Bengaluru Second Airport: ಬೆಂಗಳೂರು 2ನೇ ವಿಮಾನ ನಿಲ್ದಾಣ: ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಎಂ.ಬಿ ಪಾಟೀಲ್ ಹೇಳಿದ್ದೇನು ?
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ ಪಾಟೀಲ ಅವರು ಮಾತನಾಡಿದ್ದಾರೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಹಲವು ದಿನಗಳಿಂದ ಭಾರೀ ಹಿನ್ನಡೆ ಅನುಭವಿಸಿತ್ತು. ಅಲ್ಲದೇ ತಮಿಳುನಾಡು ಸರ್ಕಾರವು ತಮಿಳುನಾಡಿನ ಹೊಸೂರು ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಭಾರೀ ಹಿನ್ನಡೆ ಆಗಿತ್ತು. ಕೊನೆಗೂ ಈ ವಿಷಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸೂಕ್ತ ಸಹಕಾರ ನೀಡುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿರುವಾಗಲೇ ಮಹತ್ವದ ಮಾಹಿತಿಯನ್ನು ಸಚಿವ ಎಂ.ಬಿ ಪಾಟೀಲ ಅವರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಭಾರತೀಯ ವಿಮಾನ ಪ್ರಾಧಿಕಾರ (ಎಎಐ) ಸಂಸ್ಥೆಯು ಈಗಾಗಲೇ ಸ್ಥಳ ಪರಿಶೀಲನೆ ಮಾಡಿದೆ. ಇನ್ನೇನು ಶೀಘ್ರದಲ್ಲೇ ಕಾರ್ಯಸಾಧ್ಯತಾ ವರದಿ ಸಲ್ಲಿಕೆ ಮಾಡುವ ನಿರೀಕ್ಷೆಯಿದೆ. ಆದರೆ ತಮಿಳುನಾಡಿಗೆ ಹೋಲಿಕೆ ಮಾಡಿದರೆ ಕರ್ನಾಟಕವು ನಗರದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಹಿನ್ನಡೆ ಸಾಧಿಸಿದೆ.

ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಸುಮಾರು 4500 ಎಕರೆ ಜಮೀನಿನ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಆದರೆ ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ವರೆಗೆ ಸರ್ಕಾರಿ ಮತ್ತು ಖಾಸಗಿ ಜಮೀನುಗಳ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಯಾವುದೇ ಸಮೀಕ್ಷೆ ನಡೆಸಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಆರಂಭವಾದ ನಂತರ ಜಮೀನುಗಳ ನಿಖರ ವಿವರಗಳು ಲಭ್ಯವಾಗಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ವಿಧಾನಸಭೆಗೆ ಕೊಟ್ಟಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆ ಯಾವಾಗ ಪ್ರಾರಂಭವಾಗಲಿದೆ ಹಾಗೂ ಯಾವ ಭಾಗದಲ್ಲಿ ಪ್ರಾರಂಭವಾಗಲಿದೆ ಎನ್ನುವುದಕ್ಕೆ ಉತ್ತರ ಸಿಕ್ಕಂತಾಗಿದೆ.
ತಮಿಳುನಾಡಿನ ವಿಮಾನ ನಿಲ್ದಾಣ ಪ್ರಕ್ರಿಯೆಗೆ ಹೋಲಿಕೆ ಮಾಡಿದರೆ ಬೆಂಗಳೂರಿನ ವಿಮಾನ ನಿಲ್ದಾಣ ಪ್ರಕ್ರಿಯೆಯು ತೀರ ವಿಳಂಬದ ಹಾದಿಯಲ್ಲೇ ಇದೆ. ಇನ್ನು ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಸ್ಥಳಗಳನ್ನು ಅಂತಿಮಗೊಳಿಸಲಾಗಿದ್ದು. ಈ ಸ್ಥಳಗಳ ಒಪ್ಪಿಗೆಗಾಗಿ ಕೇಂದ್ರ ನಾಗರಿಕ ವಿಮಾನ ಸಚಿವಾಲಯದ ಸ್ಟೀರಿಂಗ್ ಕಮಿಟಿಗೆ ಇದೇ ಮಾರ್ಚ್ 5 ರಂದು ರಾಜ್ಯ ಸರ್ಕಾರವು ಅರ್ಜಿ ಸಲ್ಲಿಸಿತ್ತು.
ಎಎಐ ಸಂಸ್ಥೆಯ ತಂಡವು ಏಪ್ರಿಲ್ 7 ರಂದು ಸ್ಥಳ ಪರಿವೀಕ್ಷಣೆ ನಡೆಸಿದ್ದು, ತಮ್ಮ ಪೂರ್ವ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲಿಯೇ ಸಲ್ಲಿಸುವ ನಿರೀಕ್ಷೆಯಲ್ಲಿದೆ ಎಂದಿದ್ದಾರೆ. ಆದರೆ ಕೇಂದ್ರ ಸರ್ಕಾರವು ಒಂದು ತಿಂಗಳ ಒಳಗಾಗಿ ಸಲ್ಲಿಕೆ ಮಾಡಬೇಕಾಗಿರುವ ಕಾರ್ಯಸಾಧ್ಯತಾ ವರದಿಯನ್ನು ನಾಲ್ಕು ತಿಂಗಳುಗಳಾದರೂ ನೀಡದೆ ಇರುವುದು ಅನುಮಾನಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರವು ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆಯನ್ನು ಕೊಟ್ಟರೆ ಬೇಗ ಮಾಡುವುದಾಗಿ ಹೇಳಿತ್ತು. ಆದರೆ ತಮಿಳುನಾಡಿಗೆ ಬೇಗ ಒಪ್ಪಿಗೆ ನೀಡಿದೆ. ಕರ್ನಾಟಕದ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆಯೇ ಎನ್ನುವ ಅನುಮಾನ ಶುರುವಾಗಿದೆ.











Click it and Unblock the Notifications