Bengaluru: ಬೆಂಗಳೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ನಟ ಅನಿರುದ್ಧ್ ಜಟ್ಕರ್ ಸೇರಿ 6 ರಾಯಭಾರಿಗಳ ಆಯ್ಕೆ
ಬೆಂಗಳೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ನಟ ಅನಿರುದ್ಧ್ ಜಟ್ಕರ್ ಸೇರಿ 6 ರಾಯಭಾರಿಗಳ ಆಯ್ಕೆ ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ ರಾವ್ ಅವರು ಹೇಳಿದ್ದಾರೆ. ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಬೆಂಗಳೂರಿಗೆ ಉನ್ನತ ಶ್ರೇಣಿ ಬರಲು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ಸೋಮವಾರ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ನಲ್ಲಿ ಸ್ವಚ್ಛ ಸರ್ವೇಕ್ಷಣಾ - 2026 ಕಾರ್ಯಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಸಮಾಜದ ಗಣ್ಯರನ್ನು ರಾಯಭಾರಿಗಳಾಗಿ ಅಧಿಕೃತವಾಗಿ ಸೇರ್ಪಡೆಗೊಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ.

ನಗರದಲ್ಲಿ ಉತ್ಪತ್ತಿಯಾಗುವ ಒಟ್ಟು ತ್ಯಾಜ್ಯದ ಶೇ. 45-50 ರಷ್ಟು ಭಾಗವನ್ನು ಈಗಾಗಲೇ ಮರುಬಳಕೆ (ರಿಸೈಕ್ಲಿಂಗ್) ಮಾಡಲಾಗುತ್ತಿದೆ. ತ್ಯಾಜ್ಯವನ್ನು ವಿವಿಧ ರೀತಿಯಲ್ಲಿ ಮರುಬಳಕೆ ಮಾಡುವ ಮೂಲಕ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಈ ಸಂಬಂಧ ಮುಂದಿನ 3-4 ವರ್ಷಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಪರಿಣಾಮಕಾರಿ ಮಾರ್ಪಾಡುಗಳನ್ನು ತರಲಾಗುವುದು. ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಗೊಬ್ಬರವಾಗಿಸುವುದು, ಪ್ಲಾಸ್ಟಿಕ್ ಅನ್ನು ವಿದ್ಯುತ್ ಘಟಕಗಳಿಗೆ ಕಳುಹಿಸುವುದು, ಕಡಿಮೆ ಮೌಲ್ಯದ ಪ್ಲಾಸ್ಟಿಕ್ (RDF) ಅನ್ನು ಸಿಮೆಂಟ್ ಕಾರ್ಖಾನೆಗಳಿಗೆ ಕಳುಹಿಸುವ ಮೂಲಕ ಇ.ಪಿ.ಆರ್ ಕ್ರೆಡಿಟ್ ಪಡೆಯಲಾಗುತ್ತಿದೆ. ಇದೇ ಮಾದರಿಯಲ್ಲಿ ವಿವಿಧ ಕಾರ್ಯಗಳಿಗೆ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಮರುಬಳಕೆ ಮಾಡುವ ಮೂಲಕ ಲ್ಯಾಂಡ್ ಫಿಲ್‌ಗೆ ಕಳುಹಿಸುವ ಪ್ರಮಾಣವನ್ನು ಕ್ರಮೇಣ ಕಡಿಮೆ ಮಾಡಲು ಸೂಕ್ತ ಕ್ರಮ ವಹಿಸಲಾಗುವುದೆಂದು ಎಂದಿದ್ದಾರೆ.
ಲ್ಯಾಂಡ್ ಫಿಲ್‌ಗೆ ಹೋಗುವ ಕಾಂಪ್ಯಾಕ್ಟರ್ ಸಂಖ್ಯೆ ಇಳಿಕೆ
ಲ್ಯಾಂಡ್ ಫಿಲ್ಡ್‌ಗೆ ಹೋಗುವ ಕಾಂಪ್ಯಾಕ್ಟರ್‌ಗಳ ಸಂಖ್ಯೆ 400 ರಿಂದ 260ಕ್ಕೆ ಇಳಿಕೆಯಾಗಿದೆ. ರಾಜಾಜಿನಗರದಲ್ಲಿ ಶೇ.95 ರಷ್ಟು ಕಸ ವಿಂಗಡಣೆ ಆಗುತ್ತಿದೆ. ಚಾಮರಾಜಪೇಟೆಯ ಟ್ರಾನ್ಸಫರ್ ಸ್ಟೇಷನ್‌ನಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಡೆಯುತ್ತಿದೆ. ನಗರದಲ್ಲಿ ಕಡಿಮೆ ಪ್ರಮಾಣದಲ್ಲಿ ಕಸ ವಿಂಗಡಣೆ ಆಗುತ್ತಿರುವ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಮುಂದುವರಿದು ಬೆಂಗಳೂರನ್ನು ಸ್ವಚ್ಛ ನಗರಿಯನ್ನಾಗಿಸಬೇಕಾದರೆ ಜಿಬಿಎ ಹಾಗೂ ಪಾಲಿಕೆಗಳ ಅಧಿಕಾರಿಗಳ ಜೊತೆಗೆ ಪ್ರತಿಯೊಬ್ಬ ಸಾರ್ವಜನಿಕರ ಜವಾಬ್ದಾರಿಯೂ ಅತ್ಯಮೂಲ್ಯವಾಗಿದೆ. ರಸ್ತೆ ಬದಿಯಲ್ಲಿ ಕಸ ಬಿಸಾಡದೆ ಮನೆ-ಮನೆಗೆ ಭೇಟಿ ನೀಡುವ ಆಟೋ ಟಿಪ್ಪರ್‌ಗಳಿಗೆ ಕಸವನ್ನು ನೀಡುವ ಮೂಲಕ ಬ್ಲ್ಯಾಕ್ ಸ್ಪಾಟ್‌ಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
"ಸ್ವಚ್ಛ ಸರ್ವೇಕ್ಷಣಾ-2025-26"ಕ್ಕೆ ರಾಯಭಾರಿಗಳ ನೇಮಕ
ಸ್ವಚ್ಛ ಸರ್ವೇಕ್ಷಣಾ 2025-26ರ ರಾಯಭಾರಿಗಳಾಗಿ ಪದ್ಮಶ್ರೀ ಪುರಸ್ಕೃತರಾದ ಡಾ. ಮಂಜಮ್ಮ ಜೋಗತಿ, ಚಲನಚಿತ್ರ ನಟ ಅನಿರುದ್ಧ್ ಜಟ್ಕರ್, ಇಂಡಿಯಾ ರೈಸಿಂಗ್ ಟ್ರಸ್ಟ್‌ನ ಮುಖ್ಯಸ್ಥರಾದ ಅರುಣ್ ಪೈ, ಸಮಾಜ ಸೇವಕರಾದ ಕೆ.ಎಂ. ನಾಗರಾಜ್, ಲೆಟ್ಸ್ ಬಿ ದಿ ಚೇಂಜ್ ಸಂಸ್ಥೆಯ ಮುಖ್ಯಸ್ಥರಾದ ಅನಿರುದ್ಧ್ ದತ್ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಅಭಿಲಾಶ್ ನಾಯರ್ ಅವರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ.
ನಗರ ಸ್ವಚ್ಛತೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಆಸಕ್ತಿಯುಳ್ಳ ನಾಗರಿಕರು ಮುಂದೆ ಬಂದು ಈ ಅಭಿಯಾನದ ಭಾಗಿಯಾಗಿ, ನಗರದ ಸ್ವಚ್ಛತೆಯ ರಾಯಭಾರಿಗಳಾಗಿ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಸ್ವಚ್ಛ ಸರ್ವೇಕ್ಷಣಾ 2025-26 ಅನ್ನು ಮಹತ್ವದ ಅವಕಾಶವೆಂದು ಪರಿಗಣಿಸಿ, ನಗರದ ಸ್ವಚ್ಛತೆಯ ಪ್ರಮಾಣವನ್ನು ಮತ್ತಷ್ಟು ಉತ್ತೇಜಿಸುವ ಮತ್ತು ಸುಧಾರಣೆ ತರಬೇಕಿದೆ. ಈ ಕುರಿತಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಅದಕ್ಕಾಗಿ ಎಲ್ಲರೂ ಕೈಜೋಡಿಸಿ ಪರಿಣಾಮಕಾರಿಯಾಗಿ ಕೆಲಸ ಮಾಡೋಣ ಎಂದು ಅವರು ಹೇಳಿದ್ದಾರೆ.
ಸ್ವಚ್ಛತಾ ಚಾಂಪಿಯನ್ ಗಳಿಗೆ ಸನ್ಮಾನ
ಜಿಬಿಎ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ನಾಗರಿಕರು, ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಸೇರಿದಂತೆ 10 ಮಂದಿಯನ್ನು "ಸ್ವಚ್ಛತಾ ಚಾಂಪಿಯನ್" ಆಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸ್ವಚ್ಛ ಸರ್ವೇಕ್ಷಣಾ 2025-26 ಅಭಿಯಾನ ಹಾಗೂ ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಿರುಚಿತ್ರವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.
ಬೆಂಗಳೂರು ನಗರದಾದ್ಯಂತ ತ್ಯಾಜ್ಯದ ಸಮರ್ಪಕ ವಿಂಗಡಣೆ, ತ್ಯಾಜ್ಯ ಸಂಸ್ಕರಣೆ ಹಾಗೂ ಸಾರ್ವಜನಿಕ ಸ್ಥಳಗಳ ನೈರ್ಮಲ್ಯ ಕಾಪಾಡುವಿಕೆಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಲಾಗುತ್ತಿದೆ. ಈ ಬಾರಿಯ ಸರ್ವೇಕ್ಷಣೆಯಲ್ಲಿ ಸಾರ್ವಜನಿಕರ ಪ್ರತಿಕ್ರಿಯೆ ಹಾಗೂ ನೇರ ಭಾಗವಹಿಸುವಿಕೆಗೆ ಅತಿ ಹೆಚ್ಚು ಒತ್ತು ನೀಡಲಾಗಿದೆ. ನಾವೆಲ್ಲರೂ ಒಟ್ಟಾಗಿ ಸರ್ಕಾರದ ಈ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಕೈಜೋಡಿಸಿ, ನಮ್ಮ ಹೆಮ್ಮೆಯ ಬೆಂಗಳೂರನ್ನು ಸಂಪೂರ್ಣ ತ್ಯಾಜ್ಯಮುಕ್ತ, ಸುಸ್ಥಿರ ಹಾಗೂ ದೇಶದ ಅಗ್ರಗಣ್ಯ ಸ್ವಚ್ಛ ನಗರವನ್ನಾಗಿ ರೂಪಿಸೋಣ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸಿಇಒ ಕರೀಗೌಡ ಅವರು ಹೇಳಿದ್ದಾರೆ.
ನಮ್ಮ ಮನೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ನಗರವನ್ನು ಸ್ವಚ್ಛವಾಗಿಡುವ ಜವಾಬ್ದಾರಿಯನ್ನು ನಾವು ಹೊತ್ತಿರಬೇಕು ಎಂದು ಪದ್ಮಶ್ರೀ ಪುರಸ್ಕೃತರಾದ ಡಾ. ಮಂಜಮ್ಮ ಜೋಗತಿ ಹೇಳಿದ್ದಾರೆ. ನಗರದಲ್ಲಿ ಉಂಟಾಗುವ ಬ್ಲ್ಯಾಕ್ ಸ್ಪಾಟ್‌ಗಳು ಅಥವಾ ಸ್ವಚ್ಛತೆಗೆ ಸಂಬಂಧಿತ ಸಮಸ್ಯೆಗಳ ಕುರಿತು ದೂರು ಸಲ್ಲಿಸಿದಾಗ, ಅಧಿಕಾರಿಗಳು ಆದ್ಯತೆಯ ಮೇರೆಗೆ ತ್ವರಿತವಾಗಿ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ಶ್ಲಾಘನೀಯವಾಗಿದೆ. ನಗರದಲ್ಲಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತ ಜಾಗೃತಿ ಮೂಡಿಸಲು ಸಿದ್ಧರಿದ್ದೇವೆ ಎಂದು ನಟ ಅನಿರುದ್ಧ್ ಜಟ್ಕರ್ ಹೇಳಿದ್ದಾರೆ.
-
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
ಬೆಂಗಳೂರಲ್ಲಿ 1010 ಆಸ್ತಿದಾರರಿಂದ 33.89 ಕೋಟಿ ರೂ. ಆಸ್ತಿ ತೆರಿಗೆ ಬಾಕಿ: ಆಸ್ತಿದಾರರಿಗೆ ಜಿಬಿಎ ಫೈನಲ್ ವಾರ್ನಿಂಗ್ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications