ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಪಾಕ್ ಪರ ಘೋಷಣೆ ಮೂವರು ವಿದ್ಯಾರ್ಥಿಗಳ ಬಂಧನ, ಬಿಡುಗಡೆ

|
Google Oneindia Kannada News

ಬೆಂಗಳೂರು, ನ. 20: ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ. ಘಟನೆ ಬೆನ್ನಲ್ಲೆ ಪ್ರಕರಣ ದಾಖಲಿಸಿಕೊಂಡು ವಿದ್ಯಾರ್ಥಿಗಳನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರಿನ ನ್ಯೂ ಹಾರಿಜಾನ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಇದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಯುವಕ ಮತ್ತು ಯುವತಿ ಘೋಷಣೆಯನ್ನು ಕೂಗುತ್ತಿರುವುದು ಕಾಣಿಸುತ್ತಿದೆ. ಮತ್ತೊಬ್ಬ ವಿದ್ಯಾರ್ಥಿ ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru Students held and released over slogans on Pakistan

ಮತ್ತೊಂದು ವಿಡಿಯೋದಲ್ಲಿ ಘೋಣೆ ಕೂಗಿದ ವಿದ್ಯಾರ್ಥಿಗಳನ್ನು ಮತ್ತಷ್ಟು ವಿದ್ಯಾರ್ಥಿಗಳ ಗುಂಪು ಸುತ್ತುವರೆದು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಜೊತೆಗೆ 'ಜಯ ಕರ್ನಾಟಕ ಮಾತೆ' ಮತ್ತು 'ವಂದೇ ಭಾರತ' ಘೋಷಣೆಗಳನ್ನು ಕೂಗಿದ್ದಾರೆ. ಬಳಿಕ ಕ್ಷಮೆ ಕೇಳಿದ ಆರೋಪಿತ ವಿದ್ಯಾರ್ಥಿಗಳು, "ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಜೈ ಹಿಂದ್, ಜೈ ಕರ್ನಾಟಕ" ಎಂದಿದ್ದಾರೆ.

ಮೂವರ ವಿರುದ್ಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 505(1)ಬಿ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ನಂತರ ಸ್ಟೇಷನ್ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೂವರನ್ನು ಕಾಲೇಜು ನವೆಂಬರ್ 30 ರವರೆಗೆ ಅಮಾನತುಗೊಳಿಸಿದೆ.

Bengaluru Students held and released over slogans on Pakistan

ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪ್ರಾಥಮಿಕ ತನಿಖೆಯಲ್ಲಿ ನಿಷೇಧಿತ ಅಥವಾ ಪಾಕಿಸ್ತಾನ ಮೂಲದ ಸಂಘಟನೆಗಳೊಂದಿಗೆ ಅಥವಾ ಯಾವುದೇ ಇತರ ಯಾವುದೇ ಸಂಘಟನೆಗಳ ಜೊತೆಗೆ ಸಂಬಂಧ ಹೊಂದಿದ್ದಾರೆ ಎಂಬ ಬಗ್ಗೆ ಬಹಿರಂಗಪಡಿಸಿಲ್ಲ ಎಂದು ಹೇಳಿದ್ದಾರೆ.

ಇನ್ನು, ಫೆಬ್ರವರಿ 20, 2020 ರಂದು, ಬೆಂಗಳೂರಿನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ಕೂಗಿದ್ದಕ್ಕಾಗಿ 19 ವರ್ಷದ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿತ್ತು. 110 ದಿನಗಳು ಜೈಲಿನಲ್ಲಿ ಕಳೆದಿದ್ದ ಬಳಿಕ ಆಕೆಗೆ ಜಾಮೀನು ನೀಡಲಾಯಿತು.

English summary
Bengaluru engineering college students arrested after shouting Pakistan Zindabad slogans and later released on bail. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X