ಬೆಂಗಳೂರಿನಿಂದ-ಹೊರ ನಗರಗಳಿಗೆ ರೈಲು ಯೋಜನೆ ವಿಸ್ತರಣೆ: ಕಾರ್ಯಸಾಧ್ಯತಾ ವರದಿಗೆ ಅನುಮತಿ ಕೋರಿ SWRಗೆ ಪತ್ರ
ಬೆಂಗಳೂರು, ಜುಲೈ 25: ರಾಜ್ಯ ರಾಜಧಾನಿಯಲ್ಲಿನ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತಲಿನ ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಾಗಡಿ, ಗೌರಿಬಿದನೂರು, ಬಂಗಾರಪೇಟೆಗೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ. ಈ ಸಂಬಂಧ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಉಪನಗರ ರೈಲು ಯೋಜನೆಯ ಪ್ರಗತಿ ಕುರಿತು ಸೋಮವಾರ ಬೆಂಗಳೂರಿನಲ್ಲಿನ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದ (ಕೆ-ರೈಡ್) ಉನ್ನತ ಅಧಿಕಾರಿಗಳೊಂದಿಗೆ ಅವರು ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಹೊರ ನಗರ ಜಿಲ್ಲೆಗಳಿಗೆ ಉಪನಗರ ರೈಲು ಯೋಜನೆ ವಿಸ್ತರಣೆಗಾಗಿ ಕಾರ್ಯಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ರೈಲ್ವೆ ಸಚಿವಾಲಯವು ಅನುಮತಿ ನೀಡಬೇಕೆಂದು ಕೋರಿ ಪತ್ರ ಬರೆದಿರುವುದಾಗಿ ಅವರು ವಿವರಿಸಿದರು.

ಯೋಜನೆಯ ಮೊದಲ ಹಂತದಲ್ಲಿ ಉಪನಗರ ರೈಲು ಯೋಜನೆ ಕಾಮಗಾರಿ 148.17 ಕಿಲೋ ಮೀಟರ್ ನಡೆಯುತ್ತದೆ. ಇದನ್ನು ಸುತ್ತಲಿನ ಹಲವು ನಗರಗಳಿಗೆ ವಿಸ್ತರಿಸುವ ಅಗತ್ಯವಿದೆ. ಈ ಸಂಬಂಧ ಜೂನ್ 6ರಂದು ಸಭೆ ನಡೆಸಲಾಗಿತ್ತು. ಕೆ-ರೈಡ್ ಈ ಪ್ರಸ್ತಾವನೆಗೆ ಅಂದು ತಾತ್ತ್ವಿಕ ಒಪ್ಪಿಗೆ ನೀಡಿತ್ತು. ಮುಂದಿನ ಹೆಜ್ಜೆಯಾಗಿ ಈಗ ನೈರುತ್ಯ ರೈಲ್ವೆಗೆ ಪತ್ರ ಬರೆಯಲಾಗಿದೆ ಎಂದುರು.
ಯೋಜನೆ ಹಂತ ಒಂದ ಕಾಮಗಾರಿ ಮುಂದುವರಿಯಲಿದೆ
ಉಪನಗರ ರೈಲು ಯೋಜನೆಯ ಹಂತ-1ರ ಕಾಮಗಾರಿಗಳು ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿವೆ. ಆದರೆ, ಹಂತ-2ನ್ನು 452 ಕಿ.ಮೀ.ಗಳಿಗೆ ವಿಸ್ತರಿಸಲು ಯೋಚಿಸಿದ್ದು, ಇದಕ್ಕೆ ಈಗಿನಿಂದಲೇ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳುವ ಅಗತ್ಯತೆ ಇದೆ. ನಿಯಮಗಳ ಪ್ರಕಾರ ರಾಜ್ಯ ಸರ್ಕಾರದ ಸಂಸ್ಥೆಯು ಕಾರ್ಯಸಾಧ್ಯತಾ ವರದಿ ತಯಾರಿಸಲು ಸಾಧ್ಯವಿಲ್ಲ. ಇದನ್ನು ರೈಲ್ವೆ ಮಂಡಲಿಯೇ ಮಾಡಬೇಕು ಎಂದು ಮಾಹಿತಿ ನೀಡಿದರು.

ಉಪನಗರ ರೈಲು ಯೋಜನೆಯ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು. ರೈಲು ವ್ಯವಸ್ಥೆಗೆ ಬೇಕಾದ ಬೋಗಿಗಳ ತಯಾರಿಕೆಗೆ ಬಿಡ್ ಅಂತಿಮಗೊಳಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಯೋಜನೆಯ ಕಾಮಗಾರಿಯನ್ನೂ ಖುದ್ದಾಗಿ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳಿಗೆ ಹೇಳಿದರು.
ಈ ಯೋಜನೆಗೆ 177.22 ಎಕರೆ ಭೂಮಿ ಅಗತ್ಯವಿತ್ತು. ಈ ಪೈಕಿ ಈಗಾಗಲೇ 164 ಎಕರೆಯ ಸ್ವಾಧೀನ ಮುಗಿದಿದೆ. ಆದರೆ ಉಳಿದ 12.39 ಎಕರೆ ಭೂಮಿ ರಕ್ಷಣಾ ಇಲಾಖೆ ಮತ್ತು ಸರ್ಕಾರದ್ದಾಗಿದ್ದು, ಸ್ವಲ್ಪ ಕಗ್ಗಂಟಾಗಿದೆ. ಕೆ-ರೈಡ್ ಅಧಿಕಾರಿಗಳು ಸಂಬಂಧಿಸಿದವರ ಜತೆ ಮಾತುಕತೆ ನಡೆಸಿದ್ದೇವೆ. ಶೀಘ್ರ ಬಗೆಹರಿಯುವ ವಿಶ್ವಾಸವಿದೆ. ಯೋಜನೆಯ ಭಾಗವಾಗಿ ಸೋಲದೇವನಹಳ್ಳಿ ಮತ್ತು ದೇವನಹಳ್ಳಿಯಲ್ಲಿ ಎರಡು ಡಿಪೋ ನಿರ್ಮಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಹೇಗಿರಲಿದೆ ಉಪನಗರ ರೈಲು ವಿಸ್ತರಣೆ ಯೋಜನೆ
ಬೆಂಗಳೂರಿನಲ್ಲಿ ಸದ್ಯ 148 ಕಿ.ಮೀ. ವ್ಯಾಪ್ತಿಯ ಉಪನಗರ ರೈಲು ಯೋಜನೆ ಕೆಲಸ ಪ್ರಗತಿಯಲ್ಲಿದ್ದು, ಒಟ್ಟು ನಾಲ್ಕು ಕಾರಿಡಾರ್‍ಗಳಿವೆ. ಇದು ಕ್ರಮವಾಗಿ ಬೆಂಗಳೂರು ನಗರ ರೈಲು ನಿಲ್ದಾಣದಿಂದ ದೇವನಹಳ್ಳಿ (41.4 ಕಿ.ಮೀ), ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿಯಿಂದ ವೈಟ್‌ಫೀಲ್ಡ್ (35.32 ಕಿ.ಮೀ) ಮತ್ತು ಹೀಳಲಿಗೆಯಿಂದ ರಾಜಾನುಕುಂಟೆವರೆಗೆ (46.25 ಕಿ.ಮೀ) ವಿಸ್ತರಣೆಗೊಳ್ಳಲಿದೆ.
ಯೋಜನೆಯ ಎರಡನೇ ಹಂತದ ಮಾಹಿತಿ
ಇನ್ನೂ ಎರಡನೇ ಹಂತದಲ್ಲಿ ದೇವನಹಳ್ಳಿಯಿಂದ ಕೋಲಾರ (107 ಕಿ.ಮೀ), ಚಿಕ್ಕಬಾಣಾವರದಿಂದ ಡಾಬಸ್‌ಪೇಟೆ ಮೂಲಕ ತುಮಕೂರು (55 ಕಿ.ಮೀ), ಚಿಕ್ಕಬಾಣಾವರದಿಂದ ಮಾಗಡಿ (45 ಕಿ.ಮೀ), ಕೆಂಗೇರಿಯಿಂದ ಮೈಸೂರು (125 ಕಿ.ಮೀ), ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ (45 ಕಿ.ಮೀ), ಹೀಳಲಿಗೆಯಿಂದ ತಮಿಳುನಾಡಿನ ಹೊಸೂರು (23 ಕಿ.ಮೀ) ಮತ್ತು ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರಿನವರೆಗೆ (52 ಕಿ.ಮೀ) ವಿಸ್ತರಿಸಬೇಕೆಂಬ ಚಿಂತನೆ ಇದೆ ಎಂದು ಎಂಬಿ ಪಾಟೀಲ್ ತಿಳಿಸಿದರು.
ಸಭೆಯಲ್ಲಿ ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತ, ಕೆ-ರೈಡ್ ಯೋಜನಾ ನಿರ್ದೇಶಕ ರಾಜೇಂದ್ರಕುಮಾರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications