Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ
Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಕರ್ನಾಟಕಕ್ಕೆ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಈಚೆಗೆ ಮಂಡಿಸಲಾದ ರಾಜ್ಯ ಬಜೆಟ್ 2026 - 2027ರಲ್ಲಿ ಉಲ್ಲೇಖ ಮಾಡಲಾಗಿತ್ತು. ಇದಾದ ನಂತರ ಇದೀಗ ಈ ವಿಚಾರವು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಕಿರಣ್ ಮಜುಂದಾರ್ ಶಾ ಅವರು ಸಹ ಮಹತ್ವದ ಸಲಹೆ ನೀಡಿದ್ದಾರೆ.
ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಬೆಂಗಳೂರಿನಲ್ಲಿ ಈಗ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅವಶ್ಯಕ ಎಂದು ಪರಿಗಣಿಸಲಾಗಿತ್ತು. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡವು ಬಂದು ಪರಿಶೀಲನೆಯನ್ನು ಸಹ ನಡೆಸಿತ್ತು. ಇದಾದ ನಂತರ ಕೆಲವೊಂದು ಗೊಂದಲಗಳು ಸೃಷ್ಟಿಯಾಗಿದ್ದವು. ಇದೀಗ ಕರ್ನಾಟಕದ ಬಜೆಟ್ನಲ್ಲಿ ಮತ್ತೆ ಈ ವಿಚಾರವನ್ನು ಪ್ರಸ್ತಾವನೆ ಮಾಡುವ ಮೂಲಕ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಯ ಬಗ್ಗೆ ಮಹತ್ವದ ಹೆಜ್ಜೆ ಇರಿಸಲಾಗಿದೆ.

ಉದ್ಯಮಿ ಕಿರಣ್ ಮಜುಂದಾರ್ ಶಾ ಹೇಳಿದ್ದೇನು
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕರ್ನಾಟಕದಲ್ಲೇ ಪೈಪೋಟಿಗೆ ಕಾರಣವಾಗಿತ್ತು. ಅಲ್ಲದೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವು ರಾಜಕೀಯ ಸ್ವರೂಪವನ್ನೂ ಸಹ ಪಡೆದುಕೊಂಡಿತ್ತು. ಇದೀಗ ಸರ್ಕಾರವೇ ಈ ವಿಚಾರವನ್ನು ಪ್ರಸ್ತಾವನೆ ಮಾಡಿದೆ. ಇದೀಗ ಈ ವಿಚಾರವಾಗಿ ರಿಯಾಕ್ಟ್ ಮಾಡಿರುವ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು, ಬೆಂಗಳೂರಿನ ಹೊಸ ಹಾಗೂ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ರಾಜಕೀಯ ಆದ್ಯತೆಗಳ ಆಧಾರದ ಮೇಲೆ ಅಲ್ಲ, ಸಂಚಾರ ದಟ್ಟಣೆಯ ಆಧಾರದ ಮೇಲೆ ಸ್ಥಳವನ್ನು ಆಯ್ಕೆ ಮಾಡಲಾಗುತ್ತದೆ ಎಂದು ಆಶಿಸೋಣ. ದಕ್ಷಿಣ ಬೆಂಗಳೂರು ಅತ್ಯಂತ ಜನದಟ್ಟಣೆಯಿಂದ ಕೂಡಿರುವುದರಿಂದ ಕನಕಪುರ ತಾರ್ಕಿಕವಾಗಿ ನೆಲಮಂಗಲಕ್ಕಿಂತ ಉತ್ತಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Bengaluru Second Airport: 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಿದ ಜಾಗಗಳು
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ 2026-27ರ ಬಜೆಟ್ನಲ್ಲಿ ಕೆಐಎಯಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಕರ್ನಾಟಕವು 2ನೇ ಬೆಂಗಳೂರು ವಿಮಾನ ನಿಲ್ದಾಣದ ಯೋಜನೆಗಳನ್ನು ಪ್ರಸ್ತಾಪಿಸಿದೆ. ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುತಿಸಲಾಗಿರುವ ಮೂರು ಪ್ರದೇಶಗಳ ವಿವರ.
1. ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ
2. ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ
3. ಕುಣಿಗಲ್ ರಸ್ತೆಯಲ್ಲಿರುವ ನೆಲಮಂಗಲ
Let’s hope we pick the location based on traffic decongestion n not on political preference. Kanakapura is logically better than Neelamangala given that south Bangalore is hugely congested https://t.co/2mfRWzMCmR
— Kiran Mazumdar-Shaw (@kiranshaw) March 6, 2026
ಬಜೆಟ್ ಬಗ್ಗೆ ಕಿರಣ್ ಹೇಳಿದ್ದೇನು
2026 ರ ಭವಿಷ್ಯದ ಬಜೆಟ್ಗಾಗಿ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಿರಣ್ ಅವರು ಶ್ಲಾಘಿಸಿದ್ದಾರೆ. ಬೆಂಗಳೂರಿನ ಮೂಲಸೌಕರ್ಯಕ್ಕೆ ಗಣನೀಯ ಬಜೆಟ್ ಹಂಚಿಕೆ, ಜೀನೋಮಿಕ್ಸ್ ಮತ್ತು ನಿಖರ ಔಷಧವನ್ನು ಮುಂದುವರಿಸುವಲ್ಲಿ ಬಯೋಟೆಕ್ಗೆ ಬೂಸ್ಟರ್ ಡೋಸ್, CHG ಅಪ್ಗ್ರೇಡ್, IBAB ಮತ್ತು C-CAMP ನಲ್ಲಿ AI CoE ಮತ್ತು AI ನೇತೃತ್ವದ ಮೆಡ್ಟೆಕ್ ಮತ್ತು ರೊಬೊಟಿಕ್ಸ್ ಮತ್ತು LEAP K-ಕಾಂಬಿನೇಟರ್ ಆಕ್ಸಿಲರೇಟರ್ನಲ್ಲಿ ಹೂಡಿಕೆಯಲ್ಲಿ ಗಮನಾರ್ಹ ಹೆಚ್ಚಳವನ್ನು ನಾನು ಪ್ರಶಂಸಿಸುತ್ತೇನೆ. ಮಹಿಳಾ ಉದ್ಯಮಿಗಳು ಸೇರಿದಂತೆ ಮಹಿಳಾ ಕೇಂದ್ರಿತ ಅಭಿವೃದ್ಧಿಯ ಮೇಲೆ ಗಮನಹರಿಸುವುದನ್ನು ನಾನು ಸ್ವಾಗತಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.
-
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications