ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗರ ಮೂರು ದಶಕಗಳ ಕನಸು ನನಸು : ಪಿಸಿ ಮೋಹನ್

|
Google Oneindia Kannada News

ಬೆಂಗಳೂರು, ಫೆಬ್ರವರಿ 22: "ಬೆಂಗಳೂರಿನ ನಾಗರಿಕರ ಮೂರು ದಶಕಗಳ ಕನಸಾದ ಉಪನಗರ ರೈಲು ಯೋಜನೆ ಶೀಘ್ರದಲ್ಲಿ ನನಸಾಗಲಿದೆ ಎನ್ನುವುದು ಸಂತೋಷದ ಸಂಗತಿ" ಎಂದ್ ಸಂಸತ್ ಸದಸ್ಯ ಪಿ.ಸಿ.ಮೋಹನ್ ಅವರು ಹೇಳಿದ್ದಾರೆ.

IRCTC: ಒಂದೇ ಐಡಿ ಬಳಸಿ 12 ಟಿಕೆಟ್ ಬುಕ್ ಮಾಡುವುದು ಹೇಗೆ? IRCTC: ಒಂದೇ ಐಡಿ ಬಳಸಿ 12 ಟಿಕೆಟ್ ಬುಕ್ ಮಾಡುವುದು ಹೇಗೆ?

ಬೆಂಗಳೂರಿನ ನಾಗರಿಕರ 3 ದಶಕಗಳ ಬೇಡಿಕೆಯಾಗಿದ್ದ ಉಪನಗರ ರೈಲು ಯೋಜನೆ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರುತ್ತಿದೆ ಎನ್ನುವುದು ಸಂತೋಷವನ್ನುಂಟು ಮಾಡಿದೆ. ಈ ಯೋಜನೆಯ ಕಾರ್ಯಗತವಾಗಲು ಅಡ್ಡಿಯಾಗಿದ್ದ ತೊಡಕುಗಳನ್ನು ಬಗೆಹರಿಸಿದ್ದಕ್ಕಾಗಿ ಸನ್ಮಾನ್ಯ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಹಾಗು ಸನ್ಮಾನ್ಯ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಯೋಜನೆಯ ಅನುಷ್ಠಾನಕ್ಕಾಗಿ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಅವರು ಅಗತ್ಯ ಅನುದಾನ ಬಿಡುಗಡೆ ಮಾಡಿದ್ದಲ್ಲದೆ, ಹೆಚ್ಚಿನ ಆಸಕ್ತಿ ವಹಿಸಿ, ಎಲ್ಲಾ ಅನುಮೋದನೆಗಳನ್ನು ನೀಡಿ, ಯೋಜನೆ ಅನುಷ್ಠಾನವಾಗುವ ನಿಟ್ಟಿನಲ್ಲಿ ಅತ್ಯಂತ ಕಾಳಜಿ ವಹಿಸಿದ್ದಕ್ಕಾಗಿ ಅವರಿಗೆ ವಿಶೇಷವಾಗಿ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

Bengaluru Sub Urban Rail project will become a reality soon : PC Mohan delighted

160 ಕಿಮೀ ಉದ್ದದ ಈ ಯೋಜನೆಯಲ್ಲಿ 83 ನಿಲ್ದಾಣಗಳಿರಲಿದ್ದು 12 ಕಡೆ ಮೆಟ್ರೊ ಮಾರ್ಗಕ್ಕೆ ಅಡ್ಡವಾಗಿ ಹಾದುಹೋಗಲಿದೆ. ಉಪನಗರ ರೈಲು ದಿನಕ್ಕೆ 30 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯವಿದ್ದು, ಬೆಂಗಳೂರು ಹಾಗು ಸುತ್ತಮುತ್ತಲಿನ ಪ್ರದೇಶಗಳ ಸಾರಿಗೆ ವ್ಯವಸ್ಥೆಯನ್ನೇ ಪರಿವರ್ತಿಸಲಿದೆ.

ಫೆಬ್ರವರಿ 25ರ ಸಚಿವ ಸಂಪುಟದ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಉಪನಗರ ರೈಲು ಯೋಜನೆ ಅನುಷ್ಠಾನಗೊಳಿಸುವ ನಿರ್ಧಾರ ಕೈಗೊಳ್ಳುತ್ತಾರೆಂದು ಆಶಿಸುತ್ತೇನೆ ಎಂದು ಹೇಳಿದರು.

ಸಬರ್ಬನ್ ರೈಲ್ವೆ ಯೋಜನೆಗೆ ಒಪ್ಪಿಗೆ ಕೊಟ್ಟ ಎಚ್‌ಡಿ ಕುಮಾರಸ್ವಾಮಿ ಸಬರ್ಬನ್ ರೈಲ್ವೆ ಯೋಜನೆಗೆ ಒಪ್ಪಿಗೆ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಕೇಂದ್ರ ಕಲ್ಲಿದ್ದಲು ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 23 ಸಾವಿರ ಕೋಟಿ ಮೊತ್ತದ ಸಬರ್ಬನ್ ರೈಲ್ವೆ ಯೋಜನೆಗೆ ಸಮ್ಮತಿ ನೀಡಿದರು.

ಈ ಸಭೆಯಲ್ಲಿ ಸಂಸದ ಪಿಸಿ ಮೋಹನ್, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಶಾಸಕ ಅರವಿಂದ ಲಿಂಬಾವಳಿ, ಲೇಹರ್ ಸಿಂಗ್ ಸಿರೋಯು, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್, ಕೇಂದ್ರ ಹಾಗೂ ರಾಜ್ಯದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

English summary
I am delighted that the 30 years long-pending Bengaluru Suburban Rail project will soon be a reality and congratulate Union Railway Minister Shri Piyush Goyal and Chief Minister H.D. Kumaraswamy for resolving issues and removing all hurdles for the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X