Bengaluru 2nd Airport: ಎಚ್‌ಎಎಲ್ ಅಭಿವೃದ್ಧಿ ಆಗದೆ ಇರುವುದಕ್ಕೆ ಇದೇ ಕಾರಣ ?
Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಹಿಂದೂಸ್ತಾನ್ ಏರೊನಾಟಿಕ್ಸ್ ಲಿ ( ಎಚ್‌ಎಎಲ್) ಅಭಿವೃದ್ಧಿಯ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಮಾತನಾಡುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. ಈಗಾಗಲೇ ಇರುವ ವಿಮಾನ ನಿಲ್ದಾಣದ ಅಭಿವೃದ್ಧಿಯನ್ನು ಮಾಡದೆ ಹೊಸ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಸರ್ಕಾರ ಯಾಕೆ ಮುಂದಾಗಿದೆ ಎನ್ನುವ ಪ್ರಶ್ನೆ ಜೋರಾಗಿದೆ. ಇದರ ನಡುವೆ ಈ ರೀತಿ ಸರ್ಕಾರ ಎರಡನೇ ವಿಮಾನ ನಿಲ್ದಾಣದ ಹಿಂದೆ ಬಿದ್ದಿರುವುದರ ಹಿಂದೆ ಹಲವು ಲೆಕ್ಕಾಚಾರಗಳು ಇವೆ ಎಂದೇ ಹೇಳಲಾಗುತ್ತಿದೆ. ಎಚ್‌ಎಎಲ್ ಅಭಿವೃದ್ಧಿಯಾದರೆ ಸಾಕಷ್ಟು ಅನುಲಕೂಲವಾಗಲಿದೆ. ಇದರಿಂದ ಎರಡನೇ ವಿಮಾನ ನಿಲ್ದಾಣದ ಅವಶ್ಯತೆ ಸದ್ಯಕ್ಕೆ ಇರುವುದಿಲ್ಲ ಎಂದೂ ಹೇಳಲಾಗುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಳವಾಗುತ್ತಿದ್ದು. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಪರ್ಯಾಯ ವಿಮಾನ ನಿಲ್ದಾಣ ಬೇಕೇ ಬೇಕು. ಆದರೆ ಈಗಾಗಲೇ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಚ್‌ಎಎಲ್ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಬಿಜೆಪಿ ಸರ್ಕಾರವಾಗಲೇ ಇಲ್ಲವೇ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಗಲಿ ಮನಸ್ಸು ಮಾಡುತ್ತಿಲ್ಲ ಇದಕ್ಕೆ ಮುಖ್ಯ ಕಾರಣ. ಎಚ್‌ಎಎಲ್ ವಿಮಾನ ನಿಲ್ದಾಣ ಅಭಿವೃದ್ಧಿಯಾದರೆ ಕೆಲವು ವರ್ಷಗಳ ವರೆಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಅವಶ್ಯಕತೆಯೇ ಇರುವುದಿಲ್ಲ ಎಂದೇ ಹೇಳಲಾಗುತ್ತಿದೆ.

ನಗರದ ಹೃದಯಭಾಗದಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣವಿದೆ. ಆದರೆ, ಈ ವಿಮಾನ ನಿಲ್ದಾಣ ಇದೀಗ ಕಾರ್ಯ ನಿರ್ಹವಹಿಸುತ್ತಿಲ್ಲ. ಅದರಲ್ಲೂ ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಮೇಲೆ ಈ ವಿಮಾನ ನಿಲ್ದಾಣ ಇನ್ನಷ್ಟು ಮೂಲೆಗುಂಪಾಗಿದೆ ಎಂದೇ ಹೇಳಬಹುದು. ಈ ವಿಮಾನ ನಿಲ್ದಾಣ ಅಭಿವೃದ್ಧಿಯಾದರೆ ಸಾಕಷ್ಟು ಅನುಕೂಲವಾಗಲಿದೆ. ಅಲ್ಲದೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಬೀಳುವುದು ಕಡಿಮೆ ಆಗಲಿದೆ ಎಂದೇ ಹೇಳಲಾಗುತ್ತಿದೆ. ಅಲ್ಲದೆ ಈ ವಿಮಾನ ನಿಲ್ದಾಣ ಅಭಿವೃದ್ಧಿ ಮಾಡದೆ ಇರುವುದರ ಹಿಂದೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಲಾಬಿ ಜೋರಾಗಿದೆ.
ಅದೂ ಅಲ್ಲದೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಯು ದೀರ್ಘಕಾಲದ ಪರಿಹಾರವಾಗಿದ್ದು, ಭೂಮಿಗೆ ಹೊಸ ಬೆಲೆ ಬರುವುದು ಹಾಗೂ ಹೂಡಿಕೆದಾರರನ್ನು ದಕ್ಷಿಣ ಕರ್ನಾಟಕದ ಹೊಸ ಭಾಗದಲ್ಲಿ ಸೆಳೆಯುವುದಕ್ಕೆ ಸಹಕಾರಿಯಾಗಲಿದೆ ಎಂದೇ ಹೇಳಲಾಗುತ್ತಿದೆ.
ಹಲವು ನಾಯಕರ ಒತ್ತಾಯ: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕಿಂತ ಇಲ್ಲವೇ ಎರಡನೇ ವಿಮಾನ ನಿಲ್ದಾಣದ ಬದಲು ಈಗಾಗಲೇ ಇರುವ ಎಚ್‌ಎಎಲ್ ವಿಮಾನ ನಿಲ್ದಾಣವನ್ನು ಪುನರಾರಂಭಿಸಬೇಕು ಹಾಗೂ ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಬೇಕು ಎನ್ನುವ ಆಗ್ರಹಗಳು ಕೇಳಿ ಬಂದಿವೆ.
ಈ ಸಂಬಂಧ ಕೇಂದ್ರ ಸಚಿವರಾದ ವಿ. ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಸಹ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಅಲ್ಲದೆ ಬೆಂಗಳೂರು ಎರಡನೇ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಮಾಡಿದರೆ ಸಾಕಷ್ಟು ಹಣ ವೆಚ್ಚವಾಗಲಿದೆ. ಸದ್ಯಕ್ಕೆ ಈ ವಿಮಾನ ನಿಲ್ದಾಣವನ್ನೇ ಅಭಿವೃದ್ಧಿ ಮಾಡಿದರೆ ವೆಚ್ಚ ಕಡಿಮೆ ಆಗಲಿದೆ ಎಂದೂ ಹೇಳಲಾಗುತ್ತಿದೆ.












Click it and Unblock the Notifications