ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ಹಾಕಿದ್ರು ಬಂಧಿತ ಶಂಕಿತ ಉಗ್ರರು: ಪೊಲೀಸರಿಂದ ಸ್ಫೋಟಕ ಮಾಹಿತಿ

ಬೆಂಗಳೂರು, ಜುಲೈ 19: ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಶಂಕಿತ ಉಗ್ರರಿಂದ 7 ಪಿಸ್ತೂಲು, 45 ಗುಂಡು, 12 ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

https://kannada.oneindia.com/news/bengaluru/bengaluru-suspect-terrorist-arrest-they-plan-to-blast-police-commisionar-dayanand-302273.html

ಶಂಕಿತ ಉಗ್ರರ ಕೃತ್ಯಕ್ಕೆ ಜುನೈದ್‌ ಎನ್ನುವಾತ ಹಣ ಸಹಾಯ ಮಾಡುತ್ತಿದ್ದ ಎಂದು ಪೊಲೀಸ್ ಕಮಿಷನರ್ ದಯಾನಂದ್ ಮಾಹಿತಿ ನೀಡಿದ್ದಾರೆ. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜುನೈದ್ ಎನ್ನುವಾತ ವಿದೇಶದಲ್ಲಿದ್ದು, ಅಲ್ಲಿಂದಲೇ ಸಂಚು ರೂಪಿಸಿದ್ದಾನೆ ಎಂದು ಹೇಳಿದ್ದಾರೆ.

Bengaluru Suspect Terrorist Arrest: They Plan To Blast : Police Commisionar Dayanand

ಬಂಧಿಸಿರುವ ನಜೀರ್ ಎನ್ನುವ ಶಂಕಿತ ಉಗ್ರ ಲಸ್ಕರ್ ತೊಯ್ಬಾ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಎಂದು ಸಿಸಿಬಿ ಕಚೇರಿಯಲ್ಲಿ ಕಮಿಷನರ್ ದಯಾನಂದ್ ಹೇಳಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಕೂತು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಪೊಲೀಸರು ಬಾಂಬ್ ಪತ್ತೆ ದಳ ಮತ್ತು ಶ್ವಾನದಳದೊಂದಿಗೆ ತಪಾಸಣೆ ನಡೆಸಿದರು. ರೈಲ್ವೆ ಪ್ರಯಾಣಿಕರ ಬ್ಯಾಗ್‌ಗಳನ್ನು ಕೂಡ ಪರಿಶೀಲನೆ ಮಾಡಲಾಗಿದೆ.

ಶಂಕಿತ ಉಗ್ರರು 7 ದಿನ ಸಿಸಿಬಿ ಪೊಲೀಸ್ ಕಸ್ಟಡಿಗೆ

ಶಂಕಿತ ಉಗ್ರರನ್ನು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಲಯಕ್ಕೆ ಹಾಜರು ಪಡಿಸಿದ ಸಿಸಿಬಿ ಪೊಲೀಸರು 15 ದಿನ ತಮ್ಮ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಸಿಸಿಬಿ ಮನವಿಯನ್ನು ಆಲಿಸಿದ ನ್ಯಾಯಾಲಯ 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲು ಆದೇಶಿಸಿದೆ. ಶಂಕಿತ ಉಗ್ರರಾದ ಸಯ್ಯದ್ ಸುಹೇಲ್, ಉಮರ್, ಜುನೈದ್​, ಮುದಾಸಿರ್, ಜಾಹಿದ್​ 7 ದಿನಗಳ ಕಾಲ ಕಸ್ಟಡಿಯಲ್ಲಿ ಇರಲಿದ್ದು, ವಿಚಾರಣೆಗೆ ಒಳಗಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+