Bengaluru Second Airport: ಬೆಂಗಳೂರು 2ನೇ ವಿಮಾನ ನಿಲ್ದಾಣ: ಉತ್ತರ Vs ದಕ್ಷಿಣ ಚರ್ಚೆ, ಆದರೆ ಇದೇ ಜಾಗ ಫೈನಲ್

Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಬೆಂಗಳೂರು ಉತ್ತರ Vs ಬೆಂಗಳೂರು ದಕ್ಷಿಣ ಚರ್ಚೆ ನಡೆಯುತ್ತಿದೆ. ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆದಿದೆ. ಇದರ ನಡುವೆ ಬೆಂಗಳೂರು ಉತ್ತರ Vs ಬೆಂಗಳೂರು ದಕ್ಷಿಣ ಚರ್ಚೆ ನಡೆದಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಯಾವ ಭಾಗದಲ್ಲಿ ನಿರ್ಮಾಣ ಮಾಡಿದರೆ ಉತ್ತಮ ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಬೆಂಗಳೂರಿನ ಹೊಸ ವಿಮಾನ ನಿಲ್ದಾಣವು ಬಹುತೇಕ ಬೆಂಗಳೂರು ದಕ್ಷಿಣ ಭಾಗದಲ್ಲಿಯೇ ನಿರ್ಮಾಣವಾಗುವ ಸಾಧ್ಯತೆ ಇದೆ. ಏನಿದು ಚರ್ಚೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದಲೂ ಹೆಚ್ಚು ಚರ್ಚೆ ನಡೆಯುತ್ತಿದೆ. ಕಳೆದ ಬಾರಿ ಹೊಸ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುವ ಸಂದರ್ಭದಲ್ಲಿ ಶಿರಾ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶ ಇಲ್ಲವೇ ಉತ್ತರ ಕರ್ನಾಟಕ ಭಾಗದಲ್ಲಿ ಎಲ್ಲಾದರೂ ಬೆಂಗಳೂರಿನ ಹೊಸ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎನ್ನುವ ಬಗ್ಗೆ ಹೆಚ್ಚು ಚರ್ಚೆ ನಡೆದಿತ್ತು. ಅಲ್ಲದೆ ಹಲವು ಶಾಸಕರು ಸಹ ಶಿರಾ ಭಾಗದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಲವು ತೋರಿದ್ದರು. ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣಕ್ಕೆ ಸೀಮಿತವಾಗಿದೆ.

Bengaluru Second Airport

ಅದರಲ್ಲೂ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಬಹುತೇಕ ಬೆಂಗಳೂರು ದಕ್ಷಿಣ ಭಾಗದಲ್ಲೇ ನಿರ್ಮಾಣವಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ (ತುಮಕೂರು ರಸ್ತೆ/ನೆಲಮಂಗಲ) ಭಾಗಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಸರ್ಕಾರವು ದಕ್ಷಿಣ ಭಾಗದತ್ತ ಹೆಚ್ಚಿನ ಒಲವು ತೋರುತ್ತಿದೆ.

1. ಬೆಂಗಳೂರು ದಕ್ಷಿಣ

ಬೆಂಗಳೂರು ದಕ್ಷಿಣ ಭಾಗದ ಕನಕಪುರ ರಸ್ತೆ / ಮೈಸೂರು ರಸ್ತೆ ಪ್ರದೇಶಗಳು ಮುಂಚೂಣಿಯಲ್ಲಿವೆ. ಕನಕಪುರ ರಸ್ತೆಯ ಚೂಡಹಳ್ಳಿ ಮತ್ತು ಸೋಮನಹಳ್ಳಿ ಪ್ರದೇಶಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಶಾರ್ಟ್‌ಲಿಸ್ಟ್ ಮಾಡಿದೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ ಯಾಕೆ ವಿಮಾನ ನಿಲ್ದಾಣ

ಇನ್ನು ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ಯಾಕೆ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬಗ್ಗೆ ಹಲವು ಪರ - ವಿರೋಧ ಚರ್ಚೆ ನಡೆಯುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣವು ಉತ್ತರದ ದೇವನಹಳ್ಳಿಯಲ್ಲಿದೆ. ದಕ್ಷಿಣದ ಜಯನಗರ, ಜೆ.ಪಿ. ನಗರ ಮತ್ತು ಎಲೆಕ್ಟ್ರಾನಿಕ್ ಸಿಟಿಯಂತಹ ಭಾಗಗಳಿಂದ ಈ ವಿಮಾನ ನಿಲ್ದಾಣಕ್ಕೆ ಹೋಗಲು ಕನಿಷ್ಠ 2 ರಿಂದ 3 ಗಂಟೆ ಬೇಕಾಗುತ್ತದೆ. ದಕ್ಷಿಣದಲ್ಲಿ ವಿಮಾನ ನಿಲ್ದಾಣವಾದರೆ ಈ ಪ್ರಯಾಣದ ಸಮಯ 1 ಗಂಟೆಗೆ ಇಳಿಯಲಿದೆ. ಎಲೆಕ್ಟ್ರಾನಿಕ್ ಸಿಟಿಯ ಐಟಿ ಕಂಪನಿಗಳಿಗೆ ಮತ್ತು ಮೈಸೂರು, ರಾಮನಗರದಂತಹ ಪ್ರದೇಶಗಳಿಗೂ ಇದು ವರದಾನವಾಗಲಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಬೆಂಗಳೂರಿನಲ್ಲಿ ಸುಮಾರು 9,000 ಎಕರೆ ಜಾಗವನ್ನು ಇದಕ್ಕಾಗಿ ಗುರುತಿಸಲಾಗಿದ್ದು, ಇಲ್ಲೇ ನಿರ್ಮಾಣವಾಗಲಿದೆ ಎಂದು ಸುಳಿವು ಕೊಟ್ಟಿದ್ದಾರೆ.

ಸವಾಲುಗಳು: ಇನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ದೊಡ್ಡ ಸವಾಲಾಗುವ ಸಾಧ್ಯತೆ ಇದೆ.

2. ಬೆಂಗಳೂರು ಉತ್ತರ / ಪಶ್ಚಿಮ

ಬೆಂಗಳೂರು ದಕ್ಷಿಣದ ನಂತರ ಬೆಂಗಳೂರು ಉತ್ತರದಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಹೆಚ್ಚು ಚರ್ಚೆ ನಡೆದಿದೆ. ಬೆಂಗಳೂರು ಉತ್ತರ ಹಾಗೂ ಪಶ್ಚಿಮ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ತುಮಕೂರು ರಸ್ತೆ / ನೆಲಮಂಗಲ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಆಗ್ರಹ ಇದೆ. ತುಮಕೂರು ರಸ್ತೆಯ ನೆಲಮಂಗಲ ಮತ್ತು ಕುಣಿಗಲ್ ನಡುವಿನ ಪ್ರದೇಶವನ್ನು ಈ ಮೊದಲು ಗಂಭೀರವಾಗಿ ಪರಿಗಣಿಸಲಾಗಿತ್ತು. ಆದರೆ ಇದೀಗ ಅಷ್ಟು ಚರ್ಚೆಯಲ್ಲಿಲ್ಲ.

ಪರ ವಾದಗಳು: ಇನ್ನು ತುಮಕೂರು ರಸ್ತೆ ಕೈಗಾರಿಕಾ ಕೇಂದ್ರವಾಗಿ ಬೆಳೆಯುತ್ತಿದ್ದು, ಇಲ್ಲಿ ವಿಮಾನ ನಿಲ್ದಾಣವಾದರೆ ಉತ್ತರ ಕರ್ನಾಟಕದ ಜನರಿಗೂ ಸುಲಭವಾಗಿ ದೊರೆಯಲಿದೆ ಎನ್ನುವ ವಾದವಿದೆ. ಆದರೆ, ಸಚಿವ ಎಂ.ಬಿ. ಪಾಟೀಲ್ ಅವರು, ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆಯು ಅರ್ಹತೆಯ (merit) ಆಧಾರದ ಮೇಲೆ ನಡೆಯಲಿದೆ ಎಂದಿದ್ದಾರೆ. ನೆಲಮಂಗಲ ಭಾಗವನ್ನು ಸಂಪೂರ್ಣವಾಗಿ ಕೈಬಿಟ್ಟಿಲ್ಲ.

ವಿರೋಧ: ಈಗಾಗಲೇ ಒಂದು ವಿಮಾನ ನಿಲ್ದಾಣ ಉತ್ತರ ಭಾಗದಲ್ಲೇ ಇರುವುದರಿಂದ ಮತ್ತೊಂದನ್ನು ಅದೇ ದಿಕ್ಕಿನಲ್ಲಿ ನಿರ್ಮಿಸುವುದು ಬೇಡ ಹಾಗೂ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳನ್ನು ಸಹ ಅಭಿವೃದ್ಧಿಪಡಿಸಬೇಕು ಎನ್ನುವ ಆಗ್ರಹ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+