Bengaluru Second Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಅಭಿವೃದ್ಧಿಯ ಬಗ್ಗೆ ಮಹತ್ವದ ಚರ್ಚೆ!
ಕರ್ನಾಟಕದಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳ ನಿರ್ಮಾಣ ಹಾಗೂ ಅಭಿವೃದ್ಧಿಯ ಬಗ್ಗೆ ಶುಕ್ರವಾರ (ಏಪ್ರಿಲ್ 4) ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಭೇಟಿ ಮಾಡಿ ಮಹತ್ವದ ಚರ್ಚೆಯನ್ನು ಮಾಡಿದ್ದಾರೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ಭಾರತೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿ ಪ್ರಾಧಿಕಾರ (AAI)ದ ಸದಸ್ಯರು ಮುಂದಿನ ವಾರ ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ನಡೆದಿರುವ ಈ ಚರ್ಚೆಯು ಭಾರೀ ಮಹತ್ವವನ್ನು ಪಡೆದುಕೊಂಡಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವು ಇದೀಗ ಎರಡನೇ ಹಂತಕ್ಕೆ ತಲುಪಿದೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದು. ಇದೀಗ ಈ ಜಾಗಗಳನ್ನು ಕೇಂದ್ರ ತಂಡವು ಏಪ್ರಿಲ್ ಮೊದಲೇ ವಾರದಲ್ಲಿ ಅಥವಾ ಎರಡನೇ ವಾರದಲ್ಲಿ ಪರಿಶೀಲನೆ ಮಾಡುವುದಾಗಿ ಹೇಳಿತ್ತು. ಇದೀಗ ಸೋಮವಾರದಿಂದ ಬುಧವಾರದ (ಏಪ್ರಿಲ್ 7ರಿಂದ 9ರ) ಒಳಗಾಗಿ ಕೇಂದ್ರ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

ನಗರದಲ್ಲಿ ಎರಡನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದಲೂ ಚರ್ಚೆ ನಡೆಯುತ್ತಿದೆ. ಇದೀಗ ವಿಮಾನ ನಿಲ್ದಾಣದ ನಿರ್ಮಾಣ ವಿಚಾರವು ಎರಡನೇ ಹಂತಕ್ಕೆ ಬಂದಿದೆ. ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸ್ಥಳ ಪರಿಶೀಲನೆ ಹಂತದಲ್ಲಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದೊಂದಿಗೆ ಮಹತ್ವದ ಚರ್ಚೆಯನ್ನು ಮಾಡಿದ್ದಾರೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಟೆಕ್ನಿಕ್ ಕ್ಲಿಯರೆನ್ಸ್ ಕೊಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರವು ಮನವಿ ಮಾಡಿದೆ. ಇನ್ನು ಶಾರ್ಟ್ ಲಿಸ್ಟ್ ಮಾಡಲಾಗಿರುವ ಮೂರು ಪ್ರದೇಶಗಳಿಗೆ ಬೇಗ ಭೇಟಿ ನೀಡುವಂತೆಯೂ ಈ ಸಂದರ್ಭದಲ್ಲಿ ಮನವಿ ಮಾಡಲಾಗಿದೆ.
ಮೂರು ವಿಮಾನ ನಿಲ್ದಾಣಗಳ ಬಗ್ಗೆ ಚರ್ಚೆ: ಇನ್ನು ಕೇಂದ್ರ ಸಚಿವರನ್ನು ಭೇಟಿಯಾಗಿರುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಮೂರು ವಿಮಾನ ನಿಲ್ದಾಣಗಳ ಅಭಿವೃದ್ಧಿಯ ಬಗ್ಗೆ ವಿಶೇಷ ಪ್ರಸ್ತಾವನೆಯನ್ನು ಸಲ್ಲಿಸಿದೆ. ಆ ವಿಮಾನ ನಿಲ್ದಾಣಗಳು ಮೈಸೂರು, ಕಲಬುರಗಿ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳಾಗಿವೆ.

ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿಗೆ ವಿಶೇಷ ಮನವಿ
ಇನ್ನು ಇದೇ ಸಂದರ್ಭದಲ್ಲಿ ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿಯ ಬಗ್ಗೆಯೂ ಮಾತನಾಡಿದ್ದು. ಇಲ್ಲಿನ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಮಾಡುವ ಸಂಬಂಧ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀರ್ಘ ಪತ್ರವನ್ನೇ ಬರೆದಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು ಎಂದು ಹೇಳಲಾಗಿದೆ.
ಅಲ್ಲದೇ ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಇನ್ನು ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಇದ್ದರು.












Click it and Unblock the Notifications