Bengaluru Second Airport: 2ನೇ ವಿಮಾನ ನಿಲ್ದಾಣಕ್ಕೆ ಸ್ಥಳ ಫೈನಲ್; ದೆಹಲಿಗೆ ಎಂ ಬಿ ಪಾಟೀಲ್: ಸಂಪೂರ್ಣ ವಿವರ ತಿಳಿಯಿರಿ
ಬೆಂಗಳೂರು, ಜುಲೈ 16: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ವೇಗ ನೀಡಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರಲ್ಲಿಯೇ ಏರ್‌ಪೋರ್ಟ್ ನಿರ್ಮಾಣವಾಗುವ ಜಾಗದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದರ ನಡುವೆ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಸ್ಥಳದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದ್ದು, ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸ್ಥಳ ಆಯ್ಕೆಯನ್ನು ಫೈನಲ್ ಮಾಡಿದ್ದು, ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಿದೆ.
ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯ ಒಟ್ಟು ಮೂರು ಸ್ಥಳಗಳನ್ನು ಏರ್‌ಪೋರ್ಟ್ ನಿರ್ಮಾಣಕ್ಕೆ ಶಾರ್ಟ್ ಲಿಸ್ಟ್ ಮಾಡಿದೆ. ಬೆಂಗಳೂರು ದಕ್ಷಿಣದಲ್ಲಿಯೇ ಹೊಸ ವಿಮಾನ ನಿಲ್ದಾಣ ಆಗುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಸುತ್ತಮುತ್ತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳ ಆಯ್ಕೆ ಸಂಬಂಧ ಪರಿಶೀಲನೆ ನಡೆಸಿದ್ದ ವಿಮಾನ ನಿಲ್ದಾಣ ಪ್ರಾಧಿಕಾರವು 15 ದಿನದೊಳಗೆ ಅಂತಿಮಗೊಳಿಸುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿತ್ತು. ಇದೀಗ ಎರಡನೇ ಅಂತರಾಷ್ಟ್ರೀಯ ವಿಮಾನಿ ನಿಲ್ದಾಣ ಸ್ಥಳ ಆಯ್ಕೆ ಕುರಿತು ಮಹತ್ವದ ಮಾತುಕತೆಗೆ ಸಮಯ ಕೂಡಿ ಬಂದಿದೆ.

ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಕಾಂಗ್ರೆಸ್ ನಾಯಕರಲ್ಲಿಯೇ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊಸ ವಿಮಾನ ನಿಲ್ದಾಣ ತುಮಕೂರಿನಲ್ಲಿ ಆಗಬೇಕೆಂಬುದು ಗೃಹ ಸಚಿವ ಡಾ ಜಿ ಪರಮೇಶ್ವರ್ ಒತ್ತಾಸೆ ಆಗಿತ್ತು. ಶಿರಾದಲ್ಲಿಯೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಆಗಬೇಕು ಎಂದು ಟಿ ಬಿ ಜಯಚಂದ್ರ ಸೇರಿದಂತೆ ಹಲವು ಶಾಸಕರು ಸಿದ್ದರಾಮಯ್ಯ ಅವರಿಗೆ ಒತ್ತಡ ಹಾಕಿದ್ದರು. ಇನ್ನು, ಬಿಡದಿ ಹಾಗೂ ಹಾರೋಹಳ್ಳಿ ಭಾಗದಲ್ಲಿ ಆಗಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಕೆಲ ಸಚಿವರು ಹಾಗೂ ಪ್ರಭಾವಿಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದರು.
ರಾಜ್ಯ ಕಾಂಗ್ರೆಸ್ ನಾಯಕರೇ ಎರಡನೇ ವಿಮಾನ ನಿಲ್ದಾಣದ ಕುರಿತು ವಿಭಿನ್ನ ಹೇಳಿಕೆ ನೀಡಿದ್ದರು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೂ ಒತ್ತಡವನ್ನ ಹಾಕಿದ್ದರು. ಹೀಗಾಗಿ ಅಂತಿಮವಾಗಿ ರಾಜ್ಯ ಸರ್ಕಾರ ಮೂರು ಸ್ಥಳಗಳನ್ನು ಫೈನಲ್ ಮಾಡಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಿಕೊಟ್ಟಿದೆ. ಬೆಂಗಳೂರಿನ ಸುತ್ತಮುತ್ತ ಎರಡನೇ ಏರ್‌ಪೋರ್ಟ್ ನಿರ್ಮಾಣಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರವು ಶೀಘ್ರವಾಗಿ ಸ್ಥಳ ಆಯ್ಕೆ ಮಾಡುವ ನಿರೀಕ್ಷೆಯಲ್ಲಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದ್ದರು.
ಬೆಂಗಳೂರಿನಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಚಿವ ಎಂ ಬಿ ಪಾಟೀಲ್ ಅವರು ಮುಂದಿನ ವಾರ (ಜುಲೈ, 21 ಹಾಗೂ 22 ರಂದು) ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನ ದೆಹಲಿಯಲ್ಲಿ ಭೇಟಿಯಾಗಿ, ಮಾತುಕತೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. ನೋಯಿಡಾ, ನವೀ ಮುಂಬೈ ನೂತನ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ವಿಸ್ತೃತವಾಗಿ ಗಮನಿಸಿ, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಂ ಬಿ ಪಾಟೀಲ್ ಅವರು ಹೇಳಿದ್ದರು. ಕೇಂದ್ರ ವಿಮಾನಯಾನ ಸಚಿವ ಭೇಟಿಯ ವೇಳೆ ಸ್ಥಳ ಫೈನಲ್ ಆಗಲಿದ್ದು, ಯಾವ ಸ್ಥಳವನ್ನು ಫೈನಲ್ ಮಾಡುತ್ತದೆ ಎಂಬುದು ಸದ್ಯದ ಕುತೂಹಲ.












Click it and Unblock the Notifications