Bengaluru Second Airport: ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಿಡದಿ ಮಾದರಿ ಸಂಕಷ್ಟ, ಬೆಂಗಳೂರು ದಕ್ಷಿಣದಲ್ಲಿ ಡೌಟ್!
Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಹೊಸ ಸವಾಲು ಎದುರಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಪ್ರಯಾಣಿಕರ ಒತ್ತಡ ಹೆಚ್ಚಿತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿನಲ್ಲಿ ಮತ್ತೊಂದು ಹಾಗೂ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಒತ್ತಡ ಹೆಚ್ಚಾಗಿದೆ. ಈ ರೀತಿ ಇರುವಾಗಲೇ ಬೆಂಗಳೂರು ದಕ್ಷಿಣದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಸ್ಥಳಗಳನ್ನು ಗುರುತಿಸಲಾಗಿತ್ತು. ಆದರೆ, ಬಿಡದಿಯ ಟೌನ್‌ಶಿಪ್ ನಿರ್ಮಾಣದಲ್ಲಿ ಎದುರಾಗಿದ್ದ ಸಮಸ್ಯೆಯೇ ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಎದುರಾಗಿದೆ.
ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಸಂಕಷ್ಟ ಎದುರಾಗಿತ್ತು. ಬಿಡದಿಯಲ್ಲಿ ಯಾವುದೇ ಕಾರಣಕ್ಕೂ ಟೌನ್‌ಶಿಪ್ ನಿರ್ಮಾಣ ಮಾಡಬಾರದು ಎಂದು ರೈತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ಇದೀಗ ನಗರದ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಸಂಕಷ್ಟ ಎದುರಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮೂರು ಸ್ಥಳಗಳಲ್ಲಿ ಸಮೀಕ್ಷೆ ನಡೆಸಿ ಒಂದು ಜಾಗವನ್ನು ಅಂತಿಮಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ, ಬಿಡದಿಯಲ್ಲಿ ಎದುರಾದ ಸಂಕಷ್ಟವೇ ಈ ಭಾಗದಲ್ಲೂ ಎದುರಾಗಿದೆ. ಹೌದು ಬೆಂಗಳೂರಿನ ದಕ್ಷಿಣ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಮೂಲಕ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹೊಸದೊಂದು ತಲೆನೋವು ಶುರುವಾಗಿದೆ.

ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಬಿಟ್ಟು ಕೊಡುವುದಕ್ಕೆ ರೈತರ ವಿರೋಧವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಲ್ಲದೆ ಇದರೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆವಿಮಾನ ನಿಲ್ದಾಣಕ್ಕೆ ಸೂಕ್ತವಲ್ಲ. ತುಮಕೂರು ಜಿಲ್ಲೆಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸಿದರೆ ಹೆಚ್ಚು ಅನುಕೂಲವಾಗಲಿದೆ ಎನ್ನುವ ಮಾತು ಸಹ ಕೇಳಿ ಬಂದಿದೆ. ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸೇರಿದಂತೆ ಹಲವರು ತುಮಕೂರಿನಲ್ಲೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ ಎಂದು ಪಟ್ಟು ಹಿಡಿದಿದ್ದಾರೆ.
ಬಿಡದಿಯ ನಂತರ ಕರ್ನಾಟಕ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ
ಇನ್ನು ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಡದಿ ಟೌನ್‌ಶಿಪ್ ನಿರ್ಮಾಣದ ನಂತರ ಎರಡನೇ ಏರ್‌ಪೋರ್ಟ್ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ರೈತರ ಕೆಂಗಣ್ಣಿಗೆ ಗುರಿಯಾಗಿದೆ.
ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಹಾಗೂ ಬಿಡದಿಯಲ್ಲಿ ಟೌನ್‌ಶಿಪ್ ನಿರ್ಮಾಣ ಎರಡೂ ಯೋಜನೆಗಳು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಾಗಿವೆ. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲೇ ಈ ಯೋಜನೆಗೆ ಸಂಬಂಧಿಸಿದಂತೆ ಪೈಪೋಟಿ ಹಾಗೂ ವಿರೋಧಗಳು ಇವೆ. ಹೀಗಾಗಿ, ಸರ್ಕಾರವು ಇದನ್ನು ಹೇಗೆ ನಿಭಾಯಿಸಲಿದೆ ಎನ್ನುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.


Click it and Unblock the Notifications
