ಸಚಿವ ಭೈರತಿ ಬಸವರಾಜು ಆಪ್ತ ಬಾಬು ಮೇಲೆ ಗುಂಡಿನ ದಾಳಿ

ಬೆಂಗಳೂರು, ಆ. 23: ಸಚಿವ ಭೈರತಿ ಬಸವರಾಜು ಅವರ ಆಪ್ತ ಗೆಳೆಯ ಆಟೋ ಬಾಬು ಎಂಬುವರ ಮೇಲೆ ಶನಿವಾರ ರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.

Recommended Video

      Suresh Raina ಪತ್ರ ಬರೆದ Modi... | Oneindia Kannada

      ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಬಾಬು ಅವರ ಮೇಲೆ ಕೆ. ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 9 ಗಂಟೆ ವೇಳೆಗೆ ಇಬ್ಬರು ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ.

      ಆದರೆ, ಬಾಬು ಅವರು ಗುಂಡಿನ ದಾಳಿಯಲ್ಲಿ ಗಾಯಗೊಳ್ಳದೇ ತಪ್ಪಿಸಿಕೊಂಡಿದ್ದಾರೆ. ಇದನ್ನು ಕಂಡ ಅಪರಿಚಿತ ವ್ಯಕ್ತಿಗಳು, ಬಾಬು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

      Bengaluru Shootout: Attack on Minister Bhairati Basavarajs Aide, Businessman Babu

      ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಒಬ್ಬ ಮುಸುಕುಧಾರಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

      ಡಿಸಿಪಿ ದೇವರಾಜ್, ಕೃಷ್ಣರಾಜಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಬಾಬು ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+