Bengaluru Second Airport: ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ, ಅನುದಾನ?

Bengaluru Second Airport: ಬೆಂಗಳೂರಿನಲ್ಲಿ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇದು ಎರಡು ಟರ್ಮಿನಲ್‌ಗಳನ್ನು ಒಂಗೊಂಡಿದೆ. ಅದರಲ್ಲೂ ಎರಡನೇಯದು ವಿಶ್ವದ ಸುಂದರ ಟರ್ಮಿನಲ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಷ್ಟಿದ್ದರೂ ಸಹ ಪ್ರಯಾಣಿಕರ ದಟ್ಟಣೆ ಕಡಿಮೆಯಾಗದ ಹಿನ್ನೆಲೆ ನಗರದ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಇದನ್ನು ನಿಯಂತ್ರಣ ಮಾಡಲು ಸರ್ಕಾರವು ನಗರದ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ. ಈಗಾಗಲೇ ನೆಲಮಂಗಲದ ಬಳಿ ಮೊದಲಿಗೆ ಡ್ರೋನ್‌ ಸಮೀಕ್ಷೆಗಳು ಕೂಡ ಆರಂಭವಾಗಿದ್ದು, ಇದಕ್ಕೆ ಅಲ್ಲಿನ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Bengaluru Second Airport Possibility of Location and Fund Allocation in State Budget

ನಾವು ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲು ತಯಾರಿಲ್ಲ. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದ್ರೆ ಲವತ್ತಾದ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಇಲ್ಲಿ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಡಿ ಎಂದು ಪಟ್ಟು ಹಿಡಿದು ಪ್ರತಿಭಟನೆ ಮಾಡುವುದಲ್ಲದೆ, ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದರು. ಬಳಿಕ ಅಲ್ಲಿನ ಕಾಂಗ್ರೆಸ್‌ ಪಕ್ಷದ ಶಾಸಕರೇ ಜನರ ಪರ ನಿಲ್ಲುವುದಾಗಿ ಹೇಳಿದ್ದರು.

ಅಷ್ಟೇ ಅಲ್ಲದೆ, ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಬಿಡುವುದಿಲ್ಲ. ಒಂದು ವೇಳೆ ನಿರ್ಮಾಣ ಮಾಡಲು ಮುಂದಾದ್ರೆ, ನಮ್ಮದೇ ಸರ್ಕಾರವನ್ನು ಎದುರುಹಾಕಿಕೊಂಡು ಶಾಸಕ ಸ್ಥಾನ ಕಳೆದುಕೊಂಡರೂ ಪರವಾಗಿಲ್ಲ. ನಾನು ಜನರ ಪರ ನಿಲ್ಲುತ್ತೇನೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೂ ಕೂಡ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಡಿ ಅಂತಾ ಹೇಳಿದ್ದೇನೆ. ಇದಕ್ಕೆ ಅವರು ಕೂಡ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳುವ ಮೂಲಕ ಅಲ್ಲಿನ ಜನರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದರು.

ಈಗಾಗಲೇ ಸ್ಥಳ ಗುರುತಿಸಲಾಗಿದ್ದು, ಇದೇ ಸ್ಥಳ ಎಂದು ಇನ್ನೂ ನಿಗದಿಯಾಗಿಲ್ಲ. ನೆಲಮಂಗಲ, ತುಮಕೂರು, ರಾಮನಗರ ಬಳಿ ಸ್ಥಳಗಳನ್ನು ಗುರುತಿಸಲಾಗಿತ್ತು. ಆದರೆ, ನೆಲಮಂಗಲದಲ್ಲಿ ನಿರ್ಮಾಣಕ್ಕೆ ಸಿದ್ಧವಾಗಿದ್ದರೂ ಅಲ್ಲಿನ ರೈತರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಸಚಿವ ಜಿ.ಪರಮಶ್ವರ್, ವಿ.ಸೋಮಣ್ಣ ಸೇರಿದಂತೆ ಹಲವರು ತುಮಕೂರಿನಲ್ಲಿ ನಿರ್ಮಾಣ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಮಾತ್ರ ಇತ್ತ ಗಮನಹರಿಸುತ್ತಿಲ್ಲ.

ಮತ್ತೊಂದೆಡೆ ಇದೀಗ ಹೊಸೂರು ಸಮೀಪ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಇನ್ನೂ ಇದೇ ಸ್ಥಳ ಎಂದು ನಿಗದಿಯಾಗಿಲ್ಲ. ಇನ್ನು ಇಂದು (ಮಾರ್ಚ್‌ 07) ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದು, ರಾಜ್ಯದ ಜನರ ನಿರೀಕ್ಷೆಗಳು ಬೆಟ್ಟದಷ್ಟಿವೆ. ಹಾಗೆಯೇ ಬಜೆಟ್‌ನಲ್ಲಿ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಗುರುತು, ಅನುದಾನ ಘೋಷಣೆಯಾಗುವ ನಿರೀಕ್ಷೆಯನ್ನೂ ಸಹ ಇಟ್ಟುಕೊಳ್ಳಲಾಗಿದೆ.

ಯಾಕಂದ್ರೆ ಈ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಒಂದು ವರ್ಷದಿಂದಲೂ ಚರ್ಚೆಗಳು ನಡೆಯುತ್ತಿವೆಯೇ ಹೊರತು ಸ್ಥಳ ಮಾತ್ರ ಇನ್ನೂ ನಿಗದಿಯಾಗಿಲ್ಲ. ಇದೆಲ್ಲದಕ್ಕೂ ಉತ್ತರ ಇಂದಿನ ಸಿದ್ದಾರಾಮಯ್ಯ ಅವರು ಮಂಡಿಸುವ ರಾಜ್ಯ ಬಜೆಟ್‌ನಲ್ಲಿ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+