Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಪ್ರಮುಖ ಸಮಸ್ಯೆ ಪರಿಹಾರ, ಮುಂದೇನು ?
ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ಮಂದಗತಿಯಲ್ಲಿ ನಡೆಯುತ್ತಿದೆ ಎನ್ನುವ ಚರ್ಚೆಗಳ ನಡುವೆ ಇದೀಗ ಮತ್ತೊಂದು ಗುಡ್‌ನ್ಯೂಸ್ ಬಂದಿದೆ. ಬೆಂಗಳೂರಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಆದರೆ ಇದೀಗ ಬೆಂಗಳೂರಿಗೆ ಪೈಪೋಟಿ ನೀಡುವ ತಮಿಳುನಾಡಿನ ಲೆಕ್ಕಾಚಾರವು ತಲೆಕೆಳಗಾಗಿದೆ. ಇದೀಗ ನಡೆದಿರುವ ಬೆಳವಣಿಗೆಯು ಬೆಂಗಳೂರಿಗೆ ಲಾಭವಾಗಿ ಬದಲಾಗುವ ನಿರೀಕ್ಷೆ ಮೂಡಿದೆ.
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣದ ಮೇಲೆ ಇನ್ನಷ್ಟು ಒತ್ತಡವಾಗಲಿದೆ ಎಂದು ಅಂದಾಜಿಸಲಾಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಉದ್ದೇಶಿಸಲಾಗಿತ್ತು. ಇದಕ್ಕೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಮೂಲಕ ಬ್ರ್ಯಾಂಡ್ ಬೆಂಗಳೂರು ಲಾಭ ಪಡೆಯುವುದು ಹಾಗೂ ಬೆಂಗಳೂರಿಗೆ ಪೈಪೋಟಿ ನೀಡುವುದಕ್ಕೆ ಮುಂದಾಗಿತ್ತು.

ಇದೀಗ ತಮಿಳುನಾಡಿನ ಲೆಕ್ಕಾಚಾರ ತಲೆಕೆಳಗಾಗಿದ್ದು, ಇದು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಲಾಭವಾಗುವ ನಿರೀಕ್ಷೆ ಮೂಡಿದೆ. ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿ ಎರಡನೇ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಕೆಐಎನಲ್ಲಿ ಪ್ರಯಾಣಿಕರ ದಟ್ಟಣೆ ತೀವ್ರವಾಗಿ ಹೆಚ್ಚಾಗಿದೆ, ಇದು ದೇಶದ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ. ಪ್ರಯಾಣಿಕರ ನಿರ್ವಹಣೆಯಲ್ಲಿ ಮುಂಬೈಯನ್ನು ಹಿಂದಿಕ್ಕಿದೆ. ಹೀಗಾಗಿ ಬೆಂಗಳೂರಿಗೆ ಮುಂದಿನ ದಿನಗಳಲ್ಲಿ ಮತ್ತೊಂದು ವಿಮಾನ ನಿಲ್ದಾಣ ಅವಶ್ಯವಾಗಿದೆ.
ತಮಿಳುನಾಡಿಗೆ ನಿರಾಸೆ
ತಮಿಳುನಾಡು ಸರ್ಕಾರವು ತಮಿಳುನಾಡು - ಕರ್ನಾಟಕದ ಗಡಿಗೆ ಸಮೀಪದಲ್ಲಿರುವ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲು ಪ್ರಸ್ತಾಪಿಸಿದೆ. ಆದಾಗ್ಯೂ, ನಿಯಂತ್ರಕ ಮತ್ತು ಒಪ್ಪಂದದ ನಿರ್ಬಂಧಗಳು ಹೊಸೂರು ವಿಮಾನ ನಿಲ್ದಾಣವು ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನಡುವೆ ಸಹಿ ಹಾಕಲಾದ ರಿಯಾಯಿತಿ ಒಪ್ಪಂದದ ಅಡಿಯಲ್ಲಿ, ಬಿಐಎಎಲ್‌ನ ಸ್ಪಷ್ಟ ಅನುಮೋದನೆ ಇಲ್ಲದೆ 2033 ರವರೆಗೆ ಕೆಐಎಯ 150 ಕಿಲೋಮೀಟರ್ ವ್ಯಾಪ್ತಿಯೊಳಗೆ ಯಾವುದೇ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದಿಲ್ಲ.
ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣದ ಸ್ಥಳವು ಈ 150-ಕಿಲೋಮೀಟರ್ ವಲಯದ ವ್ಯಾಪ್ತಿಯಲ್ಲಿ ಬರುವುದರಿಂದ, 2033 ರ ಮೊದಲು ಅಂತಹ ಯಾವುದೇ ಯೋಜನೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯಿಂದ ಒಪ್ಪಿಗೆ ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.
ಏರ್‌ಟ್ರಾಫಿಕ್ ಸಮಸ್ಯೆ ಕಡಿಮೆ
ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಎರಡಕ್ಕೂ ಏರ್‌ಟ್ರಾಫಿಕ್ / ವಾಯುಮಾರ್ಗ ಪ್ರಮುಖ ಸಮಸ್ಯೆ ಆಗಿತ್ತು.
ಇದೀಗ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಹೊಸೂರಿನ ವಿಮಾನ ನಿಲ್ದಾಣ ಯೋಜನೆಯನ್ನು UDAN (ಉಡಾನ್) ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಅನುಮೋದಿಸಿಲ್ಲ. ಇದು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.
ತಮಿಳುನಾಡಿನ ಪ್ಲ್ಯಾನ್‌ಗೆ ಹಿನ್ನಡೆ ಆಗುತ್ತಿರುವುದರಿಂದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎದುರಾಗಿದ್ದ ವಾಯು ಮಾರ್ಗ ಸಮಸ್ಯೆಯು ಪರಿಹಾರವಾಗಲಿದೆ. ಆದರೆ ಜಾಗದ ಅಂತಿಮ ಹಾಗೂ ಭೂಸ್ವಾಧೀನ ಸೇರಿದಂತೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಕ್ರಿಯೆ ಸುದೀರ್ಘವಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications