Bengaluru Second Airport Updates: ಬೆಂಗಳೂರು 2ನೇ ವಿಮಾನ ನಿಲ್ದಾಣ ವಿಳಂಬಕ್ಕೆ ಇದೇ ಕಾರಣ!
Bengaluru Second Airport Updates: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕಳೆದ ಆರು ತಿಂಗಳುಗಳಿಂದಲೂ ಕಗ್ಗಂಟಾಗಿಯೇ ಉಳಿದಿದೆ. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಜಾಗಗಳನ್ನು ಕೇಂದ್ರದಿಂದ ತಂಡ ಬಂದು ಅಧ್ಯಯನ ಮಾಡಿದ್ದರೂ ಮುಂದಿನ ಹಂತಕ್ಕೆ ಹೋಗುತ್ತಿಲ್ಲ. ಇದೀಗ ಕೊನೆಗೂ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ವಿಳಂಬವಾಗುತ್ತಿರುವುದೇಕೆ ಎನ್ನುವುದಕ್ಕೆ ಸಂಬಂಧಿಸಿಸದಂತೆ ನಿಖರ ಕಾರಣ ಸಿಕ್ಕಿದೆ.
ಬೆಂಗಳೂರು ಬೆಳೆಯುತ್ತಿದ್ದು, ಇದೀಗ ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪದಲ್ಲೇ ನಿರ್ಮಾಣ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ನಿರ್ಧರಿಸಿದ್ದು. ಇದಕ್ಕೆ ಬೇಕಾದ ಪ್ರಾಥಮಿಕ ಹಂತದ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಆದರೆ ಇಷ್ಟು ದಿನಗಳ ಕಾಲ ಕೇಂದ್ರ ಸರ್ಕಾರದ ವಿಳಂಬ ಧೋರಣೆಯಿಂದಲೇ ಈ ಯೋಜನೆ ವಿಳಂಬವಾಗುತ್ತಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಕೊನೆಗೂ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಳಂಬಕ್ಕೆ ಕಾರಣ ಏನು ಎನ್ನುವುದು ಕೇಂದ್ರ ತಂಡದ ವರದಿಯಲ್ಲಿ ಉಲ್ಲೇಖವಾಗಿದ್ದು ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ.

ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಿರುವ ಮೂರು ಸ್ಥಳಗಳಲ್ಲೂ ವಿಮಾನ ಸಂಚಾರಕ್ಕೆ ಅಗತ್ಯವಾದ ಮಾರ್ಗಗಳು (Airway) ಇಲ್ಲದೆ ಇರುವುದು ಬಹುದೊಡ್ಡ ಸಮಸ್ಯೆ ಆಗಿದೆ ಎಂದು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯತೆಗಳ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ ಎಂದು "ಪ್ರಜಾವಾಣಿ" ವರದಿ ಮಾಡಿದೆ.
ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿದ್ದರಾದರೂ ಆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡುವುದಕ್ಕೆ ಮೂರು ತಿಂಗಳಿಗೂ ಹೆಚ್ಚು ಅವಧಿಯನ್ನು ತೆಗೆದುಕೊಂಡಿದ್ದಾರೆ. ಈ ತಂಡವು ಉದ್ದೇಶಿತ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತ್ತು. ಅಲ್ಲದೇ ಇದೀಗ ಕಾರ್ಯಸಾಧ್ಯತಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಈ ವರದಿಯಲ್ಲಿ ವಿಮಾನ ಸಂಚರಿಸುವ ವಾಯು ಮಾರ್ಗಗಳ ಕುರಿತು ಪ್ರಮುಖವಾಗಿ ಉಲ್ಲೇಖ ಮಾಡಲಾಗಿದೆ ಎಂದು ಹೇಳಲಾಗಿದೆ.
ಈಗಾಗಲೇ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗುರುತಿಸಲಾಗಿರುವ ಸ್ಥಳಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಾಗದೆ ಇದ್ದರೆ ಹೊಸ ಜಾಗಗಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು ಕನಕಪುರ ರಸ್ತೆಯ ಚೂಡಹಳ್ಳಿ- ಸೋಮನಹಳ್ಳಿ ಸುತ್ತಲಿನ ಹತ್ತಿರದ 4,800 ಎಕರೆ ಹಾಗೂ ಕರಿಯಾಳ ಕರೆನಹಳ್ಳಿ 5,000 ಎಕರೆ ಪ್ರದೇಶಗಳು, ನೆಲಮಂಗಲ- ಕುಣಿಗಲ್ ರಸ್ತೆಯ ಸೋಲದೇವನಹಳ್ಳಿ ಟೋಲ್ ಸಮೀಪದ 5,200 ಎಕರೆ ಪ್ರ- ದೇಶಗಳಲ್ಲಿ ವಿಮಾನ ಸಂಚಾರಕ್ಕೆ ಅಗತ್ಯವಾದ ವಾಯು ಮಾರ್ಗಗಳು ಸೀಮಿತವಾಗಿವೆ ಎಂದು ಹೇಳಲಾಗಿದೆ. ಇದು ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications