Bengaluru Second Airport: ಎರಡನೇ ವಿಮಾನ ನಿಲ್ದಾಣ ನಿರ್ಮಾಣ: ಚೂಡಹಳ್ಳಿ - ಸೋಮನಹಳ್ಳಿ ಜಾಗ ಫೈನಲ್, ಡಿಕೆಶಿ ಅಪ್ಡೇಟ್ಸ್‌

Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಬಹುತೇಕ ಅಂತಿಮವಾಗುವ ಹಂತಕ್ಕೆ ಬಂದಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ಬುಧವಾರ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಬೆಂಗಳೂರು ದಕ್ಷಿಣದಲ್ಲೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದೆ. ಅಲ್ಲದೆ ಚೂಡಹಳ್ಳಿ ಅಥವಾ ಸೋಮನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಬಹುತೇಕ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಈ ಎರಡೂ ಹಳ್ಳಿಗಳ ಒಂದು ಪ್ರದೇಶದಲ್ಲಿ ನಿರ್ಮಾಣವಾಗುವುದು ಬಹುತೇಕ ಅಂತಿಮವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನ ಹಾಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರ್ಯಾಯವಾಗಿ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಿದೆ. ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದರೂ, ಜಾಗಕ್ಕೆ ಸಂಬಂಧಿಸಿದಂತೆ ಗೊಂದಲಗಳು ಮುಂದುವರಿದಿತ್ತು. ಅಲ್ಲದೆ ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದಿಂದಲೂ ಯಾವುದೇ ಹೊಸ ಅಪ್ಡೇಟ್ಸ್‌ ಬಂದಿರಲಿಲ್ಲ. ಇದೀಗ ಜಾಗ ಅಂತಿಮ ಮಾಡುವ ಹಂತಕ್ಕೆ ಚರ್ಚೆ ಬಂದಿದೆ. ಆದರೆ, ಕಡಿಮೆ ಭೂಸ್ವಾಧೀನದ ಮೇಲೆ ಸರ್ಕಾರ ಕಣ್ಣೀರಿಸಿದೆ.

Bengaluru Second Airport

ಹೊಸ ವಿಮಾನ ನಿಲ್ದಾಣ ನಿರ್ಮಾಣ ಸಂದರ್ಭದಲ್ಲಿ ಕಡಿಮೆ ಪ್ರಮಾಣದಲ್ಲಿ ಭೂಸ್ವಾಧೀನ ಹಾಗೂ ಹೆಚ್ಚಿನ ಗ್ರಾಮಗಳನ್ನು ಬೇರೆಡೆಗೆ ಸ್ಥಳಾಂತರಿಸದಂತೆ ಇರುವ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಇನ್ನು ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚೂಡಹಳ್ಳಿ ಹಾಗೂ ಸೋಮನಹಳ್ಳಿ ಪ್ರದೇಶವನ್ನು ಶಾರ್ಟ್‌ಲಿಸ್ಟ್‌ ಮಾಡಲಾಗಿದೆ. ಚೂಡಹಳ್ಳಿಯಲ್ಲಿ 4,655 ಎಕರೆ, ಸೋಮನಹಳ್ಳಿಯಲ್ಲಿ 4,376 ಎಕರೆ ಭೂಮಿ ಇದೆ.

Bengaluru Second Airport: ಈ ಪ್ರದೇಶದಲ್ಲಿ ಭೂಸ್ವಾಧೀನ

ಇನ್ನು ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕನಕಪುರ ರಸ್ತೆಯ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲ - ಕುಣಿಗಲ್ ರಸ್ತೆಯಲ್ಲಿ ಸ್ಥಳ ಗುರುತಿಸುವುದು ಹಾಗೂ ಕೇಂದ್ರ ತಂಡದ ವರದಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚೂಡಹಳ್ಳಿಯಲ್ಲಿ 4,655 ಎಕರೆ, ಸೋಮನಹಳ್ಳಿಯಲ್ಲಿ 4,376 ಎಕರೆ ಭೂಮಿ ಇದೆ. ಒಟ್ಟು ಸೇರಿದರೆ 9 ಸಾವಿರ ಎಕರೆಗೂ ಹೆಚ್ಚಿನ ಭೂಮಿ ಸಿಗಲಿದ್ದು, ಅಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯತೆಯ ಜೊತೆಗೆ, ಕಡಿಮೆ ಭೂಸ್ವಾಧೀನ ಮಾಡಬಹುದಾದ ಅಥವಾ ಕಡಿಮೆ ಗ್ರಾಮಗಳನ್ನು ಸ್ವಾಧೀನಪಡಿಸಿಕೊಳ್ಳ ಬಹುದಾದ ಸ್ಥಳವನ್ನು ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.

Bengaluru Second Airport: ನಗರದ ಸಮೀಪವೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್
Bengaluru Second Airport: ನಗರದ ಸಮೀಪವೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

ಅಲ್ಲದೆ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಯೋಜನೆಯಿಂದ ವನ್ಯಜೀವಿಗಳ ಮೇಲಾಗುವ ಪರಿಣಾಮಗಳ ಕುರಿತು ತಾಂತ್ರಿಕ ಅಧ್ಯಯನ ನಡೆಸುವುದಕ್ಕೂ ಸೂಚನೆ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+