ಬೆಂಗಳೂರು ಕೌಶಲ್ಯ ಶೃಂಗಸಭೆ-2025: 8 ಜಿಲ್ಲೆಗಳ ಸಾಧಕರಿಗೆ ಪ್ರಶಸ್ತಿ ವಿತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ನವೆಂಬರ್ 07: ಕರ್ನಾಟಕದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಮತ್ತು ಎಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ನಡೆಸಲು, ಕೌಶಲ್ಯಪೂರ್ಣರನ್ನು ಸೃಷ್ಟಿಸಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸ್ಥಾಪನೆಯಾಗಿದೆ. ಇಲಾಖೆ ಮಹತ್ವ ಉದ್ದೇಶದಂತೆ ಒಂದಷ್ಟು ಕಾರ್ಯ ಚಟುವಟಿಕೆಗಳು ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ 'ಬೆಂಗಳೂರು ಕೌಶಲ್ಯ ಶೃಂಗಸಭೆ-2025' ಜರುಗಿದ್ದು, ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಪ್ರಶಸ್ತಿ ನೀಡಲಾಗಿದೆ.
ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೂರು ದಿನಗಳ ಕಾರ್ಯಕ್ರಮ ಇದಾಗಿತ್ತು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಇಲಾಖೆ ವ್ಯಾಪ್ತಿಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ಅಂಗ ಸಂಸ್ಥೆಗಳಿಗೆ ನೀಡುವ ಕೌಶಲ್ಯ ಶೃಂಗ ಸಭೆ 2025ರ ಪ್ರಶಸ್ತಿಗೆ ಈ ಕೆಳಗಿನ ಸ್ವಸಹಾಯ ಗುಂಪುಗಳು ಆಯ್ಕೆ ಆಗಿವೆ. ಅವುಗಳ ವಿವರ ನೋಡುವುದಾರೆ, ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಾವಿಕೆರೆ ಗ್ರಾಮ ಪಂಚಾಯತಿಯ ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ "ಹಿರಿಹೊನ್ನಪ್ಪ ವಿಕಾಸ ಮಹಿಳಾ ಸ್ವ ಸಹಾಯ ಸಂಘ', ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಗೋಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ "ಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯ ಗುಂಪು.
ಕಲಬುರಗಿಯ ಅಳಂದ ತಾಲ್ಲೂಕಿನ ಗುಂಜ ಬಬಲಾದ ಗ್ರಾ ಪಂಚಾಯತಿ ಗಂಗಾ ಪರಮೇಶ್ವರಿ ಒಕ್ಕೂಟದ "ಚೆನ್ನಮ್ಮ ಸ್ವ ಸಹಾಯ ಸಂಘ', ಚಿತ್ರದುರ್ಗ ಜಿಲ್ಲೆಯ ಹಿರಯೂರು ತಾಲ್ಲೂಕಿನ ವಿವಿಪುರ ಗ್ರಾಮ ಪಂಚಾಯತಿಯ ಝಾನ್ಸಿರಾಣಿ ಮಹಿಳಾ ಒಕ್ಕೂಟದ ಶ್ರೀರಾಮ "ಆತ್ಮ ಮಹಿಳಾ ಆಹಾರ ಭದ್ರತಾ ಗುಂಪು', ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ನಡವಿ ಗ್ರಾಮ ಪಂಚಾಯತಿಯ ಶ್ರೀ ರಾಮಲಿಂಗೇಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ "ತಾಯಮ್ಮದೇವಿ ಸ್ವ-ಸಹಾಯ ಗುಂಪು', ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆಯ ಶ್ರೀದುರ್ಗಾ ಪ್ರದೇಶ ಮಟ್ಟದ ಒಕ್ಕೂಟದ "ದಿವ್ಯಜ್ಯೋತಿ ನಿರಂತರ ಉಳಿತಾಯ ಗುಂಪು'.
ಬೆಂಗಳೂರು ನಗರ ಜಿಲ್ಲೆಯ ಪಶ್ಚಿಮ ನಗರ ಪಾಲಿಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸರೋಜಿನಿ ನಾಯ್ಡು ಪ್ರದೇಶ ಮಟ್ಟದ ಒಕ್ಕೂಟದ "ಅನ್ನಪೂರ್ಣೇಶ್ವರಿ ಮಹಿಳಾ ಸ್ವ-ಸಹಾಯ ಸಂಘ', ರಾಯಚೂರು ಜಿಲ್ಲೆಯ ರಾಯಚೂರು ಮಹಾನಗರ ಪಾಲಿಕೆಯ ಗಣೇಶ ಪ್ರದೇಶ ಮಟ್ಟದ ಒಕ್ಕೂಟದ ಅಕ್ಕ ಮಹಾದೇವಿ ಮಹಿಳಾ ಸ್ವ-ಸಹಾಯ ಸಂಘ ಅತ್ಯುತ್ತಮ ಮಹಿಳಾ ಸ್ವ ಸ-ಸಹಾಯ ಸಂಘ ಪ್ರಶಸ್ತಿಗೆ ಭಾಜನರಾದ ಹೆಮ್ಮಿಯ ಸಂಘಗಳಾಗಿವೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷೆ ಶಿವಕಾಂತಮ್ಮ ನಾಯಕ, ಕೆಎಸ್ ಡಿಎ ಅಧ್ಯಕ್ಷರಾದ ಡಾ. ಇ.ವಿ ರಮಣರೆಡ್ಡಿ, ಶ್ರೀನಿವಾಸ್ ಎಂ, ಅಪರ ಅಭಿಯಾನ ನಿರ್ದೇಶಕರು, ಸಂಜೀವಿನಿ- ಕೆಎಸ್ ಆರ್ ಎಲ್ ಪಿಎಸ್ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಗಣ್ಯರು ಸಾಕ್ಷಿಯಾದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications