Get Updates
Get notified of breaking news, exclusive insights, and must-see stories!

Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ

Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಬಜೆಟ್‌ನಲ್ಲಿ ಮಹತ್ವದ ಅಪ್ಡೇಟ್ಸ್‌ ನೀಡಿತ್ತು. ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪೈಪೋಟಿ ನೀಡಲು ಮುಂದಾಗಿದ್ದ ತಮಿಳುನಾಡಿಗೆ ಇದೀಗ ಮುಖಭಂಗ ಎದುರಾಗಿದೆ. ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಯೋಜನೆಗಳಿಗಾಗಿ ಸಾವಿರಾರು ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಮುಂದಾಗಿದ್ದ ತಮಿಳುನಾಡಿಗೆ ಭಾರೀ ಮುಖಭಂಗವಾಗಿದೆ.

ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ತಮಿಳುನಾಡಿನ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ಡಿಎಂಕೆ ಸರ್ಕಾರದ ಕ್ರಮದ ವಿರುದ್ಧ ಅರ್ಜಿ ಸಲ್ಲಿಸಲು ವಿವಿಧ ರಾಜಕೀಯ ಪಕ್ಷಗಳ ಪ್ರಧಾನ ಕಚೇರಿಗೆ ಮೆರವಣಿಗೆ ನಡೆಸಲು ಯತ್ನಿಸಿದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ನೂರಾರು ರೈತರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಇಲ್ಲಿ ನಮಧು ನೀಲಂ ನಮಧೆ (ನಮ್ಮ ನೆಲ ನಮ್ಮದು) ರೈತ ಕಲ್ಯಾಣ ಸಂಘದ ನೇತೃತ್ವದಲ್ಲಿ ಈ ಹೋರಾಟ ನಡೆದಿದೆ. ರೈತರು ಸೋಮವಾರ ರಾಜಕೀಯ ಪಕ್ಷದ ನಾಯಕರನ್ನು ಭೇಟಿ ಮಾಡಿ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

Bengaluru Second Airport

ಹೊಸೂರು - ಕೃಷ್ಣಗಿರಿ - ಧರ್ಮಪುರಿ ಪ್ರದೇಶವು ಎಲೆಕ್ಟ್ರಾನಿಕ್ಸ್ ಮತ್ತು ವಿದ್ಯುತ್ ವಾಹನ ವಲಯಗಳ ಕೇಂದ್ರವಾಗಿ ಬೆಳೆಯುತ್ತಿದೆ. ಹೊಸ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವುದು ಸೇರಿದಂತೆ ವಿವಿಧ ಯೋಜನೆಗಳಿಗಾಗಿ ಕೃಷ್ಣಗಿರಿ ಜಿಲ್ಲೆಯಲ್ಲಿ ಸುಮಾರು 39,000 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.

ಹೊಸೂರು - ಬೇರಿಗೈ-ಬಾಗಲೂರು-ಶೂಲಗಿರಿ ಭಾಗದಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣ ಮತ್ತು ನಾಲೆಡ್ಜ್‌ ಕಾರಿಡಾರ್ ನಿರ್ಮಿಸಲು ಸುಮಾರು 2,900 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ತಮಿಳುನಾಡು ಸರ್ಕಾರವು ಹೇಳಿತ್ತು. ಆದರೆ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೊದಲಿನಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಪ್ರಸ್ತಾವಿತ ಯೋಜನೆಗೆ ವಾಯುಪ್ರದೇಶ ಅನುಮತಿ / ಇರುವ ತೊಡಕುಗಳನ್ನು ಪರಿಹರಿಸುವುದು ಹಾಗೂ ಪರಿಶೀಲಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆಯುವುದಕ್ಕೂ ತಮಿಳುನಾಡು ಸರ್ಕಾರ ಮುಂದಾಗಿದೆ.

ರೈತರು ಹೇಳುತ್ತಿರುವುದೇನು

ಇನ್ನು ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮ ಜೀವವನ್ನೇ ಬಲಿ ತೆಗೆದುಕೊಂಡರೂ ಸಹ, ನಾವು ನಮ್ಮ ಕೃಷಿಭೂಮಿಗಳನ್ನು ಬಿಟ್ಟುಕೊಡುವುದಿಲ್ಲ. ನಮ್ಮ ಭೂಮಿಯನ್ನು ರಕ್ಷಿಸುವಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲಲಿದ್ದೇವೆ. ರೈತರ ಜೀವನೋಪಾಯವನ್ನು ನಾಶಪಡಿಸದೆ ಅಭಿವೃದ್ಧಿಯನ್ನು ಮಾಡುವ ಯೋಜನೆಗೆ ನಮ್ಮ ಬೆಂಬಲವಿದೆ. ಈ ವಿಚಾರದಲ್ಲಿ ತಮಿಳುನಾಡು ಸರ್ಕಾರವು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಾದ್ಯಂತ ಸುಮಾರು 39,000 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ. ಆದರೆ ಈ ಕ್ರಮದಿಂದಾಗಿ ಈ ಭಾಗದ ಭೂಮಿಯನ್ನು ಅವಲಂಬಿಸಿರುವ ಸುಮಾರು 50,000ಕ್ಕೂ ಹೆಚ್ಚು ರೈತ ಕುಟುಂಬಗಳು ಬೀದಿಗೆ ಬೀಳುವ ಆತಂಕ ಶುರುವಾಗಿದೆ. ಹಲವು ಕಂಪನಿಗಳು ಕೃಷ್ಣಗಿರಿ ಜಿಲ್ಲೆಯಲ್ಲಿ, ವಿಶೇಷವಾಗಿ ಹೊಸೂರಿನ ಸಮೀಪವಿರುವ ಹಳ್ಳಿಗಳಲ್ಲಿ 500 ದೊಡ್ಡ ಕೈಗಾರಿಕೆಗಳು ಮತ್ತು 3,000 ಸಣ್ಣ ಕೈಗಾರಿಕೆಗಳಿಗೆ ಕಾರ್ಖಾನೆಗಳನ್ನು ವಿಸ್ತರಿಸಲು ಮುಂದಾಗಿವೆ.

ಹೊಸೂರು ವಿಮಾನ ನಿಲ್ದಾಣದ ಅಪ್ಡೇಟ್ಸ್‌

ಇನ್ನು ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಕೃಷ್ಣಗಿರಿ ಜಿಲ್ಲೆಯ ಐದು ಸ್ಥಳಗಳನ್ನು ಅಧ್ಯಯನ ಮಾಡಿ ಎರಡನ್ನು ಆಯ್ಕೆ ಮಾಡಿದೆ. ಇದಾದ ನಂತರ ತಮಿಳುನಾಡು ಸರ್ಕಾರವು ಹೊಸೂರು-ಬೇರಿಗೈ-ಬಾಗಲೂರು-ಶೂಲಗಿರಿ ಮುಖ್ಯ ಪ್ರದೇಶದಲ್ಲಿ ವಿಮಾನ ನಿಲ್ದಾಣ ಮಾಡುವುದಾಗಿ ಘೋಷಣೆ ಮಾಡಿದೆ. ಜನಸಂಖ್ಯೆ ಕಡಿಮೆ ಇರುವ ಈ ಪ್ರದೇಶದಲ್ಲಿ ಹೆಚ್ಚಿನ ಪ್ರತಿಭಟನೆಗಳು ನಡೆಯುವುದಿಲ್ಲ ಎನ್ನುವುದು ಸರ್ಕಾರದ ಲೆಕ್ಕಾಚಾರವಾಗಿತ್ತು. ಆದರೆ ಕಳೆದ ಒಂದು ವಾರದಿಂದ ಜನರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+