Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ: 3 ಶಾರ್ಟ್ ಲಿಸ್ಟ್ ಜಾಗದಲ್ಲಿ ಹೊಸ ಸಮಸ್ಯೆ!
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಜೋರಾಗಿದೆ. ಇದೀಗ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿಗದಿ ಮಾಡಿರುವ ಮೂರು ಜಾಗದಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಮೊದಲ ಹಂತದಲ್ಲಿ ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರು ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿಗೆ ಬರಲಿದ್ದು, ಈ ಮೂರು ಜಾಗಗಳಲ್ಲಿ ಪರಿಶೀಲನೆ ಮಾಡಲಿದ್ದಾರೆ. ಈ ರೀತಿ ಇರುವಾಗಲೇ ನಿಗದಿ ಮಾಡಿರುವ ಜಾಗದಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಅದೇನು ಎನ್ನುವ ವಿವರ ನೋಡೋಣ.
ಕರ್ನಾಟಕದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ನೆಲಮಂಗಲ ಮತ್ತು ಕನಕಪುರ ನಡುವೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚರ್ಚೆ ಜೋರಾಗಿದೆ. ಕನಕಪುರದಲ್ಲಿ ಮೂಲಸೌಕರ್ಯ ಉತ್ತಮವಾಗಿದೆ. ಹೀಗಾಗಿ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ರೀತಿ ಇರುವಾಗಲೇ ಹೊಸ ಸಮಸ್ಯೆಯೊಂದು ಎದುರಾಗಿದೆ.

ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕನಕಪುರ ಹಾಗೂ ನೆಲಮಂಗಲದ ನಡುವೆ ಭಾರೀ ಚರ್ಚೆಗಳು ನಡೆದಿವೆ. ಆದರೆ ಈ ಭಾಗದಲ್ಲಿ ಕೇಂದ್ರ ತಂಡ ಪರಿಶೀಲನೆಗೆ ಬರುವ ಸಂದರ್ಭದಲ್ಲಿಯೇ ಹೊಸ ಸಮಸ್ಯೆಯ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ಭೂಸ್ವಾಧೀನ ಪ್ರಕ್ರಿಯೆ ಸವಾಲಾಗಿ ಪರಿಣಮಿಸಿದೆ. ಕರ್ನಾಟಕದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರದಲ್ಲಿ ಪ್ರಾರಂಭಕ್ಕೂ ಮುನ್ನವೇ ಸಮಸ್ಯೆ ಎದುರಾಗಿದೆ. ಅತ್ತ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಆದರೆ ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡುವುದರಿಲ್ಲಿಯೇ ಕರ್ನಾಟಕ ಸರ್ಕಾರವು ವಿಳಂಬ ಧೋರಣೆಯನ್ನು ಅನುಸರಿಸಿತ್ತು. ಇದೀಗ ಜಾಗದ ಸಮಸ್ಯೆ ಎದುರಾಗಿದೆ.
ವಿಮಾನ ನಿಲ್ದಾಣಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗಿರುವ ಎರಡು ಪ್ರಮುಖ ಪ್ರದೇಶಗಳಾದ ನೆಲಮಂಗಲ ಹಾಗೂ ಕನಕಪುರ ಭಾಗವು ಕೃಷಿ ಪ್ರಧಾನ ಭೂಮಿಯಾಗಿದೆ. ಹೀಗಾಗಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸವಾಲಾಗಲಿದೆ ಎಂದು ಹೇಳಲಾಗುತ್ತಿದೆ. ಈ ಭಾಗದಲ್ಲಿ ಸ್ಥಳೀಯರು ಕೃಷಿಯನ್ನೇ ಪ್ರಧಾನವನ್ನಾಗಿ ಇರಿಸಿಕೊಂಡಿದ್ದಾರೆ. ಹೀಗಾಗಿ, ಭೂಸ್ವಾಧೀನ ಸವಾಲುಗಳು ಎದುರಾಗುತ್ತಿವೆ. ಇನ್ನು ನೆಲಮಂಗಲ ಸಹ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿದೆಯಾದರೂ ಈ ಭಾಗದಲ್ಲಿ ದೀರ್ಘಕಾಲಿನ ಯೋಜನೆಗಳನ್ನು ರೂಪಿಸಿಕೊಳ್ಳುವ ಅವಶ್ಯಕತೆ ಇದೆ.
2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿಕೊಳ್ಳಲಾಗಿದೆ. ಅದರಲ್ಲಿ ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿನ ಒಂದು ಜಾಗ ಸೇರಿದೆ. ಆದರೆ, ಇಲ್ಲಿನ ರೈತರು ಕೃಷಿಯಲ್ಲಿ ತೊಡಗಿಸಿಕೊಂಡಿರುವುದು ಹಾಗೂ ಬೆಂಗಳೂರು ಕನೆಕ್ಟಿವಿಟಿ ಸೇರಿದಂತೆ ಹಲವು ವಿಷಯಗಳು ಕೇಂದ್ರ ತಂಡ ಬರುವುದಕ್ಕಿಂತ ಮುಂಚೆಯೇ ಚರ್ಚೆಯಾಗುತ್ತಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications