• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

BTS 2022: 9 ಒಪ್ಪಂದಕ್ಕೆ ಸಾಕ್ಷಿಯಾಗಲಿರುವ 'ಬಿಟಿಎಸ್- 22' ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

|
Google Oneindia Kannada News

ಬೆಂಗಳೂರು, ನವೆಂಬರ್ 15: ವಿಶ್ವದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ಕುರಿತು ಕಾಲ ಕಾಲಕ್ಕೆ ಸಾದರಪಡಿಸುವ 'ಬೆಂಗಳೂರು ತಂತ್ರಜ್ಞಾನ ಶೃಂಗದ ರಜತೋತ್ಸವ' ಸಮಾವೇಶ (ಬಿಟಿಎಸ್- 22) ನವೆಂಬರ್ 16ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಆನ್‌ಲೈನ್‌ ಮೂಲಕ ಬಿಟಿಎಸ್‌ಗೆ ಚಾಲನೆ ನೀಡಲಿದ್ದಾರೆ ಎಂದು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವಥ್‌ ನಾರಾಯಣ್ ತಿಳಿಸಿದರು.

ಏಷ್ಯಾ ಖಂಡದಲ್ಲೇ ಮಹತ್ವದ ತಂತ್ರಜ್ಞಾನ ಸಮಾವೇಶವೊಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಸಂಬಂಧ ಮಂಗಳವಾರ ಅಶ್ವಥ್ ನಾರಾಯಣ್ ಸಿದ್ಧತೆ ಪರಿಶೀಲಿಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

 ಸರ್ಕಾರಿ ಕಚೇರಿಗಳಲ್ಲಿರುವ ಪಿಎಂ ಮೋದಿ ಫೋಟೋ ತೆಗೆಸಿ, ಆಯೋಗಕ್ಕೆ ಎಎಪಿ ಮನವಿ ಸರ್ಕಾರಿ ಕಚೇರಿಗಳಲ್ಲಿರುವ ಪಿಎಂ ಮೋದಿ ಫೋಟೋ ತೆಗೆಸಿ, ಆಯೋಗಕ್ಕೆ ಎಎಪಿ ಮನವಿ

ಒಟ್ಟು 3 ದಿನಗಳ ಕಾಲ ಭೌತಿಕ ಸ್ವರೂಪದಲ್ಲಿ ನಡೆಯಲಿರುವ ಸಮಾವೇಶವು ಕನಿಷ್ಠ 9 ಒಡಂಬಡಿಕೆಗಳಿಗೆ (ಒಪ್ಪಂದ) ಹಾಗೂ 20ಕ್ಕೂ ಹೆಚ್ಚು ಉತ್ಪನ್ನಗಳ ಬಿಡುಗಡೆಗೆ ಸಾಕ್ಷಿಯಾಗಲಿದೆ. ಇದೇ ವೇಳೆ ಬೆಳ್ಳಿಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸಮಾವೇಶದಲ್ಲಿ 575 ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ. ದೇಶದ 16 ವಿವಿಧ ರಾಜ್ಯಗಳ ಸ್ಟಾರ್ಟ್ಅಪ್‌ಗಳು ಪಾಲ್ಗೊಳ್ಳುತ್ತಿವೆ. 350ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪರಿಣತರು ತಂತ್ರಜ್ಞಾನಗಳ ಕುರಿತು ಬೆಳಕು ಚೆಲ್ಲಲಿದ್ದಾರೆ. 5,000ಕ್ಕೂ ಹೆಚ್ಚು ಉದ್ಯಮಿಗಳು ಆಗಮಿಸಲಿದ್ದಾರೆ.

ಬಿಟಿಎಸ್ 22ನಲ್ಲಿ ಏನಿರಲಿದೆ?

ಸಮಾವೇಶದಲ್ಲಿ ಐಓಟಿ, ಡೀಪ್ ಟೆಕ್, ಬಯೋಟೆಕ್, ಸ್ಟಾರ್ಟ್ಅಪ್, ಜಿಐಎ-1 ಹಾಗೂ ಜಿಐಎ-2 ಎಂಬ ಐದು ವಿಭಾಗಗಳಡಿ ಅಂದಾಜು 75 ಗೋಷ್ಠಿಗಳು ನಡೆಯಲಿವೆ. ಕೃತಕ ಬುದ್ಧಿಮತ್ತೆ, ಬಿಗ್ ಡೇಟಾ, ಸೆಮಿಕಂಡಕ್ಟರ್, ಮಷೀನ್ ಲರ್ನಿಂಗ್, 5ಜಿ, ರೋಬೋಟಿಕ್ಸ್, ಫಿನ್ ಟೆಕ್, ಜೀನ್ ಎಡಿಟಿಂಗ್, ಮೆಡಿ ಟೆಕ್, ಸ್ಪೇಸ್ ಟೆಕ್, ಜೈವಿಕ ಇಂಧನ ಸುಸ್ಥಿರತೆ, ಇ- ಸಂಚಾರ ಹೀಗೆ ವಿವಿಧ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕ ಬೆಳವಣಿಗೆಗಳ ಬಗ್ಗೆ ಕಾರ್ಯಕ್ರಮ ಜರುಗಲಿವೆ.

ಜಿಐಎ ವಿಭಾಗದಲ್ಲಿ ಜಪಾನ್, ಫಿನ್ಲೆಂಡ್, ನೆದರ್ಲ್ಯಾಂಡ್, ಡೆನ್ಮಾರ್ಕ್, ಸ್ವೀಡನ್, ಸ್ವಿಜರ್ಲ್ಯಾಂಡ್, ಜರ್ಮನಿ, ಆಸ್ಟ್ರೇಲಿಯಾ, ಅಮೇರಿಕಾ, ಲಿತುವೇನಿಯ, ಕೆನಡಾ ಸೇರಿ 15ಕ್ಕೂ ಹೆಚ್ಚು ದೇಶಗಳ ತಾಂತ್ರಿಕತೆ ವಿಶಿಷ್ಟಗಳು ಅನಾವರಣವಾಗಲಿದೆ. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ ಅಜಯ್ ಕೆ. ಸೂದ್ ಅವರು ಮೊದಲ ದಿನ ಸಂವಾದಗೋಷ್ಠಿ ನಡೆಸಲಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಸಮಾವೇಶಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಜೊತೆಗೆ www bengalurutech.com ವೈಬ್‌ಸೈಟ್‌ ಮೂಲಕವು ವೀಕ್ಷಿಸಬಹುದಾಗಿದೆ. ಈ ವೇಳೆ ಐಟಿ ಬಿಟಿ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

English summary
Bengaluru Tech Summit 2022 (BTS-22) will be inaugurate by PM Narendra Modi on Wednesday, Higher Education minister Dr. CN Ashwath Narayan said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X