Get Updates
Get notified of breaking news, exclusive insights, and must-see stories!

Bengaluru Suburban Rail: ಸಬ್ ಅರ್ಬನ್ ರೈಲು ಯೋಜನೆ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ಬೆಂಗಳೂರು, ಫೆಬ್ರವರಿ 24: ಉದ್ಯಾನ ನಗರಿ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಕರ್ನಾಟಕ ಸರ್ಕಾರ ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಅನುಷ್ಠಾನಗೊಳಿಸಲಾಗುತ್ತಿದೆ. ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಮೂಲಕ ಯೋಜನೆ ಜಾರಿಯಾಗುತ್ತಿದ್ದು, 2026ರ ಡಿಸೆಂಬರ್‌ನಲ್ಲಿ ರೈಲುಗಳ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. 2022ರಲ್ಲಿ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಿದ್ದರು.

ಬೆಂಗಳೂರಿನ ಸಿಟಿಜನ್ಸ್ ಫಾರ್ ಸಿಟಿಜನ್ಸ್ ಸಂಸ್ಥೆ ಬೆಂಗಳೂರು ಉಪನಗರ ರೈಲು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದೆ. ಈ ಯೋಜನೆ ಕುರಿತು ತುರ್ತಾಗಿ ಗಮನಹರಿಸಬೇಕು ಎಂದು ಮನವಿ ಮಾಡಿದೆ. 21 ಅಕ್ಟೋಬರ್ 2020ರಲ್ಲಿ ಈ ಯೋಜನೆಯನ್ನು 2026ರಲ್ಲಿ ಪೂರ್ಣಗೊಳಿಸುವುದಾಗಿ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದೆ.

Bengaluru Suburban Rail Project Letter To PM Narendra Modi

ಯೋಜನೆಗೆ ಶಂಕು ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಜೂನ್ 21, 2022ರಲ್ಲಿ ಯೋಜನೆಗೆ ಶಂಕುಸ್ಥಾಪನೆ ಮಾಡಿದಾಗ ಬೆಂಗಳೂರಿನ ಜನರು ಸಂತಸಗೊಂಡಿದ್ದರು. 2025ರ ಅಕ್ಟೋಬರ್‌ನಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಿದ್ದರು ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.

ಸಬ್ ಅರ್ಬನ್ ರೈಲು ಯೋಜನೆಯ ಎರಡು ಕಾರಿಡಾರ್‌ನ ಕಾಮಗಾರಿ ಶೇ 12ರಷ್ಟು ಮಾತ್ರ ಪೂರ್ಣಗೊಂಡಿದೆ. ಕಾರಿಡಾರ್ 1 & 3ರ ಕಾಮಗಾರಿ ಇನ್ನೂ ಆರಂಭವಾಗಬೇಕಿದೆ. ಒಪ್ಪಂದದಂತೆ ಕಾರಿಡಾರ್-1 (ವಿಮಾನ ನಿಲ್ದಾಣ) 2023ರ ಅಕ್ಟೋಬರ್‌ನಲ್ಲಿ ಪೂರ್ಣಗೊಳ್ಳಬೇಕಿತ್ತು ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಸುಮಾರು 2 ಕೋಟಿ ಜನರು ವಾಸ ಮಾಡುವ ಬೆಂಗಳೂರು ನಗರಕ್ಕೆ ಸಬ್ ಅರ್ಬನ್ ರೈಲು ಯೋಜನೆ ಪ್ರಮುಖವಾಗಿದೆ. ಯೋಜನೆಗೆ ಇರುವ ಅಡೆತಡೆಗಳನ್ನು ನಿವಾರಣೆ ಮಾಡಿ ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲು ತುರ್ತಾಗಿ ಗಮನಹರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಅಲ್ಲದೇ ಈ ನಾಲ್ಕು ಕಾರಿಡಾರ್‌ಗಳನ್ನು ವಿಸ್ತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಯೋಜನೆಯನ್ನು ತುಮಕೂರು, ಕುಣಿಗಲ್, ಮಾಗಡಿ, ರಾಮನಗರ, ಆನೇಕಲ್, ಬಂಗಾರಪೇಟೆ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರಕ್ಕೆ ವಿಸ್ತರಣೆ ಮಾಡಬೇಕು. ಬೆಂಗಳೂರು ನಗರದಿಂದ ಸುತ್ತಮುತ್ತಲ ಪಟ್ಟಣಕ್ಕೆ ಸಂಚಾರ ನಡೆಸಲು ಇರುವ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ.

ಸಚಿವ ವಿ. ಸೋಮಣ್ಣ ಸಭೆ: ಕೆಲವು ದಿನಗಳ ಹಿಂದೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬೆಂಗಳೂರಿನಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಬಿಎಸ್‌ಆರ್‌ಪಿ ಯೋಜನೆ ಕುರಿತು ಮಾಹಿತಿ ಪಡೆದಿದ್ದರು. ಬಳಿಕ ಮಾತನಾಡಿದ್ದ ಅವರು, "ಬೆಂಗಳೂರು ಉಪನಗರ ರೈಲು ಯೋಜನೆಯ 2 ಮತ್ತು 4ನೇ ಕಾರಿಡಾರ್ ಅನ್ನು 2026ರ ಡಿಸೆಂಬರ್​​ನಲ್ಲಿ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಿದ್ದೇವೆ" ಎಂದು ಘೋಷಣೆ ಮಾಡಿದ್ದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೆಚ್ಚ ಹಂಚಿಕೆ ಮಾಡಿಕೊಂಡು ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕೈಗೊಂಡಿವೆ. 1983ರಲ್ಲಿ ಮೊದಲು ಪ್ರಸ್ತಾವಿತವಾಗಿದ್ದ ಯೋಜನೆ ಇದು. 2022ರ ಜೂನ್ 21ರಂದು ಪ್ರಧಾನಿ ನರೇಂದ್ರ ಮೋದಿ ಯೋಜನೆಗೆ ಚಾಲನೆ ನೀಡಿದ್ದರು. ಯೋಜನೆಗೆ ಅಗತ್ಯವಿರುವ ರೈಲು ಬೋಗಿ ಖರೀದಿಗೆ ಕರ್ನಾಟಕ ಸರ್ಕಾರ ಈಗಾಗಲೇ ಒಪ್ಪಿಗೆಯನ್ನು ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+