Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್

Bengaluru Second Airport: ಸಿಲಿಕಾನ್ ಸಿಟಿ ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದು ಎನ್ನಲಾದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಹುನಿರೀಕ್ಷಿತ ಸ್ಕೈಡೆಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಬುಧವಾರ ಭೇಟಿ ಮಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಎರಡೂ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದಾರೆ.

ಕೇಂದ್ರಕ್ಕೆ ಮನವಿ

ಕರ್ನಾಟಕದ ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಕುರಿತು ಚರ್ಚಿಸಲು ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಕೇಂದ್ರ ಸರ್ಕಾರವನ್ನು ಭೇಟಿ ಮಾಡಿದೆ. ನಗರದ ಭವಿಷ್ಯದ ದೃಷ್ಟಿಯಿಂದ ಅತ್ಯಗತ್ಯವಾಗಿರುವ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

Bengaluru Second Airport

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರವು ನೆಲಮಂಗಲ, ಕನಕಪುರ ರಸ್ತೆ (ಸೋಮನಹಳ್ಳಿ) ಸೇರಿದಂತೆ ಹಲವು ಸ್ಥಳಗಳನ್ನು ಪರಿಶೀಲಿಸುತ್ತಿದೆ. ಈ ಕುರಿತು ಕೇಂದ್ರ ಸರ್ಕಾರದ ಅನುಮತಿ ಮತ್ತು ತಾಂತ್ರಿಕ ಸಹಕಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರಸ್ತುತ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಹತ್ತು ವರ್ಷಗಳ ಅಗತ್ಯವನ್ನು ಪೂರೈಸಲು ಎರಡನೇ ನಿಲ್ದಾಣ ಅನಿವಾರ್ಯ ಎಂಬ ಚರ್ಚೆಯೂ ನಡೆದಿದೆ.

ಬಜೆಟ್‌ನಲ್ಲೂ ಏರ್‌ಪೋರ್ಟ್‌ ಬಗ್ಗೆ ಪ್ರಸ್ತಾಪ

ಕರ್ನಾಟಕ ಸರ್ಕಾರವು 2026-2027ನೇ ಸಾಲಿನ ಬಜೆಟ್‌ನಲ್ಲಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಅಧಿಕೃತವಾಗಿ ಪ್ರಸ್ತಾಪಿಸಿದೆ. ಸಿಲಿಕಾನ್ ಸಿಟಿಯ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಇದು ಅತ್ಯಂತ ಮಹತ್ವದ ಯೋಜನೆಯಾಗಿದೆ. ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರಿನ ಸಾರಿಗೆ ಮತ್ತು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಈ ಯೋಜನೆಗೆ ಬದ್ಧವಾಗಿರುವುದಾಗಿ ಘೋಷಿಸಿದ್ದಾರೆ. ಪ್ರಸ್ತುತ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ತಗ್ಗಿಸುವುದು ಇದರ ಗುರಿಯಾಗಿದೆ.

ವಿಮಾನ ನಿಲ್ದಾಣ ನಿರ್ಮಾಣಕ್ಕೂ ಮುನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯವನ್ನು ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ತಾಂತ್ರಿಕ ಸಲಹೆಗಳ ಆಧಾರದ ಮೇಲೆ ವಿಸ್ತೃತ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಹೊರವಲಯದ ಕನಕಪುರ ರಸ್ತೆ, ನೆಲಮಂಗಲ ಅಥವಾ ದಾಬಸ್‌ಪೇಟೆ ಸೇರಿ ವಿವಿಧ ಸ್ಥಳಗಳನ್ನು ತಜ್ಞರ ತಂಡವು ಪರಿಶೀಲಿಸುತ್ತಿದೆ. ಬಜೆಟ್‌ನಲ್ಲಿ ಅನುದಾನ ಮತ್ತು ತಾಂತ್ರಿಕ ಸಮೀಕ್ಷೆಯ ಭರವಸೆ ನೀಡುವ ಮೂಲಕ ಯೋಜನೆಯ ಅನುಷ್ಠಾನಕ್ಕೆ ಅಧಿಕೃತ ಚಾಲನೆ ನೀಡಿದೆ.

ಬೆಂಗಳೂರು ಸ್ಕೈಡೆಕ್ ಯೋಜನೆಗೂ ಮನವಿ

ದೆಹಲಿ ಭೇಟಿ ವೇಳೆ ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಲಿರುವ ಸ್ಕೈಡೆಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇರುವ ವಾಯುಯಾನ ಸುರಕ್ಷತಾ ನಿಯಮಗಳು ಹಾಗೂ ತಾಂತ್ರಿಕ ಅಡೆತಡೆಗಳನ್ನು ನಿವಾರಿಸುವ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ. ನಗರದ ಹೊಸ ಆಕರ್ಷಣೆಯಾಗಲಿರುವ 'ಸ್ಕೈಡೆಕ್' ಯೋಜನೆಗೆ ಸಂಬಂಧಿಸಿದಂತೆ ಅಗತ್ಯವಿರುವ ಅನುಮತಿಗಳನ್ನು ಶೀಘ್ರವಾಗಿ ನೀಡುವಂತೆಯೂ ಸಚಿವರಲ್ಲಿ ವಿನಂತಿಸಿದ್ದಾರೆ.

ರಾಜ್ಯದ ಇತರೆ ಪ್ರಮುಖ ಮೂಲಸೌಕರ್ಯ ಯೋಜನೆಗಳು ಮತ್ತು ವಾಯುಯಾನ ಸಂಪರ್ಕಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಕರ್ನಾಟಕದ ವೇಗದ ಬೆಳವಣಿಗೆಗೆ ಪೂರಕವಾಗಿ ಭವಿಷ್ಯದ ಮೂಲಸೌಕರ್ಯಗಳನ್ನು ರೂಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಬಲವಾದ ಸಮನ್ವಯ ಮತ್ತು ಸಮಯೋಚಿತ ಅನುಮತಿಗಳ ಅಗತ್ಯವಿದೆ ಎಂದು ಡಿಸಿಎಂ ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸಚಿವ ಬೋಸರಾಜು, ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದ ಕುಮಾರ ನಾಯಕ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಉಪಸ್ಥಿತರಿದ್ದು, ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ತಾಂತ್ರಿಕ ಅಂಶಗಳನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+