'ನಾನು ಇನ್ಮುಂದೆ ತಪ್ಪು ಮಾಡಲ್ಲಾ ಅಪ್ಪಾ....' ಎದೆಗೆ ಗುಂಡು ಹಾರಿಸಿಕೊಂಡು ತಂದೆಗೆ ಕರೆ ಮಾಡಿದ ಮಗ!
ಬೆಂಗಳೂರು ಜನವರಿ 4: 'ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಅಪ್ಪಾ....' ಎಂದು ಪುತ್ರನೊಬ್ಬ ಎದೆಗೆ ಗುಂಡು ಹಾರಿಸಿಕೊಂಡು ತಂದೆಗೆ ಕರೆ ಮಾಡಿದ ವಿಚಿತ್ರ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರ ನಗರದಲ್ಲಿ ನಡೆದಿದೆ.
19 ವರ್ಷದ ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡವರು. ಇವರು ಕೊಡಗು ಮೂಲದ ತಮ್ಮಪಯ್ಯ ಅವರ ಪುತ್ರ. ವಿಶು ಬಿಇ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ. ತಂದೆ ರೇಷನ್ ತರಲು ಹೋದಾಗ ಮನೆಯಲ್ಲಿ ಯಾರೂ ಇಲ್ಲದೆ ಸಮಯದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೈಸ್ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ತಮ್ಮಪಯ್ಯ ಕೆಲಸ ಮಾಡುತ್ತಿದ್ದಾರೆ. ತಮ್ಮಪಯ್ಯ ಅವರ ಗನ್ ತೆಗೆದುಕೊಂಡು ಪುತ್ರ ವಿಶು ಎದೆಗೆ ಶೂಟ್ ಮಾಡಿಕೊಂಡಿದ್ದಾರೆ. ತಕ್ಷಣ ತಂದೆಗೆ ಕರೆ ಮಾಡಿ 'ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಅಪ್ಪಾ....' ಎಂದು ಹೇಳಿದ್ದಾರೆ. ಪುತ್ರನ ಮಾತಿನಿಂದ ಬೆಚ್ಚಿಬಿದ್ದ ತಂದೆ ಮನೆಗೆ ಓಡಿ ಬಂದಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಶು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಮೇಲ್ನೋಟಕ್ಕೆ ವಿಶು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಹೆಚ್ಚಿನ ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ವಿಶು ಓದಿನಲ್ಲಿ ಹಿಂದೆ ಇದ್ದಾರೆಂದು ನಿತ್ಯ ತಂದೆ ತಾಯಿ ಜಗಳವಾಡುತ್ತಿದ್ದರು. ಇದರಿಂದ ಮನನೊಂದ ವಿಶು ತಂದೆಯ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ' ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗಾರರಿಗೆ ತಿಳಿಸಿದರು.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications