Bengaluru Second Airport: ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಜಾಗದ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅಪ್ಡೇಟ್ಸ್
Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಚವ ಎಂ.ಬಿ ಪಾಟೀಲ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲು ಜಾಗತಿಕ ಮಟ್ಟದ ಪರಿಣಿತ ಕಂಪೆನಿಯಾದ ಮೈನ್ ಆರ್ಡೆಟ್ - ಕೆಪಿಎಂಜಿಗೆ ಗುತ್ತಿಗೆ ನೀಡಲಾಗಿದೆ. ರಾಜ್ಯದ ಒಟ್ಟಾರೆ ಹಿತವನ್ನು ಗಮನದಲ್ಲಿರಿಸಿಕೊಂಡು ಯಾವುದೇ ಒತ್ತಡಕ್ಕೂ ಮಣಿಯದೆ ಸೂಕ್ತ ಜಾಗವನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರವು ಮುಂದಾಗಿದೆ. ಇದೀಗ ಹೊಸ ಏರ್‌ಪೋರ್ಟ್ ನಿರ್ಮಾಣಕ್ಕೆ ಶೀಘ್ರವೇ ಜಾಗ ಫೈನಲ್ ಆಗಲಿದೆ ಎಂದು ಹೇಳಲಾಗಿದೆ.
ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಜಾಗಗಳನ್ನು ಫೈನಲ್ ಮಾಡಲಾಗಿದೆ. ಚೂಡಹಳ್ಳಿ, ಕನಕಪುರ ರಸ್ತೆ ಹಾಗೂ ನೆಲಮಂಗಲ ಇದರಲ್ಲಿ ಪ್ರಮುಖವಾಗಿದೆ. ಬೆಂಗಳೂರಿನ ದಕ್ಷಿಣ ಭಾಗದಲ್ಲೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆಗಲಿದೆ ಎಂದು ಈಚೆಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು.
ಇದೀಗ ಬೆಂಗಳೂರು ನಗರದ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾವ ಜಾಗ ಸೂಕ್ತ ಎನ್ನುವುದಕ್ಕೆ ಸಂಬಂಧಿಸಿದಂತೆ ಸಿಂಗಾಪುರ ಮೂಲದ ಸಂಸ್ಥೆಯಿಂದ ಕಾರ್ಯಸಾಧ್ಯತಾ ವರದಿ ಸಲ್ಲಿಕೆಯಾಗಿದೆ. ಇನ್ನು 3 ತಿಂಗಳಲ್ಲಿ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಜಾಗ ಫೈನಲ್ ಆಗಲಿದೆ. ಉದ್ದೇಶಿತ ಮೂರು ಜಾಗಗಳ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತೆ ಅಧ್ಯಯನ ವರದಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಸಿಂಗಾರಪು ಮೂಲದ ಸಂಸ್ಥೆಗೆ ಜವಾಬ್ದಾರಿ ನೀಡಲಾಗಿದೆ.
Bengaluru Second Airport: ದಕ್ಷಿಣ ಬೆಂಗಳೂರಿಗೆ ಅದೃಷ್ಟ ಸಾಧ್ಯತೆ
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಷಯ ಚರ್ಚೆಯ ಮುನ್ನೆಲೆಗೆ ಬಂದಾಗಿನಿಂದಲೂ ದಕ್ಷಿಣ ಬೆಂಗಳೂರಿನ ಹೆಸರು ಮುಂಚೂಣಿಯಲ್ಲಿದೆ. ಕನಕಪುರ ರಸ್ತೆ - ಬೆಂಗಳೂರು ದಕ್ಷಿಣ ಭಾಗವು ಹೆಚ್ಚು ಚರ್ಚೆಯಲ್ಲಿದೆ. ದಕ್ಷಿಣ ಭಾಗದಲ್ಲಿ ಪ್ರಯಾಣಿಕರ ಸಂಖ್ಯೆ ಹಾಗೂ ಸರಕು ಸಾಗಣೆಯ ಬೇಡಿಕೆ ಹೆಚ್ಚಾಗಿರುವುದರಿಂದಾಗಿ ಹೆಚ್ಚು ಮನ್ನಣೆ ಇದೆ.
ಅಲ್ಲದೆ ಉತ್ತರ ಬೆಂಗಳೂರಿನಲ್ಲಿ ದೇವನಹಳ್ಳಿಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ ಎನ್ನುವ ವಾದವೂ ಇದೆ. ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ಸೃಷ್ಟಿಯಾಗಿರುವ ಗೊಂದಲ ಹಾಗೂ ಎಲ್ಲ ಪ್ರಶ್ನೆಗಳಿಗೂ ಇನ್ನು ಮೂರೇ ತಿಂಗಳ ಅವಧಿಯಲ್ಲಿ ಸಂಪೂರ್ಣ ಉತ್ತರ ಸಿಗಲಿದೆ.














Click it and Unblock the Notifications