Bengaluru Second Airport: 2ನೇ ವಿಮಾನ ನಿಲ್ದಾಣಕ್ಕೆ ಈ 3 ಸ್ಥಳವೂ ಸೂಕ್ತವಲ್ಲ; ಕೇಂದ್ರದ ಜೊತೆ ಕರ್ನಾಟಕದ ಮೀಟಿಂಗ್ ಫಿಕ್ಸ್
ಬೆಂಗಳೂರು, ಜುಲೈ 18: ರಾಜ್ಯ ರಾಜಧಾನಿಗೆ ಸನಿಹದಲ್ಲೇ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಏಳು ಸ್ಥಳಗಳ ಫೈಕಿ ಗಿ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಈಗಾಗಲೇ ಮೂರು ಸ್ಥಳಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನ ಸಲ್ಲಿಸಿತ್ತು. ಈಗಾಗಲೇ ಮೂರು ಸ್ಥಳವನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಂದ್ರೆ ಎಎಐ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಇದೀಗ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಈಗಾಗಲೇ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ ಸೆಡ್ಡು ಹೊಡೆಯಲು ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳ ಆಯ್ಕೆಗೆ ವೇಗ ನೀಡಿದೆ. ತಮಿಳು ನಾಡು ಗುರುತಿಸಿದ್ದ ಎರಡು ಸ್ಥಳಗಳು ಏರ್‌ಪೋರ್ಟ್‌ಗೆ ಸೂಕ್ತ ಎಂದು ವರದಿ ಬಂದಿದ್ದು, ಅದರಲ್ಲಿ ಒಂದನ್ನು ಸ್ಟಾಲಿನ್ ಸರ್ಕಾರ ಫೈನಲ್ ಮಾಡಲಿದೆ. ಆದರೆ, ಬೆಂಗಳೂರಿನಲ್ಲಿ ನಿರ್ಮಾಣವಾಗಬೇಕಿದ್ದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೆಚ್ಚಿನ ಪ್ರಗತಿ ಕಾಣುತ್ತಿಲ್ಲ. ಆರಂಭದಿಂದಲೂ ಸ್ಥಳ ಆಯ್ಕೆ ಕುರಿತು ಕಾಂಗ್ರೆಸ್ ಪಾಳಯದಲ್ಲಿಯೂ ತೀವ್ರ ಪೈಪೋಟಿ ಎದುರಾಗಿತ್ತು, ಇದೀಗ ಮತ್ತೊಂದು ವಿಘ್ನ ಎದುರಾಗುತ್ತಿವೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮೂರು ಸ್ಥಳಗಳನ್ನು ಪರಿಶೀಲನೆ ನಡೆಸಿದ್ದರು ಕೂಡ ಇದುವರೆಗೂ ಯಾವುದೇ ವರದಿಯನ್ನು ನೀಡಿಲ್ಲ. ಅಲ್ಲದೇ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುತಿಸಿದ ಬೆಂಗಳೂರು ಸುತ್ತಲಿರುವ ಮೂರು ಸ್ಥಳಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ವಿಮಾನಯಾನ ತಜ್ಞರು ನೀಡಿದ್ದು, ರಾಜ್ಯ ಸರ್ಕಾರಕ್ಕೆ ದೊಡ್ಡ ಶಾಕ್ ಎದುರಾಗಿದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸಲು ಕೇಂದ್ರ ವಿಮಾನಯಾನ ಸಚಿವ ರಾಮ ಮೋಹನ್ ನಾಯ್ಡು ಅವರನ್ನು ಭೇಟಿಯಾಗಲು ರಾಜ್ಯ ಸರ್ಕಾರ ಮುಂದಾಗಿದೆ.
ಕಳೆದ ಏಪ್ರಿಲ್‌ನಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವುದಾಗಿ ತಿಳಿಸಿತ್ತು. ಸಮೀಕ್ಷೆ ನಡೆಸಿ ಮೂರು ತಿಂಗಳಾದರೂ ಸೂಕ್ತ ಸ್ಥಳ ಯಾವುದು ಎಂದು ಎಎಐ ವರದಿಯನ್ನು ಕೊಟ್ಟಿಲ್ಲ. ಹೀಗಾಗಿ ಆದಷ್ಟು ಬಗ್ಗೆ ಸ್ಥಳ ಆಯ್ಕೆ ಮಾಡಬೇಕು, ಹಾಗೂ ಆ ಸ್ಥಳ ಯಾಕೆ ಸೂಕ್ತವಲ್ಲ ಎಂಬ ಬಗ್ಗೆ ಮುಂದಿನ ವಾರ (ಜುಲೈ21, 22 ರಂದು) ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.












Click it and Unblock the Notifications