Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ ವಿಳಂಬಕ್ಕೆ ಆಂಧ್ರಪ್ರದೇಶ & ತಮಿಳುನಾಡು ಕಾರಣ ?

Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಆದರೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ವಿಳಂಬಕ್ಕೆ ಆಂಧ್ರ ಪ್ರದೇಶವೇ ಅಥವಾ ಆಂಧ್ರಪ್ರದೇಶದ ಆ ಸಚಿವರೇ ಕಾರಣವೇ ಎನ್ನುವ ಅನುಮಾನ ಶುರುವಾಗಿದೆ. ಆಂಧ್ರಪ್ರದೇಶದಲ್ಲಿ ತೆಲುಗುದೇಶಂ ಪಕ್ಷ ಹಾಗೂ ಜನಸೇನಾ ಪಕ್ಷ ಜಂಟಿ ಆಡಳಿತದಲ್ಲಿದೆ. ಆದರೆ ಈ ಪಕ್ಷಗಳು ಆಂಧ್ರಪ್ರದೇಶದ ಅಭಿವೃದ್ಧಿಗೆ ದೊಡ್ಡ ಮಟ್ಟದ ಪ್ರಯತ್ನಗಳನ್ನು ಮಾಡುತ್ತಿವೆ. ಈಚೆಗೆ ಎಚ್‌ಎಎಲ್ ಆಫರ್‌ನ ಬಗ್ಗೆಯೂ ಲಾಬಿ ನಡೆಸಿತ್ತು. ಈ ಕಾರಣಕ್ಕೆ ಹೊಸ ಅನುಮಾನ ಶುರುವಾಗಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಾಬಿ ಕಾರಣವೇ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಆಂಧ್ರಪ್ರದೇಶದ ತೆಲುಗುದೇಶಂ ಪಾರ್ಟಿಗೆ ಸೇರಿರುವ ರಾಮ್ ಮೋಹನ್ ನಾಯ್ಡು (Ram Mohan Naidu) ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿದ್ದಾರೆ ಎನ್ನುವುದು ಇಲ್ಲಿ ಗಮನಿಸಬೇಕಾದ ಅಂಶ.

Bengaluru Second Airport Project Hits Delay Amid Andhra Tamil Nadu Hurdles

ಇನ್ನು ತಮಿಳುನಾಡಿನ ಸರ್ಕಾರವು ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಮೂಲಕ ಬೆಂಗಳೂರಿಗೆ ಪೈಪೋಟಿ ನೀಡುವುದಕ್ಕೆ ಮುಂದಾಗಿದೆ. ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಎರಡು ಜಾಗಗಳನ್ನು ಫೈನಲ್ ಮಾಡಲಾಗಿದೆ. ಕೇಂದ್ರ ಸರ್ಕಾರವು ತಮಿಳುನಾಡಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಎಲ್ಲಾ ಮಾದರಿಯ ಸಹಕಾರವನ್ನೂ ನೀಡುತ್ತಿದೆ. ಇದಕ್ಕೆ ಮುಖ್ಯ ಕಾರಣ ತಮಿಳುನಾಡಿನಲ್ಲಿ 2026ನೇ ಸಾಲಿನಲ್ಲಿ ವಿಧಾನಸಭೆ ಚುನಾವಣೆ ಇದೆ. ಇನ್ನು ಆಂಧ್ರಪ್ರದೇಶದ ಲಾಬಿ ದಿನೇ ದಿನೆ ಹೆಚ್ಚಾಗುತ್ತಿದೆ.

ಬೆಂಗಳೂರು ಕೇಂದ್ರಿತವಾಗಿರುವ ಪ್ರತಿಷ್ಠಿತ ಏರೋಸ್ಪೇಸ್ ಸಂಸ್ಥೆಗಳು ಹಾಗೂ ಐಟಿ - ಬಿಟಿ ಸಂಸ್ಥೆಗಳನ್ನು ಸೆಳೆಯುವುದಕ್ಕೆ ಆಂಧ್ರಪ್ರದೇಶ ಸರ್ಕಾರ ಪ್ರಯತ್ನಿಸುತ್ತಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗೂ ಐಟಿ ಸಚಿವ ನಾರಾ ಲೋಕೇಶ್ ಅವರು ಬೆಂಗಳೂರು ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ಕೊಟ್ಟಿದ್ದರು.

1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಅಂತಿಮ ನೋಟಿಫಿಕೇಶನ್‌ನ್ನು ಕರ್ನಾಟಕ ಸರ್ಕಾರ ರದ್ದು ಮಾಡಿತ್ತು. ಈ ಸಂದರ್ಭದಲ್ಲಿ ಈ ವಿಚಾರ ಕೇಳಿ ತುಂಬಾ ಬೇಸರವಾಯಿತು. ನಿಮಗಾಗಿ ನನ್ನ ಬಳಿ ಇನ್ನೊಂದು ಉತ್ತಮ ಐಡಿಯಾ ಇದೆ. ನೀವು ಆಂಧ್ರಪ್ರದೇಶದಲ್ಲಿ ಏಕೆ ಜಾಗ ನೋಡಬಾರದು ಎಂದು ಆಹ್ವಾನ ಕೊಟ್ಟಿದ್ದರು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೀಗ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳಲ್ಲಿ ಪರಿಶೀಲನೆ ಮಾಡಿ, ಐದು ತಿಂಗಳುಗಳೇ ಕಳೆದರೂ ಕೇಂದ್ರ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಕರ್ನಾಟಕ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕರ್ನಾಟಕದ ಸಂಸದರು, ರಾಜ್ಯ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿಲ್ಲ. ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಾಬಿ ಹೆಚ್ಚಾಗಿದೆಯೇ ಎನ್ನುವ ಅನುಮಾನವೂ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+