು ವಸತಿ ಮೂಲಸೌಕರ್ಯ, ಮೆಟ್ರೋ ಸಂಪರ್ಕ ಮತ್ತು ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿ ಇರುವುದು ಇದರ ಪ್ಲಸ್ ಪಾಯಿಂಟ್ ಆಗಿದೆ.
ಕಳೆದ ಆರರಿಂದ ಎಂಟು ತಿಂಗಳುಗಳಲ್ಲಿ ಕನಕಪುರ ರಸ್ತೆಯ ಉದ್ದಕ್ಕೂ ಭೂಮಿಯ ಬೆಲೆ - ಪ್ರಾಪರ್ಟಿ ಬೆಲೆಯು ಎರಡು ಪಟ್ಟು ಹೆಚ್ಚಳವಾಗಿದೆ. ಇನ್ನು ಚುಡಹಳ್ಳಿ, ಸೋಮನಹಳ್ಳಿ ಮತ್ತು ಕಗ್ಗಲಿಪುರದಂತಹ ವಿವಿಧ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ ಬರುವುದಕ್ಕೆ ಪ್ರಾರಂಭವಾಗಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವು ಚುರುಕು ಪಡೆದುಕೊಳ್ಳುತ್ತಿದ್ದಂತೆಯೇ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಪ್ರಾಪರ್ಟಿ ಬೆಲೆ ಹೆಚ್ಚಳವಾಗಿದೆ.
ಕಳೆದ ಎರಡು ವರ್ಷಗಳಿಂದಲೂ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಚರ್ಚೆ ಪ್ರಾರಂಭವಾದಾಗಿನಿಂದಲೂ ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಆದರೆ ಇದೀಗ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಜಾಗಗಳು ಶಾರ್ಟ್‌ಲಿಸ್ಟ್ ಮಾಡಿದ ನಂತರ ಭೂಮಿ ಬೆಲೆ ಇನ್ನಷ್ಟು ಹೆಚ್ಚಳವಾಗಿದೆ.
Bengaluru Second Airport: ನೆಲಮಂಗಲ - ಕುಣಿಗಲ್ ಭಾಗದಲ್ಲೂ ಬಂಪರ್
ಇನ್ನು ನೆಲಮಂಗಲ ಹಾಗೂ ಕುಣಿಗಲ್ ಪ್ರದೇಶಗಳಲ್ಲೂ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ನೆಲಮಂಗಲದಲ್ಲೂ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದ ಪೂರಕ ವಾತಾವರಣ ಇದೆ. ಉತ್ಪಾದನಾ ಕ್ಲಸ್ಟರ್‌ಗಳು ಮತ್ತು KIADB ಕೈಗಾರಿಕಾ ವಲಯಗಳಿಂದ ಹಾರೋಹಳ್ಳಿ ಮತ್ತು ನೆಲಮಂಗಲದ ಸುತ್ತಮುತ್ತಲಿನ ಭಾಗದಲ್ಲಿ ಪ್ರಾಪರ್ಟಿ ಬೆಲೆ ಹೆಚ್ಚಳವಾಗುತ್ತಿದೆ. ಆದಾಗ್ಯೂ, ದಕ್ಷಿಣ ಮತ್ತು ಪಶ್ಚಿಮ ಬೆಂಗಳೂರು ದೇವನಹಳ್ಳಿ ಬೆಳವಣಿಗೆಯ ಕಥೆಯನ್ನು ಅಷ್ಟು ಸುಲಭವಾಗಿ ಪುನರಾವರ್ತಿಸಲು ಸಾಧ್ಯವಿಲ್ಲ ಎಂದು ರಿಯಲ್ ಎಸ್ಟೇಟ್ ತಜ್ಞರು ಎಚ್ಚರಿಸಿದ್ದಾರೆ.












Click it and Unblock the Notifications